Malenadu Mitra
ರಾಜ್ಯ ಶಿವಮೊಗ್ಗ

ಜಿಲ್ಲೆಯ 1.7 ಲಕ್ಷ ನಿರ್ಮಾಣ ಕಾರ್ಮಿಕರಿಗೆ ತಲಾ 3 ಸಾವಿರ ನೆರವು: ಸಚಿವ ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ ಕೋವಿಡ್ ಲಾಕ್‍ಡೌನ್‍ನಿಂದ ಆರ್ಥಿಕ ಸಂಕಷ್ಟಕ್ಕೀಡಾದ ಕಟ್ಟಡ ಹಾಗೂ ಇತರ ನಿರ್ಮಾಣ ಕಾರ್ಮಿಕರಿಗೆ ತಲಾ 3ಸಾವಿರ ರೂ. ನೆರವು ಒದಗಿಸಲಾಗುತ್ತಿದ್ದು, ಜಿಲ್ಲೆಯಲ್ಲಿ 1,07,286 ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ನಗದು ವರ್ಗಾವಣೆ ಮಾಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು.

ಅವರು ಶನಿವಾರ ಸುದ್ದಿಗೋಷ್ಟಿಯಲ್ಲಿ ಈ ಕುರಿತು ಮಾಹಿತಿ ನೀಡಿ, ಈಗಾಗಲೆ ಜಿಲ್ಲೆಯಲ್ಲಿ 72,065 ಕಾರ್ಮಿಕರ ಬ್ಯಾಂಕ್ ಖಾತೆಗಳಿಗೆ ಒಟ್ಟು 21.61 ಕೋಟಿ ರೂ. ವರ್ಗಾವಣೆ ಮಾಡಲಾಗಿದೆ. ಇವರ ಪೈಕಿ 11,040 ಕಾರ್ಮಿಕರಿಗೆ ಜಮಾಗೊಳಿಸಲಾದ ಮೊತ್ತ ಅವರ ಖಾತೆಗಳು ನಿಷ್ಕ್ರಿಯವಾಗಿರುವುದರಿಂದ ಹಾಗೂ ಬ್ಯಾಂಕ್ ಖಾತೆ ಆಧಾರ್ ಸಂಖ್ಯೆಗೆ ಜೋಡಣೆಯಾಗದಿರುವ ಕಾರಣ 3.31 ಕೋಟಿ ರೂ. ಇನ್ನೂ ಜಮಾ ಆಗಿಲ್ಲ. ಕಾರ್ಮಿಕರು ತಮ್ಮ ಬ್ಯಾಂಕ್ ಖಾತೆಯನ್ನು ಆಧಾರ್ ಸಂಖ್ಯೆಯೊಂದಿಗೆ ಜೋಡಣೆ ಮಾಡಿಕೊಳ್ಳಲು ಮನವಿ ಮಾಡಲಾಗಿದೆ ಎಂದು ಅವರು ಹೇಳಿದರು.

ಆಹಾರ ಕಿಟ್ ವಿತರಣೆ: ಕಾರ್ಮಿಕ ಇಲಾಖೆ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಕಾರ್ಮಿಕರ ನೆರವಿಗೆ ಹಲವು ಸೌಲಭ್ಯ ಒದಗಿಸಲಾಗುತ್ತಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಸಂಕಷ್ಟಕ್ಕೀಡಾಗಿರುವ ನಿರ್ಮಾಣ ಕಾರ್ಮಿಕರಿಗೆ ಆಹಾರ ಕಿಟ್ ವಿತರಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯ 32 ವಾರ್ಡ್‍ಗಳಲ್ಲಿರುವ 10850 ಫಲಾನುಭವಿಗಳಿಗೆ ಸೋಮವಾರದಿಂದ ಆಯಾ ವಾರ್ಡ್‍ನಲ್ಲಿ ಆಹಾರ ಕಿಟ್ ಒದಗಿಸಲಾಗುವುದು. ಫಲಾನುಭವಿಗಳು ಕಾರ್ಮಿಕ ಕಾರ್ಡ್ ಮತ್ತು ಆಧಾರ್ ಕಾರ್ಡ್ ತಂದು ಬೆಳಿಗ್ಗೆ ವಿತರಣಾ ಕೇಂದ್ರದಲ್ಲಿ ಟೋಕನ್ ಪಡೆಯಬೇಕು. ಮರುದಿನ ಆಹಾರ ಕಿಟ್ ವಿತರಣೆ ಮಾಡಲಾಗುವುದು. ಆಹಾರ ಕಿಟ್ ಕಾರ್ಮಿಕರಿಗೆ ವಿತರಿಸಲು ಅನುಕೂಲವಾಗುವಂತೆ 9 ತಂಡಗಳನ್ನು ರಚಿಸಲಾಗಿದ್ದು, 32 ಕೇಂದ್ರಗಳಲ್ಲಿ ನೋಡಲ್ ಅಧಿಕಾರಿಗಳ ತಂಡದ ನೇತೃತ್ವದಲ್ಲಿ ವಿತರಣೆ ಕಾರ್ಯ ಕೈಗೊಳ್ಳಲಾಗುವುದು ಎಂದು ಹೇಳಿದರು.

ಮೇಯರ್ ಸುನಿತಾ ಅಣ್ಣಪ್ಪ, ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ, ಜಿಲ್ಲಾ ಕಾರ್ಮಿಕ ಅಧಿಕಾರಿ ವಿಶ್ವನಾಥ್ ಮತ್ತಿತರರು ಸುದ್ದಿಗೋಷ್ಟಿಯಲ್ಲಿ ಉಪಸ್ಥಿತರಿದ್ದರು.

Ad Widget

Related posts

ಎಂಎಲ್‌ಸಿ ಸ್ಥಾನಕ್ಕೆ ಶೀಘ್ರ ರಾಜೀನಾಮೆ ನೀಡುವೆ
ಈಶ್ವರಪ್ಪ ಮತ್ತವರ ಮಗನ ವಿರುದ್ಧ ಚುನಾವಣೆಗೆ ಸ್ಪರ್ಧಿಸುವೆ ಎಂದ ಆಯನೂರು ಮಂಜುನಾಥ್

Malenadu Mirror Desk

ಶಿವಮೊಗ್ಗದಲ್ಲಿ ವ್ಯಕ್ತಿಗೆ ಚಾಕು ಇರಿತ, ಮೆಗ್ಗಾನ್ ಆಸ್ಪತ್ರೆಗೆ ದಾಖಲು

Malenadu Mirror Desk

ಅರಣ್ಯ ಹಕ್ಕು ಕಾಯಿದೆಯಡಿ ನ್ಯಾಯ ಕೊಡದಿದ್ದಲ್ಲಿ ಅಧಿಕಾರಿಗಳ ವಿರುದ್ಧ ನ್ಯಾಯಾಲಯಕ್ಕೆ ಮೊರೆ, ಮಲೆನಾಡು ರೈತ ಹೋರಾಟ ಸಮಿತಿ ಅಧ್ಯಕ್ಷ ತೀ.ನಾ.ಶ್ರೀನಿವಾಸ್ ಎಚ್ಚರಿಕೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.