ಬೆಂಗಳೂರಿನ ಕನ್ನಡ ಸಾಂಸ್ಕೃತಿಕ ಆಕಾಡೆಮಿ ಮಲೆನಾಡಿನ ಉದ್ಯಮಿ ಹಾಗೂ ಸಮಾಜಸೇವಕ ಡಾ.ಕೆ.ಸುರೇಶ್ ಬಾಳೇಗುಂಡಿ ಅವರಿಗೆ ಸಮಾಜ ರತ್ನ ಪ್ರಶಸ್ತಿ ನೀಡಿ ಗೌರವಿಸಿದೆ.
ಸಾಮಾಜಿಕ, ಧಾರ್ಮಿಕ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಸುರೇಶ್ ಅವರ ಸೇವೆಯನ್ನು ಪರಿಗಣಿಸಿ ಸಂಸ್ಥೆ ಈ ಪ್ರಶಸ್ತಿ ನೀಡಿದೆ.
ಬೆಂಗಳೂರಿನ ಗಾಂಧಿಭವನದಲ್ಲಿ ಭಾನುವಾರ ನಡೆದ ಸಮಾರಂಭದಲ್ಲಿ ಸುರೇಶ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಮಾರಂಭದಲ್ಲಿ ಕೊಳದ ಮಠದ ಡಾ. ಶಾಂತವೀರ ಮಹಾಸ್ವಾಮೀಜಿ ಅಧ್ಯಕ್ಷತೆವಹಿಸಿದ್ದರು. ಬೆಂಗಳೂರಿನ ಶ್ರೀವಿದ್ಯಾ ಮಹಾ ಸಂಸ್ಥಾನದ ಶ್ರೀಸಾದ್ವಿ ಯೋಗಿನಿಮಾತಾ, ಮಾಜಿ ಸಚಿವ ಪಿ ಜಿ ಆರ್ ಸಿಂಧ್ಯಾ ಮಾಜಿ ವಿಧಾನ ಪರಿಷತ್ ಸದಸ್ಯ ಡಿ. ಎಸ್ ವೀರಯ್ಯಾ ಮತ್ತಿತರರು ಹಾಜರಿದ್ದರು.