ಕೇಂದ್ರ ಸರಕಾರ ಜಾರಿಗೆ ತಂದಿರುವ ಮೂರು ಕೃಷಿಕಾಯಿದೆ ರದ್ದು ಮಾಡಲು ಆಗ್ರಹಿಸಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿದ್ದ ಭಾರತ್ ಬಂದ್‍ಗೆ ಶಿವಮೊಗ್ಗದಲ್ಲಿ ಬೆಂಬಲ ವ್ಯಕ್ತವಾಯಿತು.
ಪೂರ್ವ ನಿರ್ಧಾರದಂತೆ ಶಿವಮೊಗ್ಗ ಜಿಲ್ಲೆಯಲ್ಲಿ ಬಂದ್ ಮಾಡದೆ ಕೃಷಿ ಕಾಯಿದೆಯ ಪ್ರತಿಗಳನ್ನು ದಹಿಸುವ ಮೂಲಕ ರೈತ ಹೋರಾಟಕ್ಕೆ ಬೆಂಬಲ ಸೂಚಿಸಲಾಯಿತು.
ಜಿಲ್ಲಾಧಿಕಾರಿ ಕಚೇರಿ ಮುಂದೆ ಸೇರಿದ ಸಂಯಕ್ತ ಕಿಸಾನ್ ಮೋರ್ಚಾ, ಐಕ್ಯ ಕರ್ನಾಟಕ, ದಸಂಸ, ರಾಜ್ಯ ರೈತಸಂಘ ಹಾಗೂ ನಾನಾ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಕೇಂದ್ರ ಸರಕಾರದ ರೈತ ವಿರೋಧಿ ನೀತಿಯನ್ನು ಖಂಡಿಸಿದರು. ಈ ಸಂದರ್ಭ ರೈತ ಮುಖಂಡ ಎಚ್.ಆರ್.ಬಸವರಾಜಪ್ಪ, ಎಂ.ಶ್ರೀಕಾಂತ್, ಎನ್.ರಮೇಶ್, ಕೆ.ಪಿ.ಶ್ರೀಪಾಲ್, ಕೆ.ಎಲ್.ಅಶೋಕ್, ಪಲ್ಲವಿ, ಎಚ್.ಸಿ.ಯೋಗಿಶ್, ಕಾಶಿವಿಶ್ವನಾಥ್ , ಹಾಲೇಶಪ್ಪ ಸೇರಿದಂತೆ ಅನೇಕ ಮುಖಂಡರು ಭಾಗವಹಿಸಿದ್ದರು.
next post