ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳ ಸೆಮಿಸ್ಟರ್ ಪರೀಕ್ಷೆಯನ್ನು ರಾಜ್ಯ ಸರ್ಕಾರ ಹಾಗೂ ಯುಜಿಸಿ ಆದೇಶದಂತೆ ಅನುಷ್ಟಾನಗೊಳಿಸಲು ಆಗ್ರಹಿಸಿ ಯುವ ಕಾಂಗ್ರೆಸ್ ವತಿಯಿಂದ ಶಿವಮೊಗ್ಗ ನಗರದ ಜಿಲ್ಲಾಧಿಕಾರಿಗಳ ಕಛೇರಿ ಆವರಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ದೇಶಾದ್ಯಂತ ಕೋವಿಡ್‌ನಿಂದಾಗಿ ಶಾಲಾ ಕಾಲೇಜುಗಳನ್ನು ಬಂದ್ ಮಾಡಲಾಗಿದೆ. ರಾಜ್ಯದಲ್ಲೂ ಕೂಡ ಕರೋನದ ಎರಡು ಅಲೆಗಳ ಲಾಕ್‌ಡೌನ್‌ನಿಂದ ರಾಜ್ಯದಲ್ಲೂ ಶಾಲಾ, ಕಾಲೇಜುಗಳು ಮುಚ್ಚಲಾಗಿತ್ತು. ಇದರಿಂದ ಶೈಕ್ಷಣಿಕ ವರ್ಷದ ಕೆಲವು ತರಗತಿಗಳನ್ನು ಆನ್‌ಲೈನ್ ಮೂಲಕ ಪಾಠ ಮಾಡಲಾಗುತ್ತಿದೆ. ಪದವಿ ವಿದ್ಯಾರ್ಥಿಗಳ ಅಂತಿಮ ವರ್ಷದ ಪರೀಕ್ಷೆಗಳನ್ನು ನಡೆಸಲಾಗುವುದೆಂದು, ಇನ್ನುಳಿದ ಪ್ರಥಮ ಮತ್ತು ದ್ವಿತೀಯ ವರ್ಷದ ವಿದ್ಯಾರ್ಥಿಗಳ ಅಂಕಗಳ ಆಧಾರದ ಮೇಲೆ ಅವರನ್ನ ಮುಂದಿನ ತರಗತಿಗೆ ಹಾಗೂ ಮುಂದಿನ ಸೆಮಿಸ್ಟರ್ ಪರೀಕ್ಷೆಗಳಿಗೆ ಪ್ರಮೋಟ್ ಮಾಡಲು ರಾಜ್ಯ ಸರ್ಕಾರ ಮತ್ತು ಯುಜಿಸಿ ಆದೇಶವನ್ನು ಹೊರಡಿಸಿದೆ. ಆದರೆ ರಾಜ್ಯದಲ್ಲಿ ಕೆಲವು ವಿಶ್ವವಿದ್ಯಾಲಯಗಳು ಹಾಗೂ ಶಿವಮೊಗ್ಗ ಜಿಲ್ಲೆಯ ಕುವೆಂಪು ವಿಶ್ವವಿದ್ಯಾಲಯವು ಸೇರಿ ಸರ್ಕಾರದ ಆದೇಶವನ್ನು ಉಲ್ಲಂಘಿಸಿ ಸೆಮಿಸ್ಟರ್ ಪರೀಕ್ಷೆಗಳನ್ನ ಮಾಡಲು ವೇಳಾಪಟ್ಟಿಯನ್ನು ಪ್ರಕಟಿಸಲು ಹೊರಟಿರುವುದನ್ನು ಪ್ರತಿಭಟನಾನಿರತರು ತೀವ್ರ ಖಂಡಿಸಿದರು.
ಈಗಾಗಲೇ ಆನ್‌ಲೈನ್ ತರಗತಿಯಲ್ಲಿ ಪಾಠ ಕೇಳಲು ಬಡ ವಿದ್ಯಾರ್ಥಿಗಳು ಪರದಾಡಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ನೆಟ್‌ವರ್ಕ್ ಸಮಸ್ಯೆ ಅತಿ ಹೆಚ್ಚಾಗಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅತಿ ಹೆಚ್ಚು ತೊಂದರೆಯಾಗಿದೆ. ಕಾಲೇಜಿನಲ್ಲಿ ಪಾಠ ನಡೆಯದೆ ಏಕಾಏಕಿ ಪರೀಕ್ಷೆ ಎದುರಿಸುವುದು ಸಂಕಷ್ಟದ ಪರಿಸ್ಥಿತಿಯಾಗಿದೆ. ಕೂಡಲೆ ಕುವೆಂಪು ವಿಶ್ವವಿದ್ಯಾಲಯ ಮತ್ತು ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳು ರಾಜ್ಯ ಸರ್ಕಾರ ಮತ್ತು ಯುಜಿಸಿ ಆದೇಶವನ್ನು ಅನುಷ್ಠಾನಗೊಳಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳ ಪರವಾಗಿ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಯುವ ಕಾಂಗ್ರೆಸ್ ಎಚ್ಚರಿಸುತ್ತದೆ.
ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ ಪ್ರವೀಣ್ ಕುಮಾರ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ರಂಗನಾಥ್ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ . ಗಿರೀಶ್, ಯುವ ಕಾಂಗ್ರೆಸ್ ಉತ್ತರ ಬ್ಲಾಕ್ ಅಧ್ಯಕ್ಷ ಬಿ ಲೋಕೇಶ್ ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ನ ಎಸ್. ಕುಮರೇಶ್ , ಗ್ರಾಮಂತರ ಯುವ ಕಾಂಗ್ರೆಸ್ ಅಧ್ಯಕ್ಷರು ಈ.ಟಿ ನಿತಿನ್ ಯುವ ಕಾಂಗ್ರೆಸ್ ಮುಖಂಡರಾದ ಆರ್. ಕಿರಣ್, ಮಯೂರ್ ದರ್ಶನ್ ಉಳ್ಳಿ ಡಿ.ಆರ್. ಗಿರೀಶ್ , ಸಚಿನ್ ಸಿಂದೆ ಯುವ ಕಾಂಗ್ರೆಸ್ ಪದಾಧಿಕಾರಿಗಳಾದ ಅರುಣ್ ನವುಲೆ ವೆಂಕಟೇಶ್ ಕಲ್ಲೂರು , ಸುಹಾಸ್ ಗೌಡ , ರಾಹುಲ್ , ನಿಹಾಲ್ ವಿದ್ಯಾರ್ಥಿಗಳಾದ ಅಶ್ವಿನ್, ಎಂ ನಾಯರ್ ಅಂಕಿತ, ಶಹಜಾನ್, ಮಮತಾ , ಶಶಾಂಕ್ ಗೌಡ ,ತೇಜಸ್ವಿನಿ, ಐಶ್ವರ್ಯ, ಲಾವಣ್ಯ ಆಕಾಶ್ ಹಾಗೂ ವಿದ್ಯಾರ್ಥಿಗಳು ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು