Malenadu Mitra
ರಾಜಕೀಯ ರಾಜ್ಯ ಶಿವಮೊಗ್ಗ

ಕಾಂಗ್ರೆಸ್ ನಲ್ಲಿ ತೊಟ್ಟಿಯ ಕಸದಂತಾಗಿರುವ ಸಿದ್ದರಾಮಯ್ಯ

ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡ ಮೇಲೆ ಸಿದ್ದರಾಮಯ್ಯ ಅವರಿಗೆ ಹುಚ್ಚು ಹಿಡಿದಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಆರೋಪಿಸಿದರು.

ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆ ನೀಡಬೇಕು ಎಂಬ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಶಿವಮೊಗ್ಗದಲ್ಲಿ ಪ್ರತಿಕ್ರಿಯೆ ನೀಡಿರುವ ಸಚಿವ ಈಶ್ವರಪ್ಪ,ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಅವರು ಲೆಕ್ಕದಲ್ಲೂ ಇಲ್ಲ, ಬುಕ್ನಲ್ಲೂ ಇಲ್ಲ. ತೊಟ್ಟಿಯಲ್ಲಿರುವ ಕಸದಂತಾಗಿದೆ ಸಿದ್ದರಾಮಯ್ಯ ಅವರ ಪರಿಸ್ಥಿತಿ. ಹಾಗಾಗಿ ಮೊದಲು ಅವರು ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ತಿರುಗೇಟು ನೀಡಿದರು.

ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡ ಮೇಲೆ ಸಿದ್ದರಾಮಯ್ಯ ಅವರಿಗೆ ಹುಚ್ಚು ಹಿಡಿದಿದೆ. ಕರ್ನಾಟಕದಲ್ಲಿ ಇಷ್ಟೊಂದು ಅಭಿವೃದ್ಧಿ ಆಗುತ್ತಿರುವುದನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ. ಇದರಿಂದ ಸಿದ್ದರಾಮಯ್ಯ ಅವರಿಗೆ ತಲೆಕೆಟ್ಟು ಹೋಗಿದೆ ಎಂದು ಆರೋಪಿಸಿದರು.

ಮೈಸೂರು ಮೇಯರ್, ಉಪ ಮೇಯರ್ ಚುನಾವಣೆ ಸಂದರ್ಭ, ತಮ್ಮ ಮಾತು ಕೇಳಲಿಲ್ಲ ಎಂದು ನಾಲ್ಕು ದಿನ ಹೋಗಿ ರೆಸಾರ್ಟ್ನಲ್ಲಿ ಕೂತಿದ್ದರು. ಸಿದ್ದರಾಮಯ್ಯ ಅವರಿಗೆ ಅನ್ಯಾಯವಾಗಿದೆ ಎಂದು ರಮೇಶ್ ಕುಮಾರ್ ಅವರೂ ಹೇಳಿದ್ದರು. .

ಬೆಂಗಳೂರಿಗೆ ಹೋಗಿ ಪಟ್ಟಿ ಕೊಡುತ್ತೇನೆ


ಅಧಿಕಾರಿಗಳು ಮಾತು ಕೇಳುತ್ತಿಲ್ಲ, ಸಚಿವರು ಮಾತು ಕೇಳುತ್ತಿಲ್ಲ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ. ನಾಳೆಯೋ, ನಾಡಿದ್ದೋ ಬೆಂಗಳೂರಿಗೆ ಹೋಗುತ್ತೇನೆ. ಸ್ವಾತಂತ್ರ್ಯ ನಂತರ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಏನೇನು ಆಗಿರಲಿಲ್ಲ, ಈಗ ಏನೇನು ಆಗಿದೆ ಅನ್ನುವದರ ಪಟ್ಟಿ ಕೊಡುತ್ತೇನೆ. ನಾವು, ನಮ್ಮ ಅಧಿಕಾರಿಗಳು ಏನೆಲ್ಲ ಕೆಲಸ ಮಾಡಿದ್ದೇವೆ ಎಂದು ತಿಳಿಸುತ್ತೇನೆ ಎಂದರು

Ad Widget

Related posts

ಹರಿಗೆಯಲ್ಲಿ ಯುವಕನ ಕೊಲೆ

Malenadu Mirror Desk

ಶಿವಮೊಗ್ಗದಲ್ಲಿ ಕೊರೊನ ಕೊಂಚ ಇಳಿಕೆ 599 ಸೋಂಕು,7 ಸಾವು

Malenadu Mirror Desk

ರುದ್ರೇಗೌಡರ ಜೀವನ ಯುವಕರಿಗೆ ಸ್ಫೂರ್ತಿ, ಅಭಿನಂದನಾ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಬಣ್ಣನೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.