ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಹಲವರಿಗೆ ಜೀವಮಾನ ಸಾಧನೆಗಾಗಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ವಿ.ಸುನೀಲ್ ಕುಮಾರ್ ಪ್ರಶಸ್ತಿ ನೀಡಿ ಗೌರವಿಸಿದರು. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಕಣ್ಣೂರಿನ ಡಾಕಪ್ಪ ಅವರಿಗೆ ಜಾನಪದ ಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಡೊಳ್ಳು ಕುಣಿತದ ಮೂಲಕ ಜಾನಪದ ಕಲೆ ಕ್ಷೇತ್ರಕ್ಕೆ ಅವರು ನೀಡಿದ್ದ ಕೊಡುಗೆ ಪರಿಗಣಿಸಿ ಈ ಪುರಸ್ಕಾರ ನೀಡಲಾಯಿತು. ಪ್ರಶಸ್ತಿಯು ಐದು ಲಕ್ಷ ರೂ.ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ. ಕಲಾವಿದ ನರಸಿಂಹಲು ವಡಾವಡಿ,ಇಲಾಖೆ ಕಾರ್ಯದರ್ಶಿ ರವಿಶಂಕರ್, ನಿರ್ದೇಶಕ ರಂಗಪ್ಪ ಮತ್ತಿತರರು ಇದ್ದರು.
previous post