Malenadu Mitra
ರಾಜ್ಯ ಶಿವಮೊಗ್ಗ

ಸಚಿವ ಕೆ.ಎಸ್.ಈಶ್ವರಪ್ಪ ಅವರಿಂದ ಅತಿವೃಷ್ಟಿ ಪೀಡಿತ ಪ್ರದೇಶಗಳ ಸಮೀಕ್ಷೆ

ಶಿವಮೊಗ್ಗ ನಗರದಲ್ಲಿ ಅತಿವೃಷ್ಟಿಯಿಂದ ಹಾನಿಗೀಡಾಗಿರುವ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಬಾರಿ ಅತಿವೃಷ್ಟಿಯಿಂದ ಶಿವಮೊಗ್ಗ ನಗರದ ಸುಮಾರು 15 ಭಾಗಗಳಲ್ಲಿ ನೀರು ನುಗ್ಗಿ ಅಪಾರ ಹಾನಿ ಸಂಭವಿಸಿತ್ತು. ಆದರೆ ಈ ಬಾರಿ ಮುಂಗಾರು ಆಗಮನಕ್ಕಿಂತ ಮೊದಲೇ ಮುಂಜಾಗರೂಕತಾ ಕ್ರಮಗಳನ್ನು ಕೈಗೊಂಡು, ರಾಜಕಾಲುವೆಗಳನ್ನು ಸ್ವಚ್ಛಗೊಳಿಸಲಾಗಿದೆ. ಚರಂಡಿಗಳಲ್ಲಿ ನೀರು ಸರಾಗವಾಗಿ ಹರಿದು ಹೋಗಲು ವ್ಯವಸ್ಥೆ ಮಾಡಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ನಗರದಲ್ಲಿ ಯಾವುದೇ ಮನೆಗಳು ಬಿದ್ದಿಲ್ಲ.

ನಗರದ ನಾಲ್ಕು ಕಡೆಗಳಲ್ಲಿ ನೀರು ನುಗ್ಗಿದ್ದು, ಹಾನಿಯನ್ನು ಪರಿಶೀಲಿಸಲಾಗುತ್ತಿದೆ. ನಗರದಲ್ಲಿ ನಾಲ್ಕು ಕಡೆಗಳಲ್ಲಿ ತಾತ್ಕಾಲಿಕವಾಗಿ ಅತಿವೃಷ್ಟಿ ಪೀಡಿತರಿಗೆ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ. ಹಾನಿಗೆ ಪರಿಹಾರ ನೀಡುವುದು ಸೇರಿದಂತೆ ಮುಂಜಾಗರೂಕತಾ ಕ್ರಮಗಳ ಬಗ್ಗೆ ಮಂಗಳವಾರ ಅಧಿಕಾರಿಗಳ ಸಭೆ ನಡೆಸಲಾಗುವುದು ಎಂದು ಹೇಳಿದರು.

ಸಚಿವರು ನಗರದ ಇಮಾಂ ಬಾಡ, ಶಾಂತಮ್ಮ ಲೇಔಟ್ ಮತ್ತು, ಕುಂಬಾರಗುಂಡಿ ಪ್ರದೇಶಗಳಿಗೆ ಸಚಿವರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು.
ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Ad Widget

Related posts

ಪದ್ಮಶ್ರೀ ಹೆಚ್.ಆರ್.ಕೇಶವಮೂರ್ತಿ ಇನ್ನಿಲ್ಲ

Malenadu Mirror Desk

ಶಿವಮೊಗ್ಗದಲ್ಲಿ ಬ್ಲಾಕ್ ಫಂಗಸ್‍ಗೆ 1, ಕೊರೊನದಿಂದ 13 ಸಾವು

Malenadu Mirror Desk

ಬಂಗಾರಪ್ಪ ಕನಸು ನನಸು, ಮಂತ್ರಿಯಾದ ಮಧುಬಂಗಾರಪ್ಪ, ತಂದೆಯಂತೆ ಜನರನ್ನು ಪ್ರೀತಿಸುವ ಪುತ್ರ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.