ಭಾರತೀಯ ರೆಡ್ ಕ್ರಾಸ್ ಸಂಸ್ಥೆಯಿಂದ ಶಿವಮೊಗ್ಗದ ಮೆಗ್ಗಾನ್ ಬೋಧನಾ ಆಸ್ಪತ್ರೆಗೆ 16 ಲಕ್ಷ ಮೌಲ್ಯದ ವೆಂಟಿಲೇಟರ್ ಹಾಗೂ 2ಲಕ್ಷ ಮೌಲ್ಯದ ಆಕ್ಸಿಜನ್ ಕಾನ್ಸಂಟ್ರೇಟರ್ ಮತ್ತಿತರ ಪರಿಕರಗಳನ್ನು ಕೊಡುಗೆಯಾಗಿ ನೀಡಲಾಯಿತು.
ಸಂಸ್ಥೆಯ ಉಪಾಸಭಾಪತಿ ಡಾ. ವಿಎಲ್‍ಎಸ್ ಕುಮಾರ್, ಶಿವಮೊಗ್ಗದ ಎಸ್.ಪಿ.ದಿನೇಶ್, ಜಿಲ್ಲಾ ಘಟಕದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಶಿವಮೊಗ್ಗ ಮೆಡಿಕಲ್ ಕಾಲೇಜು ನಿರ್ದೇಶಕ ಡಾ.ಸಿದ್ದಪ್ಪ ಅವರಿಗೆ ಉಪಕರಣಗಳನ್ನು ಹಸ್ತಾಂತರಿಸಿದರು.
ಕೊರೊನದಿಂದ ಜನರು ಸಂಕಷ್ಟದಲ್ಲಿದ್ದಾರೆ. ಅವರ ನೆರವಿಗೆ ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಶ್ರಮಿಸುತ್ತಿದೆ. ಸಂಸ್ಥೆ ಜತೆಗೆ ಸಾರ್ವಜನಿಕರು ಕೈಜೋಡಿಸಬಹುದು. ತಮ್ಮ ನೆರವನ್ನು ಸಂಸ್ಥೆಗೆ ತಂದು ಕೊಟ್ಟರೆ, ಅದನ್ನು ಸಂತ್ರಸ್ಥರಿಗೆ ತಲುಪಿಸಲಾಗುವುದು. ಸರಕಾರಿ ಆಸ್ಪತ್ರೆಗಳಿಗೆ ನೇರವಾಗಿಯೂ ತಲುಪಿಸಬಹುದು. ಸಂಸ್ಥೆಯು ಪಿಪಿಟಿ ಕಿಟ್‍ಗಳನ್ನು ಪೂರೈಕೆ ಮಾಡಲಿದೆ
– -ಎಸ್.ಪಿ.ದಿನೇಶ್, ಸಭಾಪತಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ , ಶಿವಮೊಗ್ಗ ಜಿಲ್ಲೆ