ಶಿವಮೊಗ್ಗ ಜಿಲ್ಲೆ ಪ್ರತಿನಿಧಿಸುವ ನೂತನ ಸಚಿವರುಗಳಾದ ಕೆ.ಎಸ್.ಈಶ್ವರಪ್ಪ ಮತ್ತು ಆರಗ ಜ್ಞಾನೇಂದ್ರ ಅವರಿಗೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕು ನಿಟ್ಟೂರಿನ ಶ್ರೀ ನಾರಾಯಣಗುರು ಮಹಾ ಸಂಸ್ಥಾನದ ಶ್ರೀ ರೇಣುಕಾನಂದ ಸ್ವಾಮೀಜಿ ಅಭಿನಂದನೆ ಸಲ್ಲಿಸಿದ್ದಾರೆ. ಸಚಿವರು ತಮ್ಮ ಅವಧಿಯಲ್ಲಿ ಜನಪರ ಕೆಲಸಗಳಿಂದಾಗಿ ಜಿಲ್ಲೆಗೆ ಕೀರ್ತಿ ತರಲಿ ಎಂದು ಹಾರೈಸಿದ್ದಾರೆ.
ಜಿಲ್ಲೆಯ ಈಡಿಗರಿಗೆ ಸಚಿವ ಸ್ಥಾನ ಬೇಕು
ಈಡಿಗ ಸಮುದಾಯದ ಕೋಟಾ ಶ್ರೀನಿವಾಸ ಪೂಜಾರಿ ಹಾಗೂ ಸುನಿಲ್ ಕುಮಾರ್ ಅವರಿಗೆ ಸಂಪುಟದಲ್ಲಿ ಪ್ರಾತಿನಿಧ್ಯ ನೀಡಿರುವ ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಕೃತಜ್ಞತೆ ಸಲ್ಲಿಸಿರುವ ಶ್ರೀಗಳು, ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಶಿವಮೊಗ್ಗದಲ್ಲಿ ಬಹುಸಂಖ್ಯಾತರಾಗಿರುವ ಈಡಿಗರಿಗೆ ಒಂದು ಸಚಿವಸ್ಥಾನ ನೀಡಬೇಕೆಂದು ಸ್ವಾಮೀಜಿ ಮನವಿ ಮಾಡಿದ್ದಾರೆ.