ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಆತಂಕ ಮುಂದುವರಿದಿದ್ದು, ಗುರುವಾರವೂ 1056 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಒಟ್ಟು 10 ಮಂದು ಸಾವಿಗೀಡಾಗಿದ್ದಾರೆ.
ಜಿಲ್ಲೆಯಲ್ಲಿ ಗುರುವಾರ 436 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ552 ಕ್ಕೆ ಏರಿದೆ. ಶಿವಮೊಗ್ಗ ತಾಲೂಕಿನಲ್ಲಿ 294ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಭದ್ರಾವತಿಯಲ್ಲಿ 277 ಶಿಕಾರಿಪುರ 75 ತೀರ್ಥಹಳ್ಳಿಯಲ್ಲಿ 47ಸೊರಬ 102, ಸಾಗರ 169 ಹೊಸನಗರ 68 ಹಾಗೂ ಇತರೆ ಜಿಲ್ಲೆಗಳ 24 ರೋಗಿಗಳಲ್ಲಿ ಸೋಂಕು ಪತ್ತೆಯಾಗಿದೆ. 55ಮಂದಿ ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಪ್ರಸ್ತುತ 7134 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
previous post
next post