Malenadu Mitra
ರಾಜ್ಯ ಶಿವಮೊಗ್ಗ

ಆಯುಷ್ಮಾನ್ ಅಡಿ ಕೋವಿಡ್ ಚಿಕಿತ್ಸೆ. ಯಾವುದಕ್ಕೆ ಎಷ್ಟು ಹಣ ಗೊತ್ತಾ ?

ಕೋವಿಡ್ ರೋಗಿಗಳಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಸಾರ್ವಜನಿಕ ಆಸ್ಪತ್ರೆಗಳು ಹಾಗೂ ಖಾಸಗಿ ಆಸ್ಪತ್ರೆಗಳ ಮೂಲಕ ಚಿಕಿತ್ಸೆ ಒದಗಿಸಲಾಗುತ್ತದ್ದು, ಯೋಜನೆಯಡಿ ಇದುವರೆಗೆ ಹೆಸರು ನೋಂದಾಯಿಸದ ಖಾಸಗಿ ಆಸ್ಪತ್ರೆಗಳು ನೋಂದಾಯಿಸಿಕೊಳ್ಳುವಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಮನವಿ ಮಾಡಿದ್ದಾರೆ.

ಯೋಜನೆಯಡಿ ರೆಫರಲ್ ಮೂಲಕ ಸರ್ಕಾರಿ ಕೋಟಾದಡಿ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗುವ ಕೋವಿಡ್ ರೋಗಿಗಳ ವೆಚ್ಚವನ್ನು ಸರ್ಕಾರ ಭರಿಸಲಿದೆ. ಸರ್ಕಾರಿ ಕೋಟಾದ ರೋಗಿಗಳಿಗೆ ರೆಮ್ಡಿಸಿವಿರ್ ಇಂಜೆಕ್ಷನ್ ಉಚಿತವಾಗಿ ಒದಗಿಸಲಾಗುತ್ತದೆ. ಒಂದೊಮ್ಮೆ ಕೋವಿಡ್ ರೋಗಿಗಳು ತಮ್ಮ ಇಚ್ಚಾನುಸಾರ ನೇರವಾಗಿ ಖಾಸಗಿ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದುಕೊಂಡಲ್ಲಿ ಸರ್ಕಾರ ನಿಗದಿಪಡಿಸಿರುವ ಈ ಕೆಳಕಂಡ ಮೊತ್ತವನ್ನು ರೋಗಿಗಳೇ ನೇರವಾಗಿ ಭರಿಸಬೇಕಾಗುತ್ತದೆ. ಜನರಲ್ ವಾರ್ಡ್ 10ಸಾವಿರ ರೂ, ಎಚ್‍ಡಿಯು 12ಸಾವಿರ ರೂ, ಐಸೊಲೇಷನ್ ಐಸಿಯು ವೆಂಟಿಲೇಟರ್ ಇಲ್ಲದೆ 15ಸಾವಿರ ರೂ, ವಿದ್ ವೆಂಟಿಲೇಟರ್ ರೂ. 25ಸಾವಿರ ರೂ. ದರಗಳ ಮಿತಿ ನಿಗದಿಪಡಿಸಲಾಗಿದೆ ಎಂದು ಅವರು ಹೇಳಿದ್ದಾರೆ.

1912 ಗೆ ಕರೆ ಮಾಡಿ

ಖಾಸಗಿ ಆಸ್ಪತ್ರೆಗಳು ಕೋವಿಡ್ ರೋಗಿಗಳನ್ನು ದಾಖಲು ಮಾಡಿಕೊಳ್ಳಲು ನಿರಾಕರಿಸಿದರೆ ಅಥವಾ ಚಿಕಿತ್ಸೆ ನೀಡಲು ವಿಳಂಬ ಮಾಡಿದರೆ ಅಥವಾ ಸರ್ಕಾರ ನಿಗದಿ ಮಾಡಿರುವ ದರಗಳಿಗಿಂತ ಹೆಚ್ಚಿನ ದರ ವಿಧಿಸಿದರೆ 1800 425 8330 ಗೆ ಹಾಗೂ 1912 ಕರೆ ಮಾಡಿ ದೂರು ನೀಡಬಹುದು. 080-22536200 ಗೆ ಕರೆ ಮಾಡಬಹುದು ಎಂದು ಅವರು ಹೇಳಿದ್ದಾರೆ.

Ad Widget

Related posts

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಹೆಸರು, ಸಚಿವ ಸಂಪುಟ ಅನುಮೋದಿಸಿದೆ ಎಂದ ಮುಖ್ಯಮಂತ್ರಿ ಬೊಮ್ಮಾಯಿ

Malenadu Mirror Desk

ಕೋವಿಡ್ ನಿರ್ವಹಣೆ ಸಾಗರ ,ಸೊರಬದಲ್ಲಿ ಸಚಿವರ ಸಭೆ

Malenadu Mirror Desk

ರೈತ ಸಂಘದಿಂದ ಎನ್.ಡಿ.ಸುಂದರೇಶ್ ಸ್ಮರಣೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.