Malenadu Mitra
Uncategorized ರಾಜ್ಯ ಶಿವಮೊಗ್ಗ

ಮನೆಮನೆಗೆ ಗಂಗೆ ಯೋಜನೆಯಡಿ ಎಲ್ಲ ಹಳ್ಳಿಗಳಿಗೂ ನೀರು: ಸಚಿವ ಕೆ.ಎಸ್. ಈಶ್ವರಪ್ಪ

 

ಮನೆಮನೆಗೆ ಗಂಗೆ ಯೋಜನೆಯಡಿ ರಾಜ್ಯದ ಎಲ್ಲ ಹಳ್ಳಿಗಳಿಗೂ ಶುದ್ಧ ಕುಡಿಯುವ ನೀರಿನ್ನು ಒದಗಿಸಲಾಗುವುದು ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
ಶಿವಮೊಗ್ಗ ತಾಲ್ಲೂಕು ಆಯನೂರು ಮತ್ತು ಕೋಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಿಗೆ 645 ಲಕ್ಷ ರೂ. ವೆಚ್ಚದಲ್ಲಿ ಶಾಶ್ವತ ಶುದ್ಧ ಕುಡಿಯುವ ನೀರನ್ನು ಪೂರೈಸುವ ಕಾಮಗಾರಿಯ ಉದ್ಘಾಟನೆ ನೆರವೇರಿಸಿ ಅವರು  ಮಾತನಾಡಿದರು.
ಸಿರಿಗೆರೆ ಗ್ರಾಮದ ನಾಗರಿಕರು ಕೂಡ ತಮಗೂ ನೀರಿನ ಸೌಲಭ್ಯ ಕಲ್ಪಿಸಬೇಕೆಂದು ಮನವಿ ಸಲ್ಲಿಸಿದ್ದಾರೆ. ಆ ಗ್ರಾಮದಲ್ಲಿ ಕೂಡ ನೀರಿನ ಲಭ್ಯತೆಯನ್ನು ಸರ್ವೇ ಮಾಡಿಸಿ ಪ್ರತಿ ಮನೆಗೂ ನೀರು ನೀಡುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು. ಕಾಂಗ್ರೆಸ್ ಸರ್ಕಾರ ಇದ್ದಾಗ, ಶುದ್ಧ ಕುಡಿಯುವ ನೀರಿನ ಯೋಜನೆಯಲ್ಲಿ ಅನೇಕ ಅವ್ಯವಹಾರಗಳು ನಡೆಸಿದ್ದಾರೆ ಎಂಬ ದೂರಿನ ಬಗ್ಗೆ ಆರಗ ಜ್ಞಾನೇಂದ್ರ ನೇತೃತ್ವದ ಸದನ ಸಮಿತಿ ನೇಮಕ ಮಾಡಲಾಗಿತ್ತು. ಕೋವಿಡ್ ಬಂದ ಹಿನ್ನಲೆಯಲ್ಲಿ ತನಿಖೆ ನಿಧಾನವಾಗಿ ಸಾಗಿದೆ. ಅನೇಕ ಗ್ರಾಮಗಳ ಶುದ್ಧ ನೀರಿನ ಘಟಕಗಳು ಕಳಪೆಯಾಗಿದೆ ಮತ್ತು ರಿಪೇರಿಯಲ್ಲಿದೆ ಎಂಬ ದೂರಿನ ಹಿನ್ನಲೆಯಲ್ಲಿ ದುರಸ್ತಿಪಡಿಸಿ ನೀರು ಕೊಡಲು ಆದೇಶಿಸಲಾಗಿದೆ. ಅನೇಕ ಘಟಕಗಳು ರಿಪೇರಿಯಾಗಿ ಈಗ ಕಾರ್ಯಾಚರಣೆಯಲ್ಲಿವೆ ಎಂದರು.
ಈ ಸಂದರ್ಭದಲ್ಲಿ ಸಂಸದ ಬಿ.ವೈ. ರಾಘವೇಂದ್ರ, ಶಾಸಕರಾದ ಅಶೋಕ್ ನಾಯ್ಕ್, ಎಸ್. ರುದ್ರೇಗೌಡ, ಸೂಡಾ ಅಧ್ಯಕ್ಷ ಎಸ್.ಎಸ್. ಜ್ಯೋತಿ ಪ್ರಕಾಶ್, ಟಿ.ಬಿ. ಜಗದೀಶ್, ಮಂಡೇನಕೊಪ್ಪ ದೇವರಾಜ್ ಸೇರಿದಂತೆ ಹಲವರಿದ್ದರು.

ಯಡಿಯೂರಪ್ಪ -ಈಶ್ವರಪ್ಪ ದಿಢೀರ್ ಭೇಟಿ

ಮಾಜಿ ಸಿಎಂ ಯಡಿಯೂರಪ್ಪ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಶಿವಮೊಗ್ಗದಲ್ಲಿ ತಂಗಿದ್ದಾರೆ. ವಿನೋಬನಗರದಲ್ಲಿರುವ ಯಡಿಯೂರಪ್ಪ ನಿವಾಸಕ್ಕೆ  ಸಚಿವ ಕೆ.ಎಸ್. ಈಶ್ವರಪ್ಪ ದಿಢೀರ್ ಭೇಟಿ ನೀಡಿ ಉಪಾಹಾರ ಸೇವಿಸಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲೆಯ ಅಭಿವೃದ್ಧಿ ವಿಚಾರಗಳ ಬಗ್ಗೆ ಉಭಯ ನಾಯಕರು ಚರ್ಚೆ ನಡೆಸಿದ್ದಾರೆ. ಯಡಿಯೂರಪ್ಪರನ್ನು ಭೇಟಿಯಾಗಿ ತಮ್ಮ ಬೇಡಿಕೆ ಈಡೇರಿಸುವಂತೆ ಸಿಮ್ಸ್ ನ ಗುತ್ತಿಗೆ ನೌಕರರು ಮನವಿ ಮಾಡಲು ಬಂದಿದ್ದರು. ಅವರಿಂದ ಮನವಿ ಸ್ವೀಕರಿಸಿದ ಯಡಿಯೂರಪ್ಪ ನಂತರ ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಈ ಸಮಸ್ಯೆ ಬಗ್ಗೆ ಚರ್ಚಿಸಿ ಪರಿಹರಿಸುವಂತೆ ತಿಳಿಸಿದರು.

ಗೌಡನ ಕೆರೆಗೆ ಬಾಗಿನ

ಶಿವಮೊಗ್ಗ ತಾಲ್ಲೂಕಿನ ಆಯನೂರಿನ ಗೌಡನ ಕೆರೆಗೆ  ಸಚಿವ ಕೆ.ಎಸ್. ಈಶ್ವರಪ್ಪ ಬಾಗಿನ ಅರ್ಪಿಸಿದರು. ಈ ಸಂದರ್ಭದಲ್ಲಿ ಸಂಸದ ಬಿ.ವೈ. ರಾಘವೇಂದ್ರ, ಶಾಸಕರಾದ ಕೆ.ಬಿ. ಅಶೋಕ್ ನಾಯ್ಕ್, ಎಸ್. ರುದ್ರೇಗೌಡ, ಜಿಪಂ ಸಿಇಒ ಎಂ.ಎಲ್. ವೈಶಾಲಿ ಸೇರಿದಂತೆ ಹಲವರು ಇದ್ದರು.

Ad Widget

Related posts

ಅರಣ್ಯಇಲಾಖೆಯ ಪಾತ್ರ ತುಂಬಾ ಮುಖ್ಯ : ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ

Malenadu Mirror Desk

ಭೂತಃಕಾಲದ ಅಲಿಖಿತ ಸಂವಿಧಾನ ಮತ್ತು ವರ್ತಮಾನದ ಸಂವಿಧಾನದ ನಡುವೆ ಸಂಘರ್ಷ: ಡಾ. ತುಕಾರಾಮ್

Malenadu Mirror Desk

ಶಿವಮೊಗ್ಗದಲ್ಲಿ 635 ಮಂದಿಗೆ ಕೊರೊನ, ಒಂದು ಸಾವು

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.