ಮಲೆನಾಡಿನಾದ್ಯಂತ ಕುಂಭದ್ರೋಣ ಮಳೆಯಾಗುತ್ತಿದ್ದು, ಬಹುತೇಕ ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ. ತುಂಗಾ ನದಿಗೆ ಜಲಾಶಯದಿಂದ 75 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದೆ. ಶಿವಮೊಗ್ಗ ನಗರದ ಕುಂಬಾರಗುಂಡಿ, ಸೀಗೆಹಟ್ಟಿ ಹಾಗೂ ರಾಜೀವ್‍ಗಾಂಧಿ ಬಡಾವಣೆಯ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಸಾಧ್ಯತೆ ಇದೆ. ಇಮಾಮ್ ಬಾಡದ ಬಳಿಯ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಕಾರಣ ಜಿಲ್ಲಾಡಳಿತ ಸ್ಥಳೀಯರಿಗೆ ಎಚ್ಚರಿಕೆ ನೀಡಿದೆ.
ಶರಾವತಿ ಕಣಿವೆಯಲ್ಲಿ ವ್ಯಾಪಕ ಮಳೆಯಾಗಿದ್ದು, ಲಿಂಗನಮಕ್ಕಿ ಜಲಾಶಯಕ್ಕೆ 2.42 ಲಕ್ಷ ಕ್ಯೂಸೆಕ್ ಒಳಹರಿವಿದೆ. ಜೋಗ ಜಲಪಾತ ಅಬ್ಬರಿಸುತ್ತಿದ್ದು, ರುದ್ರರಮಣೀಯ ದೃಶ್ಯ ಕಣ್ತುಂಬಿಕೊಳ್ಳಲು ಪ್ರವಾಸಿಗರು ಆಗಮಿಸುತ್ತಿದ್ದಾರೆ. ಭದ್ರಾ ಜಲಾಶಯಕ್ಕೆ ಒಂದೇ ದಿನ ನಾಲ್ಕು ಅಡಿಗಳಷ್ಟು ನೀರು ಬಂದಿದೆ.