ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಆತಂಕ ಮುಂದುವರಿದಿದ್ದು, ಸಾವಿನ ಸಂಖ್ಯೆ ಇಳಿಕೆಯಾಗಿದ್ದು, ಶುಕ್ರವಾರದ ಮಟ್ಟಿಗೆ ಕೊಂಚ ಸಮಾಧಾನದ ಸಂಗತಿ.
ಜಿಲ್ಲೆಯಲ್ಲಿ 720 ಮಂದಿಗೆ ಸೋಂಕು ತಗುಲಿದ್ದು, 577 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 557ಕ್ಕೆ ಏರಿದೆ. ಶಿವಮೊಗ್ಗ ತಾಲೂಕಿನಲ್ಲಿ 209 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಭದ್ರಾವತಿಯಲ್ಲಿ 103, ಶಿಕಾರಿಪುರ 41, ತೀರ್ಥಹಳ್ಳಿಯಲ್ಲಿ61,ಸೊರಬ78, ಸಾಗರ 171 ಹೊಸನಗರ 31 ಹಾಗೂ ಇತರೆ ಜಿಲ್ಲೆಗಳ 26 ರೋಗಿಗಳಲ್ಲಿ ಸೋಂಕು ಪತ್ತೆಯಾಗಿದೆ. 28 ಮಂದಿ ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಪ್ರಸ್ತುತ 7277ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
previous post