ಪವಿತ್ರ ರಾಮಯ್ಯ ಅವರ ಕೆಲಸ ಎಲ್ಲರಿಗೂ ಮಾದರಿ. ಅಧಿಕಾರ ವಹಿಸಿಕೊಂಡ ದಿನದಿಂದ ರೈತರನ್ನು ಭೇಟಿ ಮಾಡಿ ಸಮಸ್ಯೆಗಳನ್ನು ಅಲಿಸುತ್ತಿರುವುದು, ಅಚ್ಚುಕಟ್ಟು ವ್ಯಾಪ್ತಿಯಲ್ಲಿ ಪ್ರವಾಸ ಮಾಡುತ್ತಿರುವುದು ನಮಗೆ ಹೆಮ್ಮೆಯಾಗಿದೆ. ಕಾಡಾ ಪ್ರಾಧಿಕಾರವನ್ನು ಮಾದರಿಯಾಗಿ ಮಾಡಲು ಶ್ರಮ ವಹಿಸುತ್ತಿರುವುದು ಶ್ಲಾಘನೀಯ ಜೊತೆಗೆ ನರೇಗಾ ಯೋಜನೆಯನ್ನು ಹೆಚ್ಚು ಬಳಸಿಕೊಂಡು ಕಾಲುವೆ ಸ್ವಚ್ಛ ಗೊಳಿಸಿದ್ದು ಉತ್ತಮ ನಡೆ ಎಂದು ಪ್ರಶಂಸಿಸಿದರು. ನಂತರ ಹಂತ ಹಂತವಾಗಿ ಅಭಿವೃದ್ದಿ ಕಾರ್ಯಗಳಿಗೆ ಅನುದಾನ ಬಿಡುಗಡೆಗೊಳಿಸಲು ಕ್ರಮ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದರು.
ಕಾಡಾ ಕಚೇರಿಯಲ್ಲಿ ವಿಶ್ವಪರಿಸರ ದಿನದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗಿಡನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಪವಿತ್ರ ರಾಮಯ್ಯ ಅವರು ಮಾತನಾಡಿ ಮುಖ್ಯಮಂತ್ರಿಗಳಿಗೆ ಹಾಗೂ ಸಂಸದರು ನನ್ನ ಹೋರಾಟವನ್ನು ಗುರುತಿಸಿ ಅಧ್ಯಕ್ಷರಾಗಿ ನೇಮಿಸಿದ್ದಕ್ಕೆ ಧನ್ಯವಾದ ಅರ್ಪಿಸಿದರು. ಈ ಹಿಂದೆ ಎಸ್.ಎಮ್.ಕೃಷ್ಣ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ರೈತ ಸಂಘದಲ್ಲಿದ್ದ ಸಮಯದಲ್ಲಿ ನೀರಿನ ನಿರ್ವಹಣೆಯಲ್ಲಿ ಏರುಪೇರು ಮಾಡಿದ್ದ ಅಧಿಕಾರಿಗಳ ವಿರುದ್ಧ ಹೋರಾಟ ನಡೆಸಿ ಇದೇ ಕಛೇರಿಗೆ ಬೀಗ ಹಾಕಿದ್ದೆವು ಈಗ ಅಧ್ಯಕ್ಷ ಗಾದಿಯಲ್ಲಿ ಕುಳಿತು ರೈತರಿಗೆ ನೀರು ಕೊಡಲಿಲ್ಲ ಎಂದರೆ ಅಂದಿನ ಹೋರಾಟಕ್ಕೆ ಬೆಲೆ ಇರುವುದಿಲ್ಲ ಇದನ್ನು ಮನಗಂಡು ನಿರಂತರವಾಗಿ ಕೆಲಸ ಮಾಡಿದೆನು ಈ ಪರಿಶ್ರಮದಿಂದ ಅಚ್ಚುಕಟ್ಟು ಕೊನೆಯ ಭಾಗದ ರೈತರಿಗೆ ನೀರು ತಲುಪಿದೆ ಎಂದು ಹರ್ಷ ವ್ಯಕ್ತಪಡಿಸಿದರು.
ನಿರ್ದೇಶಕರು, ಆಡಳಿತಾಧಿಕಾರಿಗಳು, ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಪುರುಷೋತ್ತಮ್, ಬಳ್ಳೇಕೆರೆ ಸಂತೋಷ್, ದಿವಾಕರ್ ಶೆಟ್ಟಿ ಉಪಸ್ಥಿತರಿದ್ದರು.
previous post