ಶಿವಮೊಗ್ಗ ಜಿಲ್ಲೆಯಲ್ಲಿ ಸೋಮವಾರ 791 ಕೊರೊನ ಸೋಂಕು ಪತ್ತೆಯಾಗಿದ್ದು, ಏಳು ಮಂದಿ ಸೋಂಕಿತರು ಅಸುನೀಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 405ಕ್ಕೆ ಏರಿದೆ. ಶಿವಮೊಗ್ಗ ತಾಲೂಕಿನಲ್ಲಿ 261ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಭದ್ರಾವತಿಯಲ್ಲಿ 106,ಶಿಕಾರಿಪುರ 33,ತೀರ್ಥಹಳ್ಳಿಯಲ್ಲಿ 81 ,ಸೊರಬ 21,ಸಾಗರ 197,ಹೊಸನಗರ 69 ಹಾಗೂ ಇತರೆ ಜಿಲ್ಲೆಗಳ 23ರೋಗಿಗಳಲ್ಲಿ ಸೋಂಕು ಪತ್ತೆಯಾಗಿದೆ. 40 ಮಂದಿ ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಪ್ರಸ್ತುತ3519 ಸಕ್ರಿಯ ಪ್ರಕರಣಗಳಿವೆ. ಸೋಮವಾರ 442 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
previous post
next post