ಕೇಂದ್ರ ಸರಕಾರದ ಪೆಟ್ರೋಲ್ ,ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆ ಏರಿಕೆ ಖಂಡಿಸಿ ವೆಲಫೇರ್ ಪಾರ್ಟಿ ಆಫ್ ಇಂಡಿಯಾದ ಕಾರ್ಯಕರ್ತರು ಶುಕ್ರವಾರ ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಇಂಧನ ಬೆಲೆ ಏರಿಕೆಯಿಂದ ದೇಶದಲ್ಲಿ ಎಲ್ಲ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಇದರಿಂದ ಸಾಮಾನ್ಯ ಜನರ ಜೀವನ ದುಸ್ತರವಾಗಿದೆ. ರಾಷ್ಟ್ರಪತಿಗಳು ಮಧ್ಯಪ್ರವೇಶಿಸಿ ಇಂಧನ ಬೆಲೆ ನಿಯಂತ್ರಣಕ್ಕೆ ಸರಕಾರಕ್ಕೆ ಸೂಚನೆ ನೀಡಬೇಕು. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಬ್ಯಾರಲ್ ಒಂದಕ್ಕೆ ೫೨ ರೂ. ಇದೆ. ಆದರೆ ದೇಶದಲ್ಲಿ ಲೀಟರ್ ಪೆಟ್ರೋಲ್ ದರ ೯೦ ಕ್ಕಿಂತ ಅಧಿಕವಾಗಿದೆ. ಇದರಿಂದ ಸಾರಿಗೆ ಹಾಗೂ ಸರಕು ಸಾಗಣೆ ವಾಹನಗಳ ಬೆಲೆಯೂ ಏರಿಕೆಯಾಗಿದ್ದು, ಸಾಮಾನ್ಯ ಜನರು ಸಂಕಷ್ಟಕ್ಕೊಳಗಾಗಿದ್ದಾರೆ ಎಂದು ಪಾರ್ಟಿಯ ಕಾರ್ಯಕರ್ತರು ಮನವಿಯಲ್ಲಿ ತಿಳಿಸಿದ್ದಾರೆ.
ಪ್ರತಿಭಟನೆಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಮುಜಮ್ಮಿರ್ ಅನ್ವರ್, ಅಯೂಬ್ ಸಾಬ್ ಸೇರಿದಂತೆ ಹಲವರು ಭಾಗವಹಿಸಿದ್ದರು.
previous post
next post