ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿದ್ದಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಗುರುವಾರ ತೀರ್ಥಹಳ್ಳಿ ಹಾಗೂ ಹೊಸನಗರ ತಾಲೂಕಿನಲ್ಲಿ ಕೋವಿಡ್ ನಿರ್ವಹಣೆ ಕುರಿತಾದ ಪ್ರಗತಿ ಪರಿಶೀಲನೆ ನಡೆಸಿದ ಅವರು, ಶೂಕ್ರವಾರ ಸಾಗರ ಹಾಗೂ ಸೊರಬ ಕ್ಕೆ ಭೇಟಿ ನೀಡಿದರು. ಎರಡೂ ತಾಲೂಕುಗಳಲ್ಲೂ ಕೊರೊನ ಪ್ರಕರಣಗಳು ಹೆಚ್ಚಾಗಿ ವರದಿಯಾಗಿದೆ. ಬೆಂಗಳೂರು ಸೇರಿದಂತೆ ದೊಡ್ಡ ನಗರಗಳಿಂದ ಜನರು ಊರಿಗೆ ಬಂದಿದ್ದು,ಸೋಂಕು ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಗ್ರಾಮ ಪಂಚಾಯಿತಿ ಮಟ್ಟದ ಟಾಸ್ಕ್ ಫೋರ್ಸ್ ಈ ನಿಟ್ಟಿನಲ್ಲಿ ಹೆಚ್ಚಿನ ನಿಗಾ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಂಸದ ಬಿ.ವೈ.ರಾಘವೇಂದ್ರ , ಶಾಸಕರು ಹಾಗೂ ಎಂ.ಎಸ್.ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪ ಸಾಗರದಲ್ಲಿ ಮತ್ತು ಸೊರಬದಲ್ಲಿ ಶಾಸಕ ಕುಮಾರ ಬಂಗಾರಪ್ಪ ಸಭೆಯಲ್ಲಿ ಭಾಗವಹಿಸಿ ಸ್ಥಳೀಯವಾಗಿ ಅಗತ್ಯವಿರುವ ಸೌಲಭ್ಯಗಳ ಬಗ್ಗೆ ಸಚಿವರ ಗಮನ ಸೆಳೆದರು. ಸಾಗರದಲ್ಲಿ ಲಸಿಕೆ ಕೊರತೆ ಇರುವ ಬಗ್ಗೆ ಶಾಸಕರು ಆರೋಗ್ಯ ಇಲಾಖೆ ಅಧಿಕಾರಿಗಳ ಗಮನ ಸೆಳೆದರು