Malenadu Mitra
ರಾಜ್ಯ ಶಿವಮೊಗ್ಗ

ವಿಶೇಷ ಜಿಲ್ಲಾಧಿಕಾರಿ, ಅರಣ್ಯಾಧಿಕಾರಿ ನೇಮಕ


ರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ  ಭೂಮಿ ಹಕ್ಕು: ಕೇಂದ್ರದ ಅನುಮತಿ ಪಡೆಯಲು ಮುಖ್ಯಮಂತ್ರಿಗಳ ಸೂಚನೆ

ಶರಾವತಿ ಮುಳುಗಡೆ ಸಂತ್ರಸ್ತರ ಭೂಮಿ ಡಿನೋಟಿಫಿಕೇಷನ್‌ಗೆ ಕೇಂದ್ರದ ಅನುಮತಿ ಪಡೆಯಬೇಕು ಮತ್ತು ಒಟ್ಟಾರೆ ಸಮಸ್ಯೆ ಬಗೆಹರಿಸಲು ವಿಶೇಷ ಜಿಲ್ಲಾಧಿಕಾರಿ ಮತ್ತು ಫಾರೆಸ್ಟ್ ಸೆಟ್ಲ್ ಮೆಂಟ್ ಆಫಿಸರ್ ನೇಮಕ ಮಾಡಬೇಕೆಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೂಚಿಸಿದ್ದಾರೆ.
ಗುರುವಾರ ಬೆಂಗಳೂರಿನಲ್ಲಿ ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದಂತೆ ಶರಾವತಿ ಮುಳುಗಡೆಗೆ ಒಳಗಾದ ರೈತರ ಸಮಸ್ಯೆಗಳು, ಶರಾವತಿ ಆಭಯಾರಣ್ಯ, ಅರಣ್ಯ ಹಕ್ಕುಗೂ ಸಿ& ಡಿ ಭೂಮಿಯ ಕುರಿತಂತೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.  ನ್ಯಾಯಾಲಯ ಭೂಮಿ ಹಕ್ಕು ನೀಡುವ ಸಂಬಂಧ ೧೯೭೮ರ ಅರಣ್ಯ ಸಂರಕ್ಷಣೆ  ಕಾಯ್ದೆ ಅನ್ವಯ ಕೇಂದ್ರ ಸರ್ಕಾರದ ಪೂರ್ವಾನುಮತಿ ಪಡೆಯಲು ಸಂಪೂರ್ಣ ಮಾಹಿತಿ ಸಂಗ್ರಹಿಸಿ ಕಳುಹಿಸುವಂತೆ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು.
ಈ ಸಂಬಂಧ ಉಚ್ಛನ್ಯಾಯಾಲಯ ತಡೆಯಾಜ್ಞೆ ನೀಡಿ ಸೂಚಿಸಿರುವಂತೆ ಅನುಸೂಚಿತ ಮೀಸಲು ಅರಣ್ಯ ಪ್ರದೇಶ ಡಿನೋಟಿಫಿಕೇಷನ್ ನಿರ್ಧಾರ ಕೈಗೊಳ್ಳುವ ಮುನ್ನ ಕೇಂದ್ರ ಸರ್ಕಾರದ ಅನುಮತಿ ಅಗತ್ಯವಿದೆ. ಈ ಬಗ್ಗೆ ಮೂರು ತಿಂಗಳೊಳಗೆ ಕಾರ್ಯೋನ್ಮಖರಾಗಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ವಿಶೇಷ ಜಿಲ್ಲಾಧಿಕಾರಿ ನೇಮಕ:
ಸಂತ್ರಸ್ತರಿಗೆ ಪುನರ್ ವಸತಿ ಕಲ್ಪಿಸಲು ಹೊಸ ಸಮೀಕ್ಷೆಯನ್ನು ನಡೆಸಬೇಕಿದ್ದು, ಈ ಕಾರ್ಯವನ್ನು ೩-೫ ತಿಂಗಳೊಳಗಾಗಿ ಮುಕ್ತಾಯ ಮಾಡಿ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಬೇಕು. ಇದಕ್ಕಾಗಿ ವಿಶೇಷ ಜಿಲ್ಲಾಧಿಕಾರಿ,  ಅರಣ್ಯ ವ್ಯವಸ್ಥಾಪನಾಧಿಕಾರಿಗಳನ್ನು ತಕ್ಷಣವೇ ನೇಮಿಸಬೇಕು.
 ಸಂರಕ್ಷಿತ ಅರಣ್ಯಕ್ಕೆ ಸಂಬಂಧಿಸಿದಂತೆ ಬಾಕಿ ಇರುವ ಅರ್ಜಿಗಳನ್ನು ಆದ್ಯತೆ ಮೇರೆಗೆ ಇತ್ಯರ್ಥಗೊಳಿಸಲು ಮುಖ್ಯಮಂತ್ರಿಗಳು ಸೂಚಿಸಿದರು. ಕಂದಾಯ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಜಂಟಿ ಸಭೆ ನಡೆಸಿ ಜನರಿಗೆ ಅನುಕೂಲ ಕಲ್ಪಿಸುವಂತೆ ಅವರು ತಿಳಿಸಿದರು.

ಶೆಟ್ಟಿಹಳ್ಳಿ ಅಭಯಾರಣ್ಯ ಗಡಿಗಳನ್ನು ಪುನರ್ ನಿಗದಿ:
 ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಾತನಾಡಿ ಶಿವಮೊಗ್ಗ ನಗರದ ಪ್ರಮುಖ ಭಾಗಗಳು ಸೇರಿದಂತೆ ಜನವಸತಿ ಹಾಗೂ ಸರ್ಕಾರಿ ಕಟ್ಟಡಗಳಿರುವ ಪ್ರದೇಶಗಳು ಅಭಯಾರಣ್ಯದ  ವ್ಯಾಪ್ತಿಗೆ ಬರುತ್ತಿದ್ದು, ಗಡಿ ಪುನರ್ ನಿಗದಿಪಡಿಸುವುದರಿಂದ ಸಮಸ್ಯೆ ಬಗೆಹರಿಸಬಹುದು ಎಂದರು. ಈ ಬಗ್ಗೆ ಈಗಾಗಲೇ ಕ್ರಮ ಜರುಗಿಸಲಾಗಿದ್ದು, ವನ್ಯಜೀವಿ ಪ್ರದೇಶವನ್ನು ನಿಗದಿಪಡಿಸಲಾಗುತ್ತಿದೆ ಎಂದು ಅಧಿಕಾರಿಗಳು ಸಭೆಯ ಗಮನಕ್ಕೆ ತಂದರು. ಗಡಿ ನಿಗದಿಪಡಿಸುವ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.

ಲ್ಲು ಗಣಿಗಾರಿಕೆ:

 ಕಲ್ಲು ಗಣಿಗಾರಿಕೆ ಸ್ಥಗಿತಗೊಂಡಿರುವುದರಿಂದ ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ತೊಡಕುಂಟಾಗಿದೆ ಎಂದು ಜಿಲ್ಲೆಯ ಶಾಸಕರು ಮಾಡಿದ ಮನವಿಗೆ ಮುಖ್ಯಮಂತ್ರಿಗಳು ಪ್ರತಿಕ್ರಿಯಿಸಿ ಜಿಲ್ಲೆಯಲ್ಲಿ ಪರಿಸರ ಸೂಕ್ಷ್ಮ ವಲಯದ ವ್ಯಾಪ್ತಿಗೆ ಬಾರದ ಪರವಾನಗಿ ಹೊಂದಿರುವ ಕಲ್ಲು ಗಣಿಕಾರಿಕೆಗಳನ್ನು ಪ್ರಾರಂಭಿಸಲು ಅನುಮತಿ ನೀಡುವಂತೆ ಸೂಚಿಸಿದರು. ವಾರದೊಳಗೆ ಸಾಧ್ಯವಿರುವಲ್ಲಿ ಕಲ್ಲು ಗಣಿಗಾರಿಕೆಯನ್ನು ಪ್ರಾರಂಭಿಸಲು ಅನುಮತಿ ನೀಡಲು ಅವರು ಸೂಚಿಸಿದರು.

ಶಿವಮೊಗ್ಗ, ಶಿಕಾರಿಪುರ ರಾಣೆಬೆನ್ನೂರು ಹೊಸ ರೈಲ್ವೆ ಮಾರ್ಗದ ಅರಣ್ಯ ಇಲಾಖೆ ಯೋಜನೆಗಳ ಪ್ರಗತಿಯ  ವೇಗ ಹೆಚ್ಚಿಸುವ ಬಗ್ಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು  ಮುಖ್ಯಮಂತ್ರಿಗಳ ಗಮನಕ್ಕೆ ತಂದರು.  ಶಿವಮೊಗ್ಗ ಜಿಲ್ಲೆಗೆ ವಿಶೇಷ ಅರಣ್ಯ ಅಧಿಕಾರಿಗಳನ್ನು ನೇಮಿಸಲು ಮುಖ್ಯಮಂತ್ರಿಗಳು ಸೂಚಿಸಿದರು. ಕುವೆಂಪು ವಿಶ್ವವಿದ್ಯಾಲಯದ ಅರಣ್ಯ ಭೂಮಿ ಗುತ್ತಿಗೆ ನವೀಕರಣಕ್ಕೆ ಅರಣ್ಯ ಮತ್ತು ಉನ್ನತ ಶಿಕ್ಷಣ ಇಲಾಖೆ ಅಧಿಕಾರಿಗಳು ತ್ವರಿತವಾಗಿ ಕ್ರಮ ಜರುಗಿಸುವಂತೆಯೂ ಮುಖ್ಯಮಂತ್ರಿಗಳು ಸೂಚಿಸಿದರು.

 ಆರಂಭದಲ್ಲಿ ಮಾತನಾಡಿದ ಶಾಸಕ ಹರತಾಳು ಹಾಲಪ್ಪ, ಶರಾವತಿ ಹಿನ್ನೀರಿನ ಪ್ರದೇಶ ಸುಮಾರು ೧೨ಸಾವಿರ ಕುಟುಂಬ ಗಳು ಬರಲಿವೆ, ಶರಾವತಿ ಅರಣ್ಯ ಪ್ರದೇಶದಲ್ಲಿ ೧೩೨ ಕುಟುಂಬಗಳು ಮುಳುಗಡೆಯಾಗಿ ೧೨ಸಾವಿರ ಕುಟುಂಬಗಳು ಸ್ಥಳಾಂತರಗೊಂಡಿವೆ. ಸ್ಥಳಾಂತರಗೊಂಡ ಕುಟುಂಬಗಳು ಈಗಲೂ ಈ  ಅರಣ್ಯ ಪ್ರದೇಶದಲ್ಲಿ ೫೦ರಿಂದ ೬೦ ವರ್ಷಗಳಿಂದ ವಾಸವಾಗಿವೆ. ಕೆಲವರಿಗೆ ಭೂಮಿ ಬಿಡುಗಡೆಯಾಗಿದೆ. ಇನ್ನೂ ಕೆಲವರಿಗೆ ಭೂಮಿ ಬಿಡುಗಡೆ ಯಾಗಬೇಕಿದೆ. ಅವರು ವಾಸವಾಗಿ ಇನ್ನೂ ೭೫ ವರ್ಷವಾಗಿಲ್ಲ. ಆದರೂ ಕಾನೂನಿನಲ್ಲಿ ಭೂಮಿ ನೀಡಲು ಅವಕಾಶವಿದೆ. ಅತೀ ಹೆಚ್ಚು ಹೊಸನಗರ, ಶಿವಮೊಗ್ಗ ತಾಲೂಕಿನ ಪ್ರದೇಶಗಳು ಮುಳಗಡೆ ವ್ಯಾಪ್ತಿಗೆ ಬರಲಿವೆ. ಕೇಂದ್ರ ಸರ್ಕಾರದ ಪೂರ್ವಾನುಮತಿ ಪಡೆದು ಸಂತ್ರಸ್ತರಿಗೆ ಭೂಮಿ ನೀಡಬೇಕು ಎಂದು ಸಭೆಯ ಗಮನಕ್ಕೆ ತಂದರು.

ಚಿವರಾದ ಅರಬೈಲ್ ಶಿವರಾಮ್,,ಉಮೇಶ್ ಕತ್ತಿ, ಸುನಿಲ್ ಕುಮಾರ್,  ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್, ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಅಶೋಕ್ ನಾಯ್ಕ್,ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ಬಿಜೆಪಿ ಅಧ್ಯಕ್ಷ  ಟಿ.ಡಿ. ಮೇಘರಾಜ್, ಕಸ ಸಂಸ್ಕರಣಾ ಅಭಿವೃದ್ದಿ ನಿಗಮ ಅಧ್ಯಕ್ಷ ಸತೀಶ್ ,  ಸ್ಥಳೀಯ ಮುಖಂಡರಾದ, ವಕೀಲ ಕೆ.ವೈ.ರಾಮಚಂದ್ರಪ್ಪ, ಕಾಳನಾಯ್ಕ್, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಅಲವಳ್ಳಿ ವಿರೇಶ್, ಮಾಜಿ ಜಿಲ್ಲಾ ಪಂಚಾಯ್ತಿ ಸದಸ್ಯ ಸುರೇಶ್ ಸ್ವಾಮಿರಾವ್,  ,ಜಯನಗರ ಪ್ರಹ್ಲಾದ್, ಗಿರೀಶ್ ಗೌಡ, ಮೆಣಸೆ ಆನಂದ್ ಚರ್ಚೆಯಲ್ಲಿ ಭಾಗವಹಿಸಿದ್ದರು.

ಸಂಪೂರ್ಣವಾಗಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಅನುಮತಿ ಪಡೆದು ಭೂಮಿ ಬಿಡುಗಡೆ ಮಾಡಬೇಕಾಗುತ್ತದೆ. ಇದಕ್ಕಾಗಿ ವಿಶೇಷ ಜಿಲ್ಲಾಧಿಕಾರಿಗಳನ್ನು ನೇಮಕ ಮಾಡಬೇಕುಆರಗ ಜ್ಞಾನೇಂದ್ರ, ಗೃಹ ಸಚಿವ

ReplyForward

Ad Widget

Related posts

ಲಾಕ್‍ಡೌನ್ ಕಟ್ಟುನಿಟ್ಟಿನ ಜಾರಿಗೆ ಎಲ್ಲರ ಸಹಕಾರ ಅಗತ್ಯ

Malenadu Mirror Desk

ಕವಲೇದುರ್ಗಶ್ರೀ ಕೋವಿಡ್‌ಗೆ ಬಲಿ

Malenadu Mirror Desk

ನಾರಾಯಣ ಗುರು ಪಠ್ಯ ಬದಲಾವಣೆ ವಿರೋಧಿಸಿ ಪ್ರತಿಭಟನೆ ಈಡಿಗ ಅಭಿವೃದ್ಧಿ ನಿಗಮ ಸ್ಥಾಪನೆಗೆ SNGV ಒತ್ತಾಯ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.