Malenadu Mitra
Uncategorized

ಕಂಟೈನ್‌ಮೆಂಟ್ ಪ್ರದೇಶಗಳಲ್ಲಿ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಕೊರೊನ ಪ್ರಕರಣಗಳು 10ಕ್ಕಿಂತ ಹೆಚ್ಚು ಇರುವ ಪ್ರದೇಶಗಳನ್ನು ಕಡ್ಡಾಯವಾಗಿ ಕಂಟೈನ್‌ಮೆಂಟ್ ವಲಯವಾಗಿ ಗುರುತಿಸಿ ಅಲ್ಲಿನ ನಿವಾಸಿಗಳ ಸಂಚಾರಕ್ಕೆ ಸಂಪೂರ್ಣ ನಿರ್ಬಂಧ ವಿಧಿಸಬೇಕು ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸೂಚನೆ ನೀಡಿದರು.

ಅವರು ಗುರುವಾರ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಕೊರೊನನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಪರಿಶೀಲನೆ ನಡೆಸಿದರು.

ಕಂಟೈನ್‌ಮೆಂಟ್ ಪ್ರದೇಶದ ಪ್ರತಿ ಮನೆಗಳಿಗೆ ಆಶಾ ಕಾರ್ಯಕರ್ತೆಯರು ಪ್ರತಿದಿನ ಭೇಟಿ ನೀಡಿ ಆರೋಗ್ಯ ಸ್ಥಿತಿಗತಿ ಪರಿಶೀಲನೆ ನಡೆಸಬೇಕು. ರೋಗ ಲಕ್ಷಣವಿರುವ ಪ್ರತಿಯೊಬ್ಬರಿಗೂ ಕೊರೊನ ಪರೀಕ್ಷೆಯನ್ನು ನಡೆಸಲು ಕ್ರಮ ಕೈಗೊಳ್ಳಬೇಕು. ಅಗತ್ಯ ಸಾಮಾಗ್ರಿಗಳನ್ನು ಅಗತ್ಯವಿರುವವರಿಗೆ ಮನೆಯ ಬಾಗಿಲಿಗೆ ತಲುಪಿಸಬೇಕು. ಕಂಟೈನ್‌ಮೆಂಟ್ ನಿಯಮಗಳನ್ನು ಉಲ್ಲಂಘಿಸುವವರ ಮೇಲೆ ನಿಗಾ ಇರಿಸಲು ವಿವಿಧ ಇಲಾಖೆಗಳ ಅಧಿಕಾರಿಗಳನ್ನು ನಿಯೋಜಿಸಬೇಕು. ನಿಯಮ ಉಲ್ಲಂಘಿಸುವವರನ್ನು ಗುರುತಿಸಿ ಮೊಬೈಲ್‌ನಲ್ಲಿ ಛಾಯಾಚಿತ್ರ ಅಥವಾ ವಿಡಿಯೋ ತೆಗೆದು ಪೊಲೀಸರಿಗೆ ದೂರು ನೀಡಬೇಕು ಎಂದು ಹೇಳಿದರು.

ಹಾಟ್‌ಸ್ಪಾಟ್ ಗುರುತಿಸಿ

ಗ್ರಾಮೀಣ ಭಾಗದಲ್ಲಿ ಕೆಲವು ಪ್ರದೇಶಗಳಲ್ಲಿ ಕೊರೊನ ಪ್ರಕರಣಗಳು ಹೆಚ್ಚಿನ ಪ್ರಮಾಣದಲ್ಲಿ ವರದಿಯಾಗುತ್ತಿವೆ. ಗಡಿಭಾಗದ ಗ್ರಾಮಗಳಲ್ಲಿ ಇಂತಹ ಪ್ರಕರಣಗಳು ವರದಿಯಾಗುತ್ತಿವೆ. ಅಂತಹ ಕರೋನಾ ಹಾಟ್‌ಸ್ಪಾಟ್‌ಗಳನ್ನು ಗುರುತಿಸಿ ಕರೋನಾ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು. ಅಂತಹ ಕಡೆಗಳಲ್ಲಿ ಸಂಚಾರಿ ವಾಹನಗಳ ಮೂಲಕ ಕರೋನಾ ಪರೀಕ್ಷೆ ನಡೆಸುವಂತೆ ತಹಶೀಲ್ದಾರ್‌ಗಳಿಗೆ ಸೂಚಿಸಿದರು.

ಗ್ರಾಮೀಣ ಪ್ರದೇಶಗಳಲ್ಲಿ ಮಾತ್ರವಲ್ಲದೆ ನಗರ ಪ್ರದೇಶಗಳಲ್ಲೂಕೊರೊನ ಪಾಸಿಟಿವ್ ವ್ಯಕ್ತಿಗಳಿಗೆ ಹೋಂ ಐಸೋಲೇಷನ್‌ಗೆ ಅವಕಾಶ ನೀಡದೆ, ಕೋವಿಡ್ ಕೇರ್ ಸೆಂಟರ್‌ನಲ್ಲಿ ದಾಖಲಿಸಬೇಕು. ಖಾಸಗಿ ಆಸ್ಪತ್ರೆ ಮತ್ತು ಕ್ಲಿನಿಕ್‌ಗಳಲ್ಲಿ ಚಿಕಿತ್ಸೆಗೆ ಆಗಮಿಸುವ ಕೊರೊನ ಲಕ್ಷಣವಿರುವ ವ್ಯಕ್ತಿಗಳ ವಿವರಗಳನ್ನು ಕಡ್ಡಾಯವಾಗಿ ಪಡೆಯಬೇಕು. ಅಂತಹ ಮಾಹಿತಿಯನ್ನು ನಿಗದಿತ ನಮೂನೆಯಲ್ಲಿ ಒದಗಿಸಲು ವಿಫಲರಾಗುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇದೇ ರೀತಿ ಅಧಿಕೃತ ಪರವಾನಿಗೆ ಪಡೆಯದೆ ವೈದ್ಯಕೀಯ ಚಿಕಿತ್ಸೆ ನೀಡುವ ನಕಲಿ ವೈದ್ಯರ ವಿರುದ್ಧ ಕಾರ್ಯಾಚರಣೆ ನಡೆಸುವಂತೆ ಅವರು ತಿಳಿಸಿದರು.

Ad Widget

Related posts

ಶಿವಮೊಗ್ಗದಿಂದ ಚೆನ್ನೈ, ಹೈದರಾಬಾದ್ ಗೆ ವಿಮಾನ :ನೂತನ ಮಾರ್ಗದಲ್ಲಿ ಸ್ಪೈಸ್‌ ಜೆಟ್‌ ಸಂಚಾರ

Malenadu Mirror Desk

ಬಿಜೆಪಿಯಿಂದ ಶ್ರೀಮಂತರ ಓಲೈಕೆ: ತೀರ್ಥಹಳ್ಳಿಯಲ್ಲಿ ಕಿಮ್ಮ‌ನೆ ರತ್ನಾಕರ ಹೇಳಿಕೆ

Malenadu Mirror Desk

ಹಾಲು ಉತ್ಪಾದಕರ ಬೆನ್ನಿಗೆ ಶಿಮುಲ್ : ಶ್ರೀಪಾದ ನಿಸರಾಣಿ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.