ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ಅಭಿಮಾನಿ ಬಳಗದಿಂದ ಸಾಗರ ಪಟ್ಟಣದಲ್ಲಿ ಕೋವಿಡ್ ಸಂಕಷ್ಟದಲ್ಲಿರುವ ಕಾರು ಚಾಲಕರ 131 ಕುಟುಂಬಗಳಿಗೆ ಆಹಾರ ಕಿಟ್ ವಿತರಿಸಲಾಯಿತು. ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಉಪಸ್ಥಿತಿಯಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಇತ್ತೀಚೆಗೆ ನಿಧನರಾದ ಮೂವರು ಕಾರು ಚಾಲಕರ ಕುಟುಂಬಗಳಿಗೆ ತಲಾ 10 ಸಾವಿರ ನೆರವನ್ನು ಬೇಳೂರು ಗೋಪಾಲಕೃಷ್ಣ ಘೋಷಿಸಿದರು. ಕಷ್ಟದಲ್ಲಿರುವವರಿಗೆ ನೆರವಾಗುವ ಮಾನವೀಯ ಕೆಲಸ ಮಾಡುತ್ತಿರುವ ಅಭಿಮಾನಿ ಬಳಗದ ಕಾರ್ಯ ಶ್ಲಾಘನೀಯ ಎಂದು ಕಾಗೋಡು ತಿಮ್ಮಪ್ಪ ಹೇಳಿದರು.
ಬೇಳೂರು ಗೋಪಾಲಕೃಷ್ಣ ಮಾತನಾಡಿ, ಸ್ನೇಹಿತರು ಮಾಡುತ್ತಿರುವ ಈ ಕಾರ್ಯಕ್ಕೆ ತಮ್ಮ ಬೆಂಬಲ ಇದೆ ಎಂದು ಹೇಳಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ್ ಬಾಬು, ಉಮೇಶ್ ಸೂರನಗದ್ದೆ, ಗಣಪತಿ, ಚಂದ್ರು ,ಸಂತೋಷ್ ,ವಿಜಯ್ , ವಿ.ಶಂಕರ್ ಮತ್ತಿತರರಿದ್ದರು.
previous post
next post