ಕೊರೊನ ಸೋಂಕಿನಿಂದ ಸಂಕ?ಕ್ಕೀಡಾಗಿರುವ ರಾಜ್ಯದ ಎಲ್ಲಾ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಸರ್ಕಾರದ ವತಿಯಿಂದಲೇ ಫುಡ್ ಕಿಟ್ ವಿತರಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ, ಪಂಚಾಯಿತ್ ರಾಜ್ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೇಳಿದರು.
ಅವರು ಇಂದು ಕಾರ್ಮಿಕ ಇಲಾಖೆ ಹಾಗೂ ಶಿವಮೊಗ್ಗ ಮಹಾನಗರಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಪಾಲಿಕೆಯ ಪರಿ?ತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಕಟ್ಟಡ ಕಾರ್ಮಿಕರಿಗೆ ಫುಡ್ ಕಿಟ್ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಪ್ರಸ್ತುತ ಶಿವಮೊಗ್ಗ ನಗರದ ಪ್ರತಿ ವಾರ್ಡಿನಲ್ಲಿರುವ ಎಲ್ಲಾ ಅರ್ಹ ನೋಂದಾಯಿತ ೧೦೩೯೦ಕಟ್ಟಡ ಕಾರ್ಮಿಕರಿಗೆ ಕಿಟ್ ವಿತರಿಸಲು ಕ್ರಮ ವಹಿಸಲಾಗಿದೆ ಎಂದ ಅವರು ಈಗಾಗಲೇ ಸರ್ಕಾರವು ರಾಜ್ಯದ ಎಲ್ಲಾ ಕಟ್ಟಡ ಕಾರ್ಮಿಕರಿಗೆ ರೂ.ಗಳ ಸಹಾಯಧನ ನೀಡಲಾಗಿದೆ ಎಂದರು.
ಫುಡ್ ಕಿಟ್ ಪಡೆದುಕೊಳ್ಳುವ ಫಲಾನುಭವಿಗಳು ಆಧಾರ್ ಕಾರ್ಡ್, ಕಾರ್ಮಿಕರ ಗುರುತಿನ ಚೀಟಿ ಹೊಂದಿರಬೇಕು ಎಂದು ತಿಳಿಸಿದ ಅವರು ಫಲಾನುಭವಿಗಳು ಈ ಯೋಜನೆಯ ಲಾಭ ಪಡೆದುಕೊಳ್ಳುವಂತೆ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಮೇಯರ್ ಶ್ರೀಮತಿ ಸುನಿತಾ, ಉಪಮೇಯರ್ ಕೆ.ಗನ್ನಿಶಂಕರ್, ಜ್ಞಾನೇಶ್ವರ್, ಚನ್ನಬಸಪ್ಪ, ಆಯುಕ್ತ ಚಿದಾನಂದ ಎಸ್.ವಟಾರೆ, ಕಾರ್ಮಿಕ ಅಧಿಕಾರಿ ಎಂ.ಪಿ.ವಿಶ್ವನಾಥ್ ಮತ್ತಿತರರು ಉಪಸ್ಥಿತರಿದ್ದರು.