ಮಹಿಳಾ ಸಂಘಟನೆಗಳು ಸದೃಢವಾಗಲು ಹೀಗೆ ಕೌಶಲ್ಯ ತರಭೇತಿ ಕೇಂದ್ರಗಳನ್ನು ಸ್ಥಾಪಿಸಿದರೆ ಅನುಕೂಲ ಆಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.
ಗುರುವಾರ ಶಿವಮೊಗ್ಗ ನಗರದ ಬೊಮ್ಮನಕಟ್ಟೆಯಲ್ಲಿ ಅಖಿಲ ಕರ್ನಾಟಕ ದೈವಜ್ಞ ಬ್ರಾಹ್ಮಣ ಮಹಿಳಾ ಮಂಡಳಿ ವತಿಯಿಂದ ನಿರ್ಮಾಣವಾಗುತ್ತಿರುವ ಕೌಶಲ್ಯ ತರಬೇತಿ ಕೇಂದ್ರ ಮತ್ತು ಮಹಿಳಾ ವಸತಿ ನಿಲಯದ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
ನಂತರ ಸಭೆಯಲ್ಲಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಎಲ್ಲ ಕ್ಷೇತ್ರದಲ್ಲೂ ಮಹಿಳೆಯರು ಸಾಧನೆಯನ್ನು ಮಾಡುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ಅನೇಕ ಅಭಿವೃದ್ಧಿ ಚಟುವಟಿಕೆ ನಡೆಯುತ್ತಿದೆ. ಜೊತೆಗೆ 15000 ಕ್ಕೂ ಹೆಚ್ಚು ಮಹಿಳೆಯರಿಗೆ ಉದ್ಯೋಗವನ್ನು ನೀಡುವ ಕೆಲಸವೂ ಕೂಡ ಜಿಲ್ಲೆಯ ವಿವಿಧೆಡೆ ನಡೆಯುತ್ತಿದೆ ಎಂದರು.
ನಮ್ಮೂರಿನ ವಿದ್ಯಾರ್ಥಿನಿಯರು ಜಿಲ್ಲೆಯಲ್ಲಿ ಉತ್ತಮ ಶಿಕ್ಷಣವನ್ನು ಪಡೆಯಲು ನೆರವಾಗುತ್ತದೆ. ಜಿಲ್ಲೆಯ ಶಿವಶರಣೆ ಅಕ್ಕ ಮಹಾದೇವಿಯ ೭೫ ಅಡಿಯ ಪ್ರತಿಮೆ ದೆಹಲಿಯ ಅಕ್ಷರಧಾಮದ ರೀತಿಯಲ್ಲಿ ನಿರ್ಮಿಸುವ ಕೆಲಸವನ್ನು ಮಾಡುತ್ತಿದ್ದೇವೆ ಎಂದರು.
ವಿಧಾನ ಪರಿಷತ್ ಸದಸ್ಯರಾದ ಎಸ್. ರುದ್ರೇಗೌಡ, ಆರ್. ಪ್ರಸನ್ನ ಕುಮಾರ್, ದೈವಜ್ಞ ಮಹಿಳಾ ಮಂಡಳಿಯ ರಾಜ್ಯಾಧ್ಯಕ್ಷರಾದ ವಿನಯಾ ರಾಯ್ಕರ್ ಮೊದಲಾದವರಿದ್ದರು.