ಕೃಷಿ ಇಲಾಖೆ ವತಿಯಿಂದ 2021-22 ನೇ ಸಾಲಿನ ಕೃಷಿ ಅಭಿಯಾನ ಕಾರ್ಯಕ್ರಮದ ಮಾಹಿತಿ ರಥಕ್ಕೆ ಗ್ರಾಮಾಂತರ ಶಾಸಕರಾದ ಕೆ.ಬಿ.ಅಶೋಕ್ ನಾಯಕ್ ಕುಂಸಿ ಗ್ರಾಮದಲ್ಲಿ ಚಾಲನೆ ನೀಡಿ, ರೈತರಿಗೆ ಟಾರ್ಪಾಲಿನ್ ಮತ್ತು ರಾಗಿ ಬೀಜ ವಿತರಣೆ ಮಾಡಿದರು.
ಈ ವೇಳೆ ಅವರು ಮಾತನಾಡಿ ತಾಲ್ಲೂಕಿನ ಎಲ್ಲಾ ರೈತರು ಕೃಷಿ, ತೋಟಗಾರಿಕೆ ಮತ್ತು ಪಶು ವೈದ್ಯಕೀಯ ಇಲಾಖೆ ಯೋಜನೆಗಳ ಬಗ್ಗೆ ಕೃಷಿ ಮಾಹಿತಿ ರಥದ ಮೂಲಕ ಮಾಹಿತಿ ಪಡೆದುಕೊಂಡು ಯೋಜನೆಗಳ ಸದುಪಯೋಗ ಪಡಿಸಿಕೊಳ್ಳಬೇಕೆಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಶಿವಮೊಗ್ಗ ತಾಲ್ಲೂಕಿನ ರೈತರುಗಳು ಭಾಗವಹಿಸಿದ್ದರು. ಉಪ ಕೃಷಿ ನಿರ್ದೇಶಕರಾದ ಬಸವರಾಜ್.ಡಿ.ಎಂ.ರವರು ಪ್ರಾಸ್ತಾವಿಕ ನುಡಿ ನುಡಿದರು. ಸಹಾಯಕ ಕೃಷಿ ನಿರ್ದೇಶಕರಾದ ಶಿವರಾಜ್‍ಕುಮಾರ್.ಹೆಚ್.ಎಸ್. ಸ್ವಾಗತಿಸಿದರು. ಜಂಟಿ ಕೃಷಿ ನಿರ್ದೇಶಕರಾದ ಡಾ.ಕಿರಣ್ ಕುಮಾರ್ ರವರು ಕೃಷಿ ಅಭಿಯಾನದ ಕುರಿತು ಮಾಹಿತಿ ನೀಡಿದರು. ತಾಲ್ಲೂಕಿನ ಅಧಿಕಾರಿಗಳು ಹಾಗೂ ಕೃಷಿ ಇಲಾಖೆ ಸಿಬ್ಬಂದಿಯವರು ಭಾಗವಹಿಸಿದ್ದರು.