ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಎಂ ಶಿವಣ್ಣ (ಕೋಟೆ) ಶಿವಮೊಗ್ಗ ಜಿಲ್ಲೆಗೆ ಆಗಮಿಸಿ ಕೋವಿಡ್-19 ರ ಹಿನ್ನಲೆಯಲ್ಲಿ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸ್ವಚ್ಛತಾಗಾರರು/ಪೌರ ಕಾರ್ಮಿಕರುಗಳಿಗೆ ನೀಡಿರುವ ಸೌಲಭ್ಯಗಳು ಹಾಗೂ ಕೈಗೊಂಡಿರುವ ಕ್ರಮದ ಬಗ್ಗೆ ಜಿಲ್ಲೆಯ ಎಲ್ಲಾ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳ ಜೊತೆಯಲ್ಲಿ “ವೀಡಿಯೋ ಸಂವಾದ” ನಡೆಸಿ ಅಗತ್ಯ ಮಾಹಿತಿ ಪಡೆದರು. ಸಭೆಯಲ್ಲಿ ಜಿ.ಪಂ ಸಿ.ಇ.ಓ ವೈಶಾಲಿ ಎಂ ಎಲ್, ಆಯೋಗದ ಕಾರ್ಯದರ್ಶಿ ಶ್ರೀಮತಿ ರಮಾ, ಉಪ ಕಾರ್ಯದರ್ಶಿ ಕೆ ಜಯಲಕ್ಷಮ್ಮ, ಉಪ ಕಾರ್ಯದರ್ಶಿ ಡಾ: ಎಸ್ ರಂಗಸ್ವಾಮಿ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ನಾಗರಾಜ್ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
previous post
next post