Malenadu Mitra
ರಾಜ್ಯ ಶಿವಮೊಗ್ಗ

ಮೋದಿ ಸರಕಾರ ದೇಶ ಭಕ್ತಿ ಬೆಳೆಸಿದೆ: ಸಂಸದ ಬಿ.ವೈ. ರಾಘವೇಂದ್ರ

ಸ್ವಾತಂತ್ರ್ಯ ಬಂದು 65 ವರ್ಷಗಳವರೆಗೆ ದೇಶದ ಜನತೆಗೆ ಆಳಿದ ಸರ್ಕಾರಗಳು ನಮ್ಮದು ಎಂದು ಅನ್ನಿಸಿಲ್ಲ. ಆದರೆ, ಮೋದಿ ನೇತೃತ್ವದ ಸರ್ಕಾರ 7 ವರ್ಷಗಳಲ್ಲಿ ನಡೆಸಿದ ಅಭಿವೃದ್ಧಿಪರ ಆಡಳಿತ ದೇಶದ ಜನರಲ್ಲಿ ದೇಶಪ್ರೇಮವನ್ನು ಬೆಳೆಸುವುದರ ಜೊತೆಗೆ ಶಕ್ತಿ ತುಂಬಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ.


 ಶಿವಮೊಗ್ಗ ನಗರದ ವೀರಭದ್ರೇಶ್ವರ ಚಿತ್ರಮಂದಿರದಲ್ಲಿ ಶಿವಮೊಗ್ಗ ಜಿಲ್ಲಾ ಬಿಜೆಪಿ ಮೂರು ದಿನಗಳ ಕಾಲ ಹಮ್ಮಿಕೊಂಡಿರುವ ಸೇವೆ ಮತ್ತು ಸಮರ್ಪಣಾ ಅಭಿಯಾನದ ಸಮಾರೋಪದ ಅಂಗವಾಗಿ ನವಭಾರತ ಮೇಳ ಉದ್ಘಾಟಿಸಿ ಮಾತನಾಡಿದರು.
ದೇಶದಲ್ಲಿ ಕೊರೋನಾದಂತಹ ಸಂಕಷ್ಟದ ಸ್ಥಿತಿಯಲ್ಲೂ ಕೂಡ ಆರ್ಥಿಕ, ಸಾಮಾಜಿಕ ಬಲವರ್ಧನೆಗೆ ಮೋದಿ ನೇತೃತ್ವದ ಸರ್ಕಾರ ಅನೇಕ ಕೊಡುಗೆ ನೀಡಿದ್ದು, ಯುವಶಕ್ತಿಗೆ ವಿವಿಧ ಕ್ಷೇತ್ರಗಳಲ್ಲಿ 17 ಕೋಟಿ ಗೂ ಹೆಚ್ಚು ಉದ್ಯೋಗ ಸೃಷ್ಠಿಸಿ ಸ್ವಾಭಿಮಾನದ ಬದುಕು ಕಲ್ಪಿಸುವಲ್ಲಿ ಸಹಕಾರ ನೀಡಿದೆ. ಕಾಂಗ್ರೆಸ್ ನವರು ಏನೇ ಆರೋಪ ಮಾಡಲಿ. ಆದರೆ, ಅಂಕಿ, ಅಂಶ ಗಮನಿಸಿದಾಗ, ಈ ಬಗ್ಗೆ ಮಾಹಿತಿ ಲಭ್ಯವಾಗುತ್ತದೆ. ಯುವಶಕ್ತಿಗೆ ಸ್ವ ಉದ್ಯೋಗದ ಅವಕಾಶ ಕೇಂದ್ರ ಸರ್ಕಾರ ಕಲ್ಪಿಸಿದೆ. ಅಸಂಘಟಿತ ಕಾರ್ಮಿಕರ ರಕ್ಷಣೆಗೆ ಮತ್ತು ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಿದೆ. ದೇಶದ ಭದ್ರತೆಗೆ ಸಂಬಂಧಿಸಿದಂತೆ ಅನೇಕ ಕಠಿಣ ಸವಾಲುಗಳು ಎದುರಾದರೂ ಸಮರ್ಥವಾಗಿ ಎದುರಿಸಲಾಗಿದೆ ಎಂದರು.

ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಅಧ್ಯಕ್ಷ ಸ್ಥಾನ ಸಿಕ್ಕಿದ್ದು, ಅಲ್ಲಿ ತಮ್ಮ ಪ್ರತಿಭೆಯಿಂದ ದೈತ್ಯ ರಾಷ್ಟ್ರಗಳಾದ ಅಮೆರಿಕ ಮತ್ತು ಚೀನಾವನ್ನು ಒಂದೇ ವೇದಿಕೆಯಲ್ಲಿ ತಂದು ಅವರಿಗೂ ಸಲಹೆ ನೀಡುವಂತಹ ಕೆಲಸ ಮಾಡಿ ಅವರ ಭಿನ್ನಾಭಿಪ್ರಾಯವನ್ನು ಶಮನ ಮಾಡುವ ನಿಟ್ಟಿನಲ್ಲಿ ಮೋದಿ ಅವರ ಚತುರತೆ ಮತ್ತು ಅವರ ಆಡಳಿತ ವೈಖರಿ ವಿಶ್ವದಲ್ಲೇ ಅವರಿಗೆ ಮೊದಲ ಸ್ಥಾನ ತಂದಿದೆ. ಮುಂದಿನ ದಿನಗಳಲ್ಲಿ ವಿಶ್ವದ ಆಡಳಿತವನ್ನೇ ತನ್ನ ತೆಕ್ಕೆಗೆ ತೆಗೆದುಕೊಳ್ಳುವ ಸೂಚನೆಯನ್ನು ಮೋದಿ ಅವರ ಆಡಳಿತ ನೀಡಿದೆ ಎಂದರು.

ಈ ಸಮಾರಂಭದಲ್ಲಿ ಆತ್ಮನಿರ್ಭರ್ ಭಾರತದ ವಸ್ತು ಪ್ರದರ್ಶನ ಮತ್ತು ಮಾರಾಟ, ನವಭಾರತದ ನಿರ್ಮಾಣದ ಕುರಿತಾದ ವಿಚಾರ ಗೋಷ್ಠಿಗಳು, ಶರವೇಗದ ಅಭಿವೃದ್ಧಿಯ ಪರಿವರ್ತನೆಯ ಪರಿಚಯದ ಪ್ರದರ್ಶಿನಿ ದೇಶಭಕ್ತಿಯನ್ನು ಉದ್ದೀಪನಗೊಳಿಸುವ ಚಲನಚಿತ್ರ ಪ್ರದರ್ಶನ, ಸಾಂಸ್ಕೃತಿಕ ಸ್ಪರ್ಧೆ ಮತ್ತು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸುಶಾಸನ ಎಂಬ ವಿಷಯದ ಬಗ್ಗೆ ಸಂವಾದ ಹಮ್ಮಿಕೊಳ್ಳಲಾಗಿತ್ತು. ಮಾಜಿ ಸಚಿವ ಎಸ್. ಸುರೇಶ್ ಕುಮಾರ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು.

ಸಮಾರಂಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಸಕ ಆಯನೂರು ಮಂಜುನಾಥ್, ಮೇಯರ್ ಸುನಿತಾ ಅಣ್ಣಪ್ಪ, ಪ್ರಮುಖರಾದ ಎಂ.ಬಿ. ಭಾನುಪ್ರಕಾಶ್, ಗಿರೀಶ್ ಪಟೇಲ್, ಧನಿಕ್ ಗೌಡ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಹರಿಕೃಷ್ಣ, ಡಿ.ಎಸ್. ಅರುಣ್ ಮೊದಲಾದವರಿದ್ದರು.

Ad Widget

Related posts

ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಫೆ.೧ ,೨ ಕ್ಕೆ
ಹಿರಿಯ ಸಾಹಿತಿ ಲಕ್ಷ್ಮಣ್‌ಕೊಡಸೆ ಸರ್ವಾಧ್ಯಕ್ಷರು, ಹಲವು ಗೋಷ್ಠಿಗಳು

Malenadu Mirror Desk

ಬರ ಅಧ್ಯಯನ ವರದಿಯನ್ನು ಕೇಂದ್ರಕ್ಕೆ ತಲುಪಿಸಲಿ: ಸಚಿವ ಮಧು ಬಂಗಾರಪ್ಪ

Malenadu Mirror Desk

ನ್ಯಾಯಮೂರ್ತಿ ಎಂ. ರಾಮಾ ಜೋಯಿಸ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.