ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಆತಂಕ ಹೆಚ್ಚಾಗಿದ್ದು, ಬುಧವಾರ ಒಂದೇ ದಿನ 26 ಸೋಂಕಿತರು ಸಾವಿಗೀಡಾಗಿದ್ದಾರೆ.
ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆಯಾದರೂ ಸೋಂಕಿತರು ಮತ್ತು ಸಾವಿಗೀಡಾಗುವವರ ಸಂಖ್ಯೆ ಹೆಚ್ಚುತ್ತಿರುವುದು ಜಿಲ್ಲಾಡಳಿತಕ್ಕೆ ತಲೆನೋವಾಗಿದೆ.
ಖಾಸಗಿ ಆಸ್ಪತ್ರೆಗಳಲ್ಲಿ ಸೂಕ್ತ ವೆಂಟಿಲೇಟರ್ ಮತ್ತು ಆಕ್ಸಿಜನ್ ಲಭ್ಯವಿಲ್ಲದೇ ಕೈಮೀರುತ್ತಿರುವ ಪ್ರಕರಣಗಳ ಸಂಖ್ಯೆಯೂ ಹೆಚ್ಚುತ್ತಿದೆ ಎನ್ನಲಾಗಿದೆ.
ಈ ನಡುವೆ ಮೆಗ್ಗಾನ್ ಆಸ್ಪತ್ರೆ ಕೋವಿಡ್ ವಾರ್ಡ್ ಸಂಫೂರ್ಣ ಭರ್ತಿಯಾಗಿದ್ದು, ಒಳರೋಗಿಗಳ ಸಂಖ್ಯೆ ಹೆಚ್ಚುತ್ತಲೇ ಇದೆ.
ಬುಧವಾರ ಜಿಲ್ಲೆಯಲ್ಲಿ 1067 ಮಂದಿಗೆ ಸೋಂಕು ತಗುಲಿದ್ದು, 597 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 542ಕ್ಕೆ ಏರಿದೆ. ಶಿವಮೊಗ್ಗ ತಾಲೂಕಿನಲ್ಲಿ 333 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಭದ್ರಾವತಿಯಲ್ಲಿ 177, ಶಿಕಾರಿಪುರ 81, ತೀರ್ಥಹಳ್ಳಿಯಲ್ಲಿ 78 ,ಸೊರಬ 107, ಸಾಗರ 193, ಹೊಸನಗರ 59 ಹಾಗೂ ಇತರೆ ಜಿಲ್ಲೆಗಳ 39 ರೋಗಿಗಳಲ್ಲಿ ಸೋಂಕು ಪತ್ತೆಯಾಗಿದೆ. 40 ಮಂದಿ ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಪ್ರಸ್ತುತ 6514 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
previous post
next post