ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಬಸ್ ಪಾಸ್ ನೀಡಲು ಆಗ್ರಹಿಸಿ ಜಿಲ್ಲಾ ಎನ್.ಎಸ್.ಯು.ಐ. ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ರಾಜ್ಯದಲ್ಲಿ ಶಾಲಾ ಕಾಲೇಜುಗಳು ಆರಂಭಗೊಂಡಿದ್ದರೂ, ವಿದ್ಯಾರ್ಥಿಗಳು ಶಾಲಾ, ಕಾಲೇಜ್ ಗೆ ತೆರಳಲು ಬಸ್ ಪಾಸ್ ಅವಶ್ಯವಾಗಿದೆ. ಆದರೆ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡುತ್ತಿರುವ ಬಿಜೆಪಿ ಸರ್ಕಾರದ ಧೋರಣೆಯನ್ನು ಖಂಡಿಸಿದರು.
ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಈ ಕೂಡಲೇ ಬಸ್ ಪಾಸ್ ನೀಡಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಎನ್.ಎಸ್.ಯು.ಐ. ರಾಜ್ಯ ಕಾರ್ಯದರ್ಶಿ ಬಾಲಾಜಿ, ಜಿಲ್ಲಾ ಕಾರ್ಯಾಧ್ಯಕ್ಷ ರವಿ, ನಗರ ಅಧ್ಯಕ್ಷ ವಿಜಯ್, ಚಂದ್ರೋಜಿ, ಸಾಗರ್, ವೆಂಕಟೇಶ್, ಅಬ್ದುಲ್ಲಾ, ಆಕಾಶ್, ಶರಣ್, ಗೌತಮ್, ಯುವ ಕಾಂಗ್ರೆಸ್ ನ ರಾಜ್ಯ ಕಾರ್ಯದರ್ಶಿ ಕೆ. ಚೇತನ್, ಯುವ ಕಾಂಗ್ರೆಸ್ ಮುಖಂಡ ಮಧುಸೂದನ್, ವಿನಯ್, ಗಿರೀಶ್, ಮೊಹಮ್ಮದ್ ನಿಹಾಲ್, ಇರ್ಫಾನ್ ಹಾಗೂ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
previous post
next post