Malenadu Mitra
ರಾಜ್ಯ ಶಿವಮೊಗ್ಗ

ಸೇವೆ ಮತ್ತು ಸಮರ್ಪಣಾ ಅಭಿಯಾನ

 ಸಮರ್ಪಣಾ ಮನೋಭಾವದಿಂದ ಸಲ್ಲಿಸಿದ ಸೇವೆ ಭಗವಂತನಿಗೆ ಸಲ್ಲುತ್ತದೆ ಎಂದು ಪ್ರಧಾನಿ ಮೋದಿ ತೋರಿಸಿಕೊಟ್ಟಿದ್ದಾರೆ ಎಂದು ರಾಜ್ಯ ಬಿಜೆಪಿ ಪ್ರಕೋಷ್ಠಗಳ ಸಂಚಾಲಕ ಗಿರೀಶ್ ಪಟೇಲ್ ಹೇಳಿದ್ದಾರೆ.
ಅವರು  ನಗರದ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಬಿಜೆಪಿ ಶಿವಮೊಗ್ಗ ನಗರದ ವತಿಯಿಂದ ಸೇವೆ ಮತ್ತು ಸಮರ್ಪಣಾ ಅಭಿಯಾನದಡಿ ಪ್ರಧಾನಿ ಮೋದಿ ಅವರ ೭೧ ನೇ ಜನ್ಮದಿನದ ಅಂಗವಾಗಿ ಪದವಿ ವಿದ್ಯಾರ್ಥಿಗಳು, ವಿದ್ಯಾರ್ಥಿನಿಯರಿಗೆ ಆತ್ಮನಿರ್ಭರ ಭಾರತ ಪರಿಕಲ್ಪನೆ, ನನ್ನ ಮತ್ತು ನಮ್ಮ ಪಾತ್ರ ವಿಷಯದ ಭಾಷಣ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು.
ಪ್ರಜಾಪ್ರಭುತ್ವದಲ್ಲಿ ಒಬ್ಬ ವ್ಯಕ್ತಿ ಎಷ್ಟು ಎತ್ತರಕ್ಕೆ ಬೇಕಾದರೂ ಏರಬಲ್ಲರು ಎಂಬುದಕ್ಕೆ ಪ್ರಧಾನಿ ಮೋದಿ ನಿದರ್ಶನವಾಗಿದ್ದಾರೆ. ದೇಶದ ಅಭಿವೃದ್ಧಿಗೆ ೩೮೪ ಕ್ಕೂ ಹೆಚ್ಚು ವಿಶೇಷ ಯೋಜನೆಗಳನ್ನು ಅನುಷ್ಠಾನಗೊಳಿಸಿ ಕಾರ್ಯರೂಪಕ್ಕೆ ತಂದ ಅಪರೂಪದ ಪ್ರಧಾನಿ ನಮಗೆ ಸಿಕ್ಕಿದ್ದಾರೆ ಎಂದರು.
ಮೋದಿ ಅಧಿಕಾರ ಸ್ವೀಕರಿಸಿ ೨೦ ವರ್ಷಗಳ ಅವಧಿಯಲ್ಲಿ ಮಾಡಿದ ಸಾಧನೆಗಳನ್ನು ಈ ಕಾರ್ಯಕ್ರಮಗಳ ಮೂಲಕ ಅರಿಯುವ ಪ್ರಯತ್ನವಿದು ಎಂದರು.
ಮೇಯರ್ ಸುನಿತಾ ಅಣ್ಣಪ್ಪ, ಪಾಲಿಕೆ ಸದಸ್ಯರಾರದ ಎಸ್. ಜ್ಞಾನೇಶ್ವರ್, ಚನ್ನಬಸಪ್ಪ, ಭಾಷಣ ಸ್ಪರ್ಧೆಯ ತೀರ್ಪುಗಾರ ವೆಂಕಟೇಶ್, ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಮೋಹನ್ ರೆಡ್ಡಿ, ಸಂತೋಷ್ ಬಳ್ಳೆಕೆರೆ, ನಗರ ಮಹಿಳಾ ಮೋರ್ಚಾ ಸುರೇಖಾ ಮುರಳೀಧರ್ ಮೊದಲಾದವರಿದ್ದರು.

Ad Widget

Related posts

ಶಿವಮೊಗ್ಗದ 6 ಟ್ರೈನ್ ಗೆ ಹೊಸ ನಂಬರ್ : ಜನವರಿ 1 ರಿಂದಲೇ ಹೊಸ ಸಂಖ್ಯೆ ಚಾಲ್ತಿ

Malenadu Mirror Desk

ಗ್ರಾಮಗಳ ಸಮಗ್ರ ಅಭಿವೃದ್ಧಿ ಗ್ರಾಮ ಪಂಚಾಯತ್ ಜವಾಬ್ದಾರಿ: ಸಚಿವ ಕೆ.ಎಸ್.ಈಶ್ವರಪ್ಪ

Malenadu Mirror Desk

ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.