Malenadu Mitra
ರಾಜ್ಯಶಿವಮೊಗ್ಗ

14 ದಿನ ಜನತಾ ಕರ್ಫ್ಯೂ, ನಿಯಂತ್ರಣಕ್ಕೆ ಬಾರದಿದ್ದಲ್ಲಿ ಮತ್ತೊಂದು ವಾರ ಮುಂದುವರಿಯಲಿದೆ : ಮುಖ್ಯಮಂತ್ರಿ ಯಡಿಯೂರಪ್ಪ ಘೋಷಣೆ

ಕೋವಿಡ್ -19 ಸೋಂಕು ರಾಜ್ಯದಲ್ಲಿ ಮಿತಿಮೀರುತ್ತಿದ್ದು, ಅದಕ್ಕೆ ಬ್ರೇಕ್ ಹಾಕುವ ದೃಷ್ಟಿಯಿಂದ ರಾಜ್ಯದಲ್ಲಿ ಅನಿವಾರ್ಯವಾಗಿ 14 ದಿನ ಜನತಾ ಕರ್ಫ್ಯೂ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ರಾಜ್ಯ ಸಚಿವ ಸಂಪುಟಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳವಾರ ರಾತ್ರಿಯಿಂದಲೇ ಲಾಕ್‍ಡೌನ್ ಜಾರಿಯಾಗಲಿದ್ದು, ಆರೋಗ್ಯ ಮತ್ತು ಅಗತ್ಯವಸ್ತುಗಳ ಸೇವೆ ಹೊರತುಪಡಿಸಿದ ಎಲ್ಲಾ ಚಟುವಟಿಕೆಗಳೂ ಬಂದ್ ಆಗಲಿವೆ. ತಜ್ಞರೊಂದಿಗೆ ವಿವರವಾದ ಚರ್ಚೆ ಮಾಡಲಾಗಿದೆ. ಕೋವಿಡ್ ನಿಯಂತ್ರಣಕ್ಕೆ ಲಾಕ್ ಡೌನ್ ಅನಿವಾರ್ಯ. ಇದು ಇಡೀ ರಾಜ್ಯಕ್ಕೆ ಅನ್ವಯಿಸಲಿದೆ. ಪ್ರತಿದಿನ ಬೆಳಗ್ಗೆ 6 ರಿಂದ 10 ಗಂಟೆವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗುವುದು ಎಂದು ಹೇಳಿದರು.
ರಾತ್ರಿ 9ರಿಂದ ಬೆಳಗ್ಗೆ 6 ರವರೆಗೆ ಕಟ್ಟುನಿಟ್ಟಿನ ಲಾಕ್‍ಡೌನ್ ಇರಲಿದೆ. ಜಿಲ್ಲಾಧಿಕಾರಿಗಳು ಉಸ್ತುವಾರಿ ನೋಡಿಕೊಳ್ಳಬೇಕು. ತಾಲೂಕು ಮಟ್ಟದ ಅಧಿಕಾರಿಗಳು ನೋಡಲ್ ಅಧಿಕಾರಿಗಳಾಗಿ ಕಾರ್ಯನಿರ್ವಹಿಸುವರು ಎಂದು ಮುಖ್ಯಮಂತ್ರಿ ಹೇಳಿದರು.
ಒಂದು ವೇಳೆ ಹದಿನಾಲ್ಕು ದಿನಗಳಲ್ಲಿ ಕೊರೊನ ನಿಯಂತ್ರಣಕ್ಕೆ ಬಾರದಿದ್ದಲ್ಲಿ ಮತ್ತೊಂದು ವಾರ ಕಾಲ ಲಾಕ್‍ಡೌನ್ ಮುಂದುವರಿಯಲಿದೆ. ಸಾರ್ವಜನಿಕರು ಸ್ಯಾನಿಟೈಸರ್, ಮಾಸ್ಕ್ ಬಳಸುವ ಮೂಲಕ ಸರಕಾರದೊಂದಿಗೆ ಸಹಕರಿಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಮನವಿ ಮಾಡಿದರು.

ಉತ್ಪಾದನಾ ಕ್ಷೇತ್ರಕ್ಕೆ ವಿನಾಯಿತಿ
ಕೃಷಿ ಪರಿಕರ ಮಾರಾಟಕ್ಕೆ ಬೆಳಗ್ಗೆ 6 ರಿಂದ 10 ರವರೆಗೆ ಅವಕಾಶ
ಜನತಾ ಕಫ್ರ್ಯೂವೇಳೆ ಈ ಬಾರಿ ಮದ್ಯದ ಮಾರಾಟಕ್ಕೆ ಅವಕಾಶ
ಸಾರಿಗೆ ವ್ಯವಸ್ಥೆ ಸಂಪೂರ್ಣ ಬಂದ್

Ad Widget

Related posts

ಶಿವಮೊಗ್ಗದಲ್ಲಿ 11.5 ಲಕ್ಷ ಮೌಲ್ಯದ ಆಭರಣ ಕಳ್ಳತನ

Malenadu Mirror Desk

ಸಂಸದರಿಂದ ಶಿಷ್ಟಾಚಾರ ಉಲ್ಲಂಘನೆ : ಆಯನೂರು ಆರೋಪ

Malenadu Mirror Desk

ಕನ್ನಡದಲ್ಲಿ ತಾಂತ್ರಿಕ ಶಿಕ್ಷಣದ ಕಲಿಕೆಗೆ ವಿಟಿಯು ಹೆಚ್ಚು ಒತ್ತು ನೀಡುತ್ತಿದೆ: ಉಪಕುಲಪತಿ ಪ್ರೊ.ಎಸ್.ವಿದ್ಯಾಶಂಕರ್

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.