Malenadu Mitra
ರಾಜ್ಯಶಿವಮೊಗ್ಗ

ಕೊರೊನ: 19 ಸಾವು, 884 ಮಂದಿ ಡಿಸ್ಚಾರ್ಜ್

ಮಲೆನಾಡಿನಲ್ಲಿ ಕೊರೊನ ಅಬ್ಬರ ಮುಂದುವರಿದಿದ್ದು ಶಿವಮೊಗ್ಗ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ ಕಡಿಮೆಯಾಗುತ್ತಿಲ್ಲ. ಬುಧವಾರ 19 ಮಂದಿ ಸಾವಿಗೀಡಾಗಿದ್ದು, ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 635ಕ್ಕೇರಿದೆ. ಬುಧವಾರ 810 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಸುರಕ್ಷಿತ ಕ್ರಮಗಳ ನಡುವೆಯೂ ಸೋಂಕಿನ ಪ್ರಮಾಣ ಹೆಚ್ಚಾಗಿರುವುದು ಅತಂಕಕ್ಕೆ ಕಾರಣವಾಗಿದೆ. ಇದೇ ವೇಳೆ 884 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಶಿವಮೊಗ್ಗ ತಾಲೂಕಿನಲ್ಲಿ 216,ಭದ್ರಾವತಿಯಲ್ಲಿ 133,ತೀರ್ಥಹಳ್ಳಿಯಲ್ಲಿ 62, ಶಿಕಾರಿಪುರ 94, ಸಾಗರ 140,ಹೊಸನಗರ 19,ಸೊರಬ 128 ಹಾಗೂ ಇತರೆ ಜಿಲ್ಲೆಯ 18 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.
ಸೋಂಕಿತರ ಪೈಕಿ 29 ಮಂದಿ ವಿದ್ಯಾರ್ಥಿಗಳಿದ್ದಾರೆ. ಜಿಲ್ಲೆಯಲ್ಲಿ 6882 ಸಕ್ರಿಯ ಕೊರೊನ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ತಿಳಿಸಿದೆ.

Ad Widget

Related posts

ಶಿವಮೊಗ್ಗದಲ್ಲಿ ಭಾರೀ ಮಳೆ,ಮನೆಗಳಿಗೆ ನೀರು

Malenadu Mirror Desk

ಫ್ಲೆಕ್ಸ್ ಗಲಾಟೆ ಚಾಕು ಇರಿತ ಒಬ್ಬನಿಗೆ ಮಾತ್ರ, ಅಮಾಯಕನ ಮೇಲೆ ಹಲ್ಲೆ ಮಾಡಿದ ದುಷ್ಕರ್ಮಿಗಳು, ನಗರಾದ್ಯಂತ ಮೂರು ದಿನ ನಿಷೇದಾಜ್ಞೆ, ಶಾಲೆಗಳಿಗೆ ಮಂಗಳವಾರ ರಜೆ

Malenadu Mirror Desk

ಅಮ್ಮನ ಶವ ಮನೆಯಲ್ಲಿದ್ದರೂ ಪರೀಕ್ಷೆ ಬರೆದ ಮಾದರಿ ಹುಡುಗಿ ಸ್ಫೂರ್ತಿ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.