ಶಿವಮೊಗ್ಗ ಸೋಗಾನೆ ವಿಮಾನ ನಿಲ್ದಾಣ ಕಟ್ಟದ ವಿನ್ಯಾಸವನ್ನು (ಬ್ಲೂಪ್ರಿಂಟ್) ಜಿಲ್ಲಾಡಳಿತ ಬದಲಾಯಿಸದಿದ್ದರೆ ನ್ಯಾಯಾಲಯದ ಮೊರೆ ಹೋಗುವುದಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್. ಸುಂದರೇಶ್ ಹೇಳಿದರು.
ಗುರುವಾರ ಪತ್ರಿಕಾಗೋಷ್ಠಿಯಲಿ ಮಾತನಾಡಿದ ಅವರು, ಬಿಜೆಪಿಯ ಕಮಲದ ಚಿಹ್ನೆ ರೀತಿಯಲ್ಲಿ ಇಡೀ ಕಟ್ಟಡವನ್ನು ವಿನ್ಯಾಸಗೊಳಿಸಲಾಗಿದೆ. ವಿಮಾನ ನಿಲ್ದಾಣದ ಕಟ್ಟಡದಲ್ಲಿಯೂ ಪಕ್ಷದ ಚಿಹ್ನೆ ಮೂಲಕ ಪ್ರಚಾರ ಗಿಟ್ಟಿಸಿಕೊಳ್ಳಲು ಬಿಜೆಪಿಯವರು ಯತ್ನಿಸುತ್ತಿದ್ದಾರೆ. ಇದಕ್ಕೆ ಜಿಲ್ಲಾಡಳಿತ ಸಹಮತ ನೀಡುತ್ತಿದೆ ಎಂದು ದೂರಿದರು.
ಬಿಜೆಪಿ ಆಡಳಿತದಲ್ಲಿದ್ದಾಕ್ಷಣ ಕಮಲದ ಚಿಹ್ನೆ ರೀತಿಯಲ್ಲಿಯೇ ಕಟ್ಟಡವನ್ನು ವಿನ್ಯಾಸಗೊಳಿಸಬೇಕೆಂದಿಲ್ಲ. ಪಕ್ಷದ ಫಂಡ್ನಿಂದ ವಿಮಾನ ನಿಲ್ದಾಣ ಮಾಡಿಲ್ಲ. ಜನರ ಹಣ ಇದಕ್ಕೆ ಹಾಕಲಾಗಿದೆ. ಇದರಿಂದಾಗಿ ಕಟ್ಟಡದ ವಿನ್ಯಾಸ ಬದಲಾಯಿಸಬೇಕು. ಜಿಲ್ಲೆಯ ಸಾಹಿತಿಗಳು ಅಥವಾ ಹೋರಾಟಗಾರರ ಹೆಸರು ನಿಲ್ದಾಣಕ್ಕೆ ನಾಮಕರಣ ಮಾಡಬೇಕೆಂದ ಅವರು,100 ಕೋಟಿಯಲ್ಲಿ ಪೂರ್ಣಗೊಳ್ಳಬೇಕಿದ್ದ ನಿಲ್ದಾಣಕ್ಕೆ400ಕೋಟಿ ವೆಚ್ಚ ತೋರಿಸಲಾಗಿದೆ. ಇದರಿಂದಾಗಿ ಕಿಕ್ ಪಡೆದಿರುವ ಅನುಮಾನ ವ್ಯಕ್ತವಾಗುತ್ತಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಎಂಎಲ್‌ಎಸಿ ಆರ್. ಪ್ರಸನ್ನಕುಮಾರ್, ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್, ಮುಖಂಡರಾದ ವಿಶ್ವನಾಥಕಾಶಿ, ಯಮುನಾ ರಂಗೇಗೌಡ, ಚಂದ್ರಶೇಖರ್, ನಾಗರಾಜ್, ರಘು ಮೊದಲಾದವರು ಇದ್ದರು.
previous post