ಮಲೆನಾಡಿನಲ್ಲಿ ಕೊರೊನ ಆರ್ಭಟ ಜೋರಾಗಿದ್ದು, ಭಾನುವಾರ ಒಂದೇ ದಿನ 12 ಮಂದಿ ಸಾವಿಗೀಡಾಗಿದ್ದಾರೆ. ಸೋಂಕಿತರ ಸಂಖ್ಯೆ 626 ಆಗಿದ್ದು, 645 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಶಿವಮೊಗ್ಗ ತಾಲೂಕಿನಲ್ಲಿ ಅತಿಹೆಚ್ಚು ಅಂದರೆ 213 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಭದ್ರಾವತಿಯಲ್ಲಿ 120,ಶಿಕಾರಿಪುರದಲ್ಲಿ69,ತೀರ್ಥಹಳ್ಳಿಯಲ್ಲಿ 92 ,ಸೊರಬ 15 ಸಾಗರದಲ್ಲಿ62, ಹೊಸನಗರದಲ್ಲಿ 42 ಸೋಂಕು ಪತ್ತೆಯಾಗಿದೆ.
ಹೊರಜಿಲ್ಲೆಯಿಂದ ಬಂದ 13 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. 10 ಮಂದಿ ವಿದ್ಯಾರ್ಥಿಗಳಲ್ಲೂ ಸೋಂಕು ಕಂಡುಬಂದಿದೆ. ಜಿಲ್ಲೆಯಲ್ಲಿ ಪ್ರಸ್ತುತ ಒಟ್ಟು 7230 ಸಕ್ರಿಯ ಕೋವಿಡ್ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.