ಕರ್ನಾಟಕ ಪವರ್ ಕಾರ್ಪೊರೇಷನ್, ಯುಪಿಸಿಎಲ್ ಮತ್ತು ಕೇಂದ್ರೀಯ ವಿದ್ಯುತ್ ಉತ್ಪಾದನಾ ಕೇಂದ್ರಗಳ ಉತ್ಪಾದನಾ ಘಟಕಗಳಲ್ಲಿ ತಾಂತ್ರಿಕ ದೋಷ ಕಂಡು ಬಂದಿರುವುದರಿಂದ ಕೆಲವು ಘಟಕಗಳಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತಗೊಂಡಿದೆ. ಈ ಹಿನ್ನೆಲೆಯಲ್ಲಿ ಬೇಡಿಕೆಯಷ್ಟು ವಿದ್ಯುತ್ ಪೂರೈಕೆಯಾಗುತ್ತಿಲ್ಲ ಎಂದು ಮೆಸ್ಕಾಂ ಎಕ್ಸಿಕ್ಯೂಟಿವ್ ಇಂಜಿನಿಯರ್ ತಿಳಿಸಿದ್ದಾರೆ.
ರಾಜ್ಯದ ವಿದ್ಯುತ್ ಜಾಲವು ಒಟ್ಟು 4281ಮೆ.ವ್ಯಾ ಪ್ರಮಾಣದ ವಿದ್ಯುತ್ ಕೊರತೆಯನ್ನು ಎದುರಿಸುತ್ತಿದೆ. ಇದರಿಂದಾಗಿ ಮೆಸ್ಕಾಂಗೆ ಹಂಚಿಕೆಯಾಗುವ ವಿದ್ಯುತ್ ಪ್ರಮಾಣದಲ್ಲಿ ಸುಮಾರು 200 ಮೆ.ವ್ಯಾ ಕೊರತೆಯಾಗುವ ಸಂಭವವಿದೆ. ಆದ್ದರಿಂದ ಮೆಸ್ಕಾಂ ವ್ಯಾಪ್ತಿಯ ಜಿಲ್ಲೆಗಳಲ್ಲಿ ಅನಿಯಮಿತವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಾಸ ಕಂಡು ಬರಲಿದೆ. ನೀರಾವರಿ ಪಂಪ್ ಸೆಟ್‌ಗಳಿಗೆ ಬೆಳಿಗ್ಗೆ 8ರಿಂದ ಸಂಜೆ 4ರವರೆಗೆ ಮತ್ತು ಮಧ್ಯರಾತ್ರಿಯಿಂದ ಬೆಳಿಗ್ಗೆ 4ರವರೆಗೆ ಮಾತ್ರ ವಿದ್ಯುತ್ ಪೂರೈಕೆಯಾಗಲಿದೆ.
ಮುಂದಿನ ವಾರದ ಒಳಗಾಗಿ ವಿದ್ಯುತ್ ಉತ್ಪಾದನೆಯಲ್ಲಿ ಸುಧಾರಣೆ ನಿರೀಕ್ಷಿಸಲಾಗಿದ್ದು, ಗ್ರಾಹಕರು ಸಹಕರಿಸುವಂತೆ ಅವರು ಕೋರಿದ್ದಾರೆ.