ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ತವರು ಜಿಲ್ಲೆ ಶಿವಮೊಗ್ಗದಲ್ಲಿ ನಾಗರೀಕ ಸನ್ಮಾನ ಮಾಡಲು ನಿರ್ಧರಿಸಲಾಗಿದೆ. ಯಡಿಯೂರಪ್ಪ ಅವರ ಹುಟ್ಟು ಹಬ್ಬದ ನಿಮಿತ್ತ ನಮ್ಮೊಲುಮೆ.. ಹೆಸರಿನ ಕಾರ್ಯಕ್ರಮ ಆಯೋಜಿಸಿರುವ ಫೆ.೨೮ ಮತ್ತು ಮಾ.೧ ರಂದು ಎರಡು ದಿನಗಳ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಅಭಿನಂದನಾ ಸಮಿತಿ ತಿಳಿಸಿದೆ
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸೂಡಾ ಅಧ್ಯಕ್ಷ ಜ್ಯೋತಿಪ್ರಕಾಶ್, ಶಿವಮೊಗ್ಗ ಜಿಲ್ಲೆಯ ಹೆಮ್ಮೆಯ ಮುಖ್ಮಮಂತ್ರಿ ಯಡಿಯೂರಪ್ಪ ಅವರನ್ನು ಸನ್ಮಾನಿಸುವುದು ನಮ್ಮೆಲ್ಲರ ಜವಾಬ್ದಾರಿ ಹಾಗಾಗಿ ಈ ನಿರ್ಧಾರ ಮಾಡಲಾಗಿದೆ. ಶಿವಮೊಗ್ಗ ಜಿಲ್ಲೆಯನ್ನು ಮಾದರಿ ಜಿಲ್ಲೆಯಾಗಿ ಅಭಿವೃದ್ಧಿ ಮಾಡಿದ್ದಾರೆ. ಸಾವಿರಾರು ಕೋಟಿ ರೂ. ಅನುದಾನ ತಂದು ಜಿಲ್ಲೆಯನ್ನು ಅಭಿವೃದ್ಧಿ ಮಾಡಿದ್ದಾರೆ. ಇನ್ನೂ ಈ ದಿಸೆಯಲ್ಲಿ ಪ್ರಯತ್ನ ಮಾಡುತ್ತಿದ್ದಾರೆ ಎಂದು ಹೇಳಿದರು.
ಆರ್ಯವೈಶ್ಯ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಡಿ.ಎಸ್.ಅರುಣ್ ಮಾತನಾಡಿ, ಶಿವಮೊಗ್ಗ ಪ್ರೀಡಂ ಪಾರ್ಕಿನಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮವನ್ನು ಖ್ಯಾತ ಗಾಯಕ ವಿಜಯಪ್ರಕಾಶ್, ರಾಜೇಶ್ ಕೃಷ್ಣನ್ ಅವರಿಂದ ಮ್ಯೂಜಿಕಲ್ ನೈಟ್ ಈ ಕಾರ್ಯಕ್ರಮಕ್ಕೆ ಖ್ಯಾತಿ ನಿರೂಪಕಿ ಅನುಶ್ರೀ ಬರಲಿದ್ದಾರೆ ಹಾಗೂ ಮಾ.೧ ರಂದು ಆಳ್ವಾಸ್ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹೇಳಿದರು.
ಗೋಷ್ಠಿಯಲ್ಲಿ ಮಾಜಿ ಶಾಸಕ ಎಚ್.ಎಂ.ಚಂದ್ರಶೇಖರಪ್ಪ, ವಕೀಲ ಬಸಪ್ಪಗೌಡ, ಅಶ್ವತ್ಥನಾರಾಯಣ ಶೆಟ್ಟಿ, ಎ.ಜೆ.ರಾಮಚಂದ್ರ, ಬಳ್ಳೇಕೆರೆ ಸಂತೋಷ್, ಲಕ್ಷ್ಮೀನಾರಾಯಣ ಕಾಶಿ ಮತ್ತಿತರರು ಇದ್ದರು.
previous post
next post