Malenadu Mitra
ರಾಜ್ಯ ಶಿವಮೊಗ್ಗ

ರವಿ ಹೆಗಡೆ, ಬಿಎಂ. ಹನೀಫ್ ಸೇರಿ 18 ಪತ್ರಕರ್ತರಿಗೆ ವಾರ್ಷಿಕ ಪ್ರಶಸ್ತಿ

ಶಿವಮೊಗ್ಗದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2019 ನೇ ಸಾಲಿನ ರಾಜ್ಯಮಟ್ಟದ ವಾರ್ಷಿಕ ದತ್ತಿನಿಧಿ ಪ್ರಶಸ್ತಿ ಘೋಷಿಸಿದ್ದು,ಹಿರಿಯ ಪತ್ರಕರ್ತ ರವಿಹೆಗಡೆ, ಬಿ.ಎಂ.ಹನೀಫ್, ಶೇಷಚಂದ್ರಿಕಾ ಸೇರಿದಂತೆ ಹಲವರಿಗೆ ವಿವಿಧ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. ಪ್ರಶಸ್ತಿ ಪ್ರದಾನ ಸಮಾರಂಭ ಶಿವಮೊಗ್ಗದಲ್ಲಿ ಅ.3 ರಂದು ನಡೆಯಲಿದೆ. ಈ ಸಂಬಂಧ ಎಲ್ಲಾ ಸಿದ್ದತೆ ನಡೆದಿದೆ ಎಂದು ಶಿವಮೊಗ್ಗ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ವಿ.ಶಿವಕುಮಾರ್ ಹೇಳಿದರು.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ ಜಿಲ್ಲೆಯಿಂದ ಕೊಡಮಾಡುವ ಎಂ.ನಾಗೇಂದ್ರರಾವ್ ದತ್ತಿನಿಧಿ ಪ್ರಶಸ್ತಿಗೆ ಎನ್.ಡಿ.ಶಾಂತಕುಮಾರ್, ‘ಮಿಂಚು ಶ್ರೀನಿವಾಸ್ ದತ್ತಿನಿಧಿ ಪ್ರಶಸ್ತಿಗೆ ರಾಮಸ್ವಾಮಿ ಹುಲಕೋಡು, ಹಾಗೂ ಸಿಟಿ ಹೈಲೆಟ್ಸ್ ನ ಸಂಪಾದಕ ಪಿ ಸುನೀಲ್ ಕುಮಾರ್ ಅವರು ಎಸ್.ಹೆಚ್. ರಂಗಸ್ವಾಮಿ ಪ್ರಶಸ್ತಿಗೆ ಭಾಜನರಾಗಿದ್ದಾರೆ ಎಂದರು.
ಪ್ರಕಾಶ್ ಸಿ.ರಾಮಜೋಗಿಹಳ್ಳಿ ಹಾಗೂ ವಿಜಯಕರ್ನಾಟಕದ ತೀರ್ಥಹಳ್ಳಿ ವರದಿಗಾರ ಎಂ.ಕೆ. ರಾಘವೇಂದ್ರ ಮೇಗರವಳ್ಳಿ ಅವರು ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಕೊಡಮಾಡುವ ವಿಶೇಷ ಪ್ರಶಸ್ತಿಗೆ ಆಯ್ಕೆಮಾಡಲಾಗಿದೆ. ಪತ್ರಿಕಾ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿರುವ ಪತ್ರಕರ್ತರನ್ನು ಗುರುತಿಸಿ ಗೌರವಿಸುವ ಮೂಲಕ ಅವರನ್ನು ವೃತ್ತಿಪರವಾಗಿ ಇನ್ನಷ್ಟು ಪೆÇ್ರೀತ್ಸಾಹಿಸುವ ನಿಟ್ಟಿನಲ್ಲಿ ಪ್ರಶಸ್ತಿ ನೀಡಲಾಗುತ್ತಿದೆ ಎಂದರು.


ಪ್ರಶಸ್ತಿ ಪ್ರದಾನ ಸಮಾರಂಭವನ್ನು ಅ. 3ರ ಭಾನುವಾರ ಸಂಜೆ 5ಕ್ಕೆ ಶಿವಮೊಗ್ಗ ನಗರದ ಕಂಟ್ರಿಕ್ಲಬ್ ಆವರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಉದ್ಘಾಟಿಸಲಿದ್ದಾರೆ. ಕರೋನಾ ಸಂಕಷ್ಟದ ಸಂದರ್ಭದಲ್ಲಿ ಪತ್ರಕರ್ತರಿಗೆ ಆಸರೆಯಾಗಿ ನಿಂತ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಗುತ್ತಿದೆ. ‘ಸಿಹಿಮೊಗೆ ಮಾಧ್ಯಮ’ ಹೆಸರಿನ ವಿಶೇಷ ಸ್ಮರಣ ಸಂಚಿಕೆಯನ್ನು ಸಂಸದ ಬಿ.ವೈ ರಾಘವೇಂದ್ರ ಬಿಡುಗಡೆ ಮಾಡಲಿದ್ದು, ಶಿವಮೊಗ್ಗೆಯ ಪತ್ರಿಕಾ ಛಾಯಾಗ್ರಾಹಕರ ಸಹಭಾಗಿತ್ವದಲ್ಲಿ ಆಯೋಜಿಸಿರುವ ವಿಶೇಷ ಛಾಯಾಚಿತ್ರ ಪ್ರದರ್ಶನವನ್ನು ವಿಧಾನಪರಿಷತ್ ಸದಸ್ಯ ಎಸ್ ರುದ್ರೇಗೌಡ ಉದ್ಘಾಟಿಸಲಿದ್ದಾರೆ. ಪ್ರಶಸ್ತಿಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರದಾನ ಮಾಡಲಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಆಶಯ ನುಡಿಗಳನ್ನಾಡಲಿದ್ದು, ಶಿವಮೊಗ್ಗ ಜಿಲ್ಲಾಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರೂ, ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರಾದ ಕೆ.ವಿ.ಶಿವಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ, ಶಾಸಕರಾದ ಬಿ.ಕೆ.ಸಂಗಮೇಶ್ವರ, ಕೆ.ಬಿ.ಅಶೋಕನಾಯ್ಕ, ಕುಮಾರ್ ಬಂಗಾರಪ್ಪ, ವಿಧಾನಪರಿಷತ್ ಸದಸ್ಯ ಆರ್. ಪ್ರಸನ್ನಕುಮಾರ್, ಕರ್ನಾಟಕ ಆರ್ಯವೈಶ್ಯ ಸಮುದಾಯದ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್, ಮಹಾಪೌರರಾದ ಸುನೀತಾ ಅಣ್ಣಪ್ಪ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಶ್ರೀಕಾಂತ್, ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯ ಗೋಪಾಲ್ ಎಸ್. ಯಡಗೆರೆ ಪಾಲ್ಗೊಳ್ಳಲಿದ್ದು, ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಯ್ಯ, ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಏಷ್ಯಾ ವಿಭಾಗದ ಸಂಚಾಲಕ ಹೆಚ್.ಬಿ.ಮದನಗೌಡ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕ ಎನ್. ರವಿಕುಮಾರ್ ಉಪಸ್ಥಿತರಿರಲಿದ್ದಾರೆ ಎಂದು ವಿವರಿಸಿದರು.

ವಾರ್ಷಿಕ ದತ್ತಿ ಪ್ರಶಸ್ತಿ ಪಡೆದವರು
ಡಿವಿಜಿ ಪ್ರಶಸ್ತಿ: ರವಿ ಹೆಗಡೆ, ಸಂಪಾದಕರು, ಕನ್ನಡ ಪ್ರಭ ಮತ್ತು ಸುವರ್ಣ ನ್ಯೂಸ್, ಎಚ್. ಎಸ್.ದೊರೆಸ್ವಾಮಿ ಪ್ರಶಸ್ತಿ: ಬಿ.ಎಂ ಹನೀಫ್, ಪ್ರಜಾವಾಣಿ, ಗೊಮ್ಮಟ ಮಾಧ್ಯಮ ಪ್ರಶಸ್ತಿ: ಎಸ್. ಎನ್.ಅಶೋಕಕುಮಾರ್, ಸಂಪಾದಕರು,ಗೊಮ್ಮಟವಾಣಿ. ಪಾಟೀಲ್ ಪುಟ್ಟಪ್ಪ ಪ್ರಶಸ್ತಿ : ಎಸ್.ಕೆ.ಶೇಷಚಂದಿÁಗೋಷ್ಠಿಯಲ್ಲಿ ರಾಜ್ಯ ಪತ್ರಕರ್ತರ ಸಂಘದ ಶಿವಮೊಗ್ಗ ಪ್ರತಿನಿಧಿ ಎನ್. ರವಿಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೈದ್ಯ, ನಗರ ಕಾರ್ಯದರ್ಶಿ ವಿ.ಟಿ.ಅರುಣ್ ಉಪಸ್ಥಿತರಿದ್ದರು.
ಬಾಕ್ಸ್ರ್‍ಕ, ಹಿರಿಯ ಪತ್ರಕರ್ತರು, ಎಸ್.ವಿ.ಜಯಶೀಲರಾವ್ ಪ್ರಶಸ್ತಿ: ಅ.ಚ.ಶಿವಣ್ಣ, ಹಿರಿಯ ಪತ್ರಕರ್ತರು , ಪಿ.ಆರ್.ರಾಮಯ್ಯಪ್ರಶಸ್ತಿ: ಯು.ಎಸ್. ಶೆಣೈ, ಸಂಪಾದಕರು, ಕುಂದಪ್ರಭ, ಗರುಡನಗಿರಿ ನಾಗರಾಜ್ ಪ್ರಶಸ್ತಿ: ಕೆ.ಆರ್.ಮಂಜುನಾಥ್, ಸಂಪಾದಕರು, ಮಲೆನಾಡ ಮಂದಾರ, ಎಚ್.ಕೆ.ವೀರಣ್ಣಗೌಡ ಪ್ರಶಸ್ತಿ :ಕೋಡಿ ಹೊಸಳ್ಳಿ ರಾಮಣ್ಣ, ಹಿರಿಯ ಪತ್ರಕರ್ತರು, ಕಿಡಿ ಶೇಷಪ್ಪ ಪ್ರಶಸ್ತಿ: ಕೆ.ಎಂ. ರೇಖಾ, ಸಂಪಾದಕರು, ಹೊಸಪೇಟೆಟೈಮ್ಸ್,ಪಿ.ರಾಮಯ್ಯ ಪ್ರಶಸ್ತಿ: ರೇವಣ್ಣಸಿದ್ದಯ್ಯ ಮಹಾನುಭವಿಮಠ, ಸಂಪಾದಕರು, ಶಿಡ್ಲು ಪತ್ರಿಕೆ,ಯಶೋಧಮ್ಮ ಜಿ ನಾರಾಯಣ ಪ್ರಶಸ್ತಿ: ರಶ್ಮಿ, ಬ್ಯೂರೋ ಮುಖ್ಯಸ್ಥೆ, ಪ್ರಜಾವಾಣಿ, ಹುಬ್ಬಳ್ಳಿ

Ad Widget

Related posts

ಸರಳ ಸಜ್ಜನಿಕೆ ವ್ಯಕ್ತಿತ್ವದ ಕೆ.ಬಿ.ರಾಮಪ್ಪ ,ಪ್ರೆಸ್ ಟ್ರಸ್ಟ್‌ನಲ್ಲಿ ಅಗಲಿದ ಹಿರಿಯ ಪತ್ರಕರ್ತರಿಗೆ ಸಂತಾಪ

Malenadu Mirror Desk

ಉದ್ರಿಕ್ತರ ನಿಯಂತ್ರಿಸಲು ಪೊಲೀಸರು ಹೈರಾಣ, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ, ನಿಷೇಧಾಜ್ಞೆ ನಡುವೆಯೂ ಮೆರವಣಿಗೆ, ನೀವು ಹೇಳಿದಾಕ್ಷಣ ಎನ್‌ಕೌಂಟರ್ ಮಾಡಲಾಗದು: ಈಶ್ವರಪ್ಪ

Malenadu Mirror Desk

ಮಲೆನಾಡಲ್ಲಿ ವರ್ಷಧಾರೆ, ಚುರುಕಾದ ಕೃಷಿ ಚಟುವಟಿಕೆ, ಭರ್ತಿಯತ್ತ ಗಾಜನೂರು ಡ್ಯಾಂ, ಮಾಣಿಯಲ್ಲಿ ದಾಖಲೆ, ಜೋಗಕ್ಕೆ ಜೀವಕಳೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.