ಶಿವಮೊಗ್ಗ ನಗರ ಸಮೀಪದ ಸಮೀಪದ ಕಲ್ಲೂರು ಮಂಡ್ಲಿಯಲ್ಲಿ ಉದ್ಯಮಿಯೊಬ್ಬರನ್ನು ದುಷ್ಕರ್ಮಿಗಳು ಕೊಲೆ ಮಾಡಿರುವ ಘಟನೆ ನಡೆದಿದೆ. ಇಲಿಯಾಸ್ ನಗರದ ಸೈಯದ್ ಸಾದಿಕ್ (40) ಹತ್ಯೆಯಾಗಿರುವ ವ್ಯಕ್ತಿಯಾಗಿದ್ದು, ತೋಟವೊಂದರಲ್ಲಿ ಕಲ್ಲು ಎತ್ತಿಹಾಕಿ ಸಾಯಿಸಲಾಗಿದೆ. ಶುಕ್ರವಾರ ಸಂಜೆ 7 ಗಂಟೆ ಹೊತ್ತಿಗೆ ದುಷ್ಕøತ್ಯ ಎಸಗಲಾಗಿದೆ. ಸಾದಿಕ್ ಅವರು ರಿಯಲ್ ಎಸ್ಟೇಟ್ ಉದ್ಯಮ ನಡೆಸುತ್ತಿದ್ದು, ಈ ವ್ಯವಹಾರಕ್ಕೆ ಸಂಬಂಧಿಸಿದಂತೆಯೇ ಕೊಲೆಯಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ದುಷ್ಕರ್ಮಿಗಳ ಪತ್ತೆಗೆ ತಂಡ ರಚಿಸಿದ್ದು, ಸ್ಥಳಕ್ಕೆ ಹಿರಿಯ ಪೊಲಿಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಿದೆ. ತುಂಗಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.