ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಬೆಲೆ ಏರಿಕೆ ವಿರೋಧಿಸಿ ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿತು.
ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್, ಖಾಸಗಿ ಬಸ್ ಪ್ರಯಾಣ ದರ, ವಿದ್ಯುತ್ ಬೆಲೆಗಳು ಗಗನಕ್ಕೇರಿವೆ. ಜನಸಾಮಾನ್ಯರು ಜೀವ ನಡೆಸುವುದೇ ಕಷ್ಟವಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈ ಬಗ್ಗೆ ತಲೆ ಕೆಡಿಸಿಕೊಳ್ಳುತ್ತಿಲ್ಲ. ಆದ್ದರಿಂದ ಈ ಸರ್ಕಾರಗಳನ್ನು ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಬೇಕೆಂದು ಒತ್ತಾಯಿಸಿದರು.
ಇದರ ಜೊತೆಗೆ ಕೋವಿಡ್ ನಿಯಂತ್ರಿಸುವಲ್ಲಿ ಕೂಡ ಕೇಂದ್ರ ಸರ್ಕಾರ ವಿಫಲವಾಗಿದೆ. ಪ್ರಾರಂಭದಲ್ಲಿ ಅವಶ್ಯಕತೆ ಇದ್ದರೂ ಸಹ ಲಸಿಕೆಯನ್ನು ಹೊರ ದೇಶಕ್ಕೆ ರಫ್ತು ಮಾಡಲಾಗಿತ್ತು. ಅಲ್ಲದೇ,. ದುಡಿಯುವ ಕೈಗಳಿಗೆ ಲಾಕ್ ಡೌನ್ ನಿಂದಾಗಿ ಕೆಲಸವೂ ಇರಲಿಲ್ಲ. ಜೀವ ನಡೆಸುವುದೇ ದುಸ್ತರವಾಗಿದ್ದು, ಈಗ ಬೆಲೆ ಏರಿಕೆ ಮಾಡಿ ಜನರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಿದೆ. ಆದ್ದರಿಂದ ಕೇಂದ್ರ ಮತ್ತುರ ರಾಜ್ಯ ಸರ್ಕಾರಗಳನ್ನು ವಜಾಗೊಳಿಸಬೇಕೆಂದು ರಾಷ್ಟ್ರಪತಿಗಳಿಗೆ ಮನವಿ ಮಾಡಲಾಗಿದೆ.
ಮನವಿ ನೀಡುವ ಸಂದರ್ಭದಲ್ಲಿ ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್ ನ ವ್ಯವಸ್ಥಾಪಕ ಟ್ರಸ್ಟಿ ಕಲ್ಲೂರು ಮೇಘರಾಜ್ ಪದಾಧಿಕಾರಿಗಳಾದ ಹೊಳೆಮಡಿಲು ವೆಂಕಟೇಶ್, ಹೆಚ್.ಎಂ. ಸಂಗಯ್ಯ, ಎಸ್.ವಿ. ರಾಜಮ್ಮ, ಶಂಕ್ರಾನಾಯ್ಕ್, ಗೋಪಾಲಕೃಷ್ಣ, ಆದಿಶೇಷ, ಶ್ರೀಧರ್ ಸೇರಿದಂತೆ ಹಲವರಿದ್ದರು.
previous post
next post