Malenadu Mitra
ರಾಜ್ಯ ಶಿವಮೊಗ್ಗ

ಅವಧಿ ಪೂರೈಸದ ಶಿವಮೊಗ್ಗ ಸಿಎಂ ಗಳು

ರಾಜ್ಯಕ್ಕೆ ಹೆಚ್ಚು ಮುಖ್ಯಮಂತ್ರಿಗಳನ್ನು ನೀಡಿರುವ ಜಿಲ್ಲೆ ಶಿವಮೊಗ್ಗ. ಆದರೆ ಇಲ್ಲಿನ ಯಾವ ಮುಖ್ಯಮಂತ್ರಿಗಳು ಪೂರ್ಣಾವಧಿ ಅಧಿಕಾರ ಅನುಭವಿಸಲಿಲ್ಲ ಎಂಬುದು ಮಾತ್ರ ಬೇಸರದ ಸಂಗತಿ. ಅಪೂರ್ಣ ಅವಧಿ ಆಡಳಿತ ನಡೆಸಿದ ಮುಖ್ಯಮಂತ್ರಿಗಳ ಸಾಲಿಗೆ ಈಗ ಯಡಿಯೂರಪ್ಪ ಅವರೂ ಸೇರಿದ್ದಾರೆ.

73 ದಿನಕ್ಕಷ್ಟೆ ಸಿಎಂ


ಮೈಸೂರು ರಾಜ್ಯವಾಗಿದ್ದ ಸಂದರ್ಭ, ತೀರ್ಥಹಳ್ಳಿ ಕ್ಷೇತ್ರದಿಂದ ಆಯ್ಕೆಯಾಗಿದ್ದ ಕಡಿದಾಳು ಮಂಜಪ್ಪ ಅವರು ಮುಖ್ಯಮಂತ್ರಿ ಗಾದಿಗೆ ಏರಿದರು. 1956ರ ಆಗಸ್ಟ್ 19ರಂದು ಸಿಎಂ ಪದವಿಗೇರಿದ ಕಡಿದಾಳ್ ಮಂಜಪ್ಪ ಅವರು 1956ರ ಅಕ್ಟೋಬರ್ 31ಕ್ಕೆ ಅಧಿಕಾರ ಕಳೆದುಕೊಂಡರು. ಕೇವಲ 73 ದಿನ ಸಿಎಂ ಆಗಿದ್ದರು.

ಎಸ್ ಬಂಗಾರಪ್ಪರಿಗೂ ಪೂರ್ಣಾವಧಿ ಅಧಿಕಾರ ಸಿಗಲಿಲ್ಲ

ವರ್ಣರಂಜಿತ ವ್ಯಕ್ತಿತ್ವದ ಸಾರೆಕೊಪ್ಪ ಬಂಗಾರಪ್ಪ ಅವರು 1990ರ ಅಕ್ಟೋಬರ್ 17ರಂದು ಮುಖ್ಯಮಂತ್ರಿಯಾದರು. 1992ರ ನವೆಂಬರ್ 19ರಂದು ರಾಜೀನಾಮೆ ಸಲ್ಲಿಸಿದರು. 2 ವರ್ಷ 33 ದಿನಗಳಷ್ಟೆ ಬಂಗಾರಪ್ಪ ಅವರು ಸಿಎಂ ಗಾದಿಯಲ್ಲಿದ್ದರು. ಕ್ಲಾಸಿಕ್ ಕಂಪ್ಯೂಟರ್ ಹಗರಣದಲ್ಲಿ ಹೆಸರು ಕೇಳಿ ಬಂದಿದ್ದರಿಂದ ಬಂಗಾರಪ್ಪ ಅವರು ಅಧಿಕಾರ ತ್ಯಜಿಸಬೇಕಾಯಿತು. ನಿಧನರಾಗುವ ಸ್ವಲ್ಪ ದಿನ ಮುಂಚೆ, ಹಗರಣದ ಆರೋಪದಿಂದ ಬಂಗಾರಪ್ಪ ಅವರಿಗೆ ಕ್ಲೀನ್ ಚಿಟ್ ಸಿಕ್ಕಿತ್ತು.

ಜೆ.ಹೆಚ್.ಪಾಟೇಲ್ ಅವರಿಗೂ ಸಿಗಲಿಲ್ಲ ಪೂರ್ಣಾವಧಿ

ಚತುರ ರಾಜಕಾರಣಿ ಅನಿಸಿಕೊಂಡಿದ್ದ ಜೆ.ಹೆಚ್.ಪಟೇಲ್ ಅವರು ಚನ್ನಗಿರಿ ಕ್ಷೇತ್ರದಿಂದ ಶಾಸಕರಾಗಿದ್ದರು. ಆಗಿನ್ನೂ ಚನ್ನಗಿರಿ ತಾಲೂಕು ಶಿವಮೊಗ್ಗ ಜಿಲ್ಲೆಯ ವ್ಯಾಪ್ತಿಯಲ್ಲಿತ್ತು. 1996ರ ಮೇ 31ರಂದು ಜೆ.ಹೆಚ್.ಪಟೇಲ್ ಅವರು ಸಿಎಂ ಆಗಿ ಅಧಿಕಾರ ಆರಂಭಿಸಿದರು. 3 ವರ್ಷ 129 ದಿನ ಮುಖ್ಯಮಂತ್ರಿಯಾಗಿದ್ದ ಜೆ.ಹೆಚ್.ಪಟೇಲ್ ಅವರು 7 ಅಕ್ಟೋಬರ್ 1999ರಂದು ಪದತ್ಯಾಗ ಮಾಡಬೇಕಾಯಿತು.

ನಾಲ್ಕು ಬಾರಿ ಸಿಎಂ ಗಾದಿಗೇರಿದ್ದರು ಯಡಿಯೂರಪ್ಪ

ಅತ್ಯಧಿಕ ಭಾರಿ ಸಿಎಂ ಗದ್ದುಗೆ ಮೇಲೆ ಕುಳಿತ ಹಿರಿಮೆ ಬಿ.ಎಸ್.ಯಡಿಯೂರಪ್ಪ ಅವರದ್ದು. 2007ರ ನವೆಂಬರ್ 12ರಿಂದ 2007ರ ನವೆಂಬರ್ 19ರವರೆಗೆ ಏಳು ದಿನ ಸಿಎಂ ಆಗಿದ್ದರು. ಜೆಡಿಎಸ್ ಪಕ್ಷ ಬೆಂಬಲ ಹಿಂಪಡೆದಿದ್ದರಿಂದ ಯಡಿಯೂರಪ್ಪ ಅವರು ಅಧಿಕಾರ ಕಳೆದುಕೊಂಡಿದ್ದರು.

2008ರಲ್ಲಿ ಬಿಜೆಪಿಗೆ ಬಹುಮತ ಲಭಿಸಿ, ಯಡಿಯೂರಪ್ಪ ಅವರು ಸಿಎಂ ಆದರು. 2008ರ ಮೇ 30ರಿಂದ ಮೂರು ವರ್ಷ 66 ದಿನ ಯಡಿಯೂರಪ್ಪ ಅವರು ಅಧಿಕಾರದಲ್ಲಿದ್ದರು. ಆದರೆ ಭ್ರಷ್ಟಾಚಾರ ಆರೋಪ ಸಂಬಂಧ 2011ರ ಆಗಸ್ಟ್ 4ರಂದು ರಾಜೀನಾಮೆ ಸಲ್ಲಿಸಬೇಕಾಯಿತು.

2018ರ ಮೇ 17ರಂದು ಮತ್ತೆ ಸಿಎಂ ಆದ ಯಡಿಯೂರಪ್ಪ ಅವರು ಬಹುಮತ ಇಲ್ಲದೆ ಆರು ದಿನದಲ್ಲಿ, ಅಂದರೆ, 2018ರ ಮೇ 23ರಂದು ಸಿಎಂ ಸ್ಥಾನದಿಂದ ಕೆಳಗಿಳಿಯಬೇಕಾಯಿತು.

ಬಳಿಕ 2019ರ ಜುಲೈ 26ರಂದು ಮತ್ತೆ ಅಧಿಕಾರಕ್ಕೇರಿದ ಯಡಿಯೂರಪ್ಪ ಅವರು 2021ರ ಜುಲೈ 26ರಂದು ಪದತ್ಯಾಗ ಮಾಡಬೇಕಾಯಿತು. ಈ ಮೂಲಕ ರಾಜ್ಯಕ್ಕೆ ಅತ್ಯಧಿಕ ಸಿಎಂಗಳನ್ನು ಕೊಟ್ಟರೂ, ಶಿವಮೊಗ್ಗ ಜಿಲ್ಲೆಯವರು ಪೂರ್ಣಾವಧಿ ಅಧಿಕಾರ ನಡೆಸಲು ಸಾಧ್ಯವಾಗಿಲ್ಲ.

Ad Widget

Related posts

ನಾಪತ್ತೆಯಾಗಿದ್ದ ಗಿರಿರಾಜ್ ಸಿಕ್ಕಿದ್ದು ಹೇಗೆ ಗೊತ್ತಾ ?

Malenadu Mirror Desk

ಬಿಎಸ್ ಯಡಿಯೂರಪ್ಪ ಅವರ ಮೊಮ್ಮಗಳು ಡಾ. ಸೌಂದರ್ಯ ನಿಧನ

Malenadu Mirror Desk

ಹಿಂದುಳಿದ ವರ್ಗಕ್ಕೆ ಪ್ರಬಲ ಜಾತಿಗಳು ಬೇಡ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.