Malenadu Mitra
ರಾಜ್ಯ ಶಿವಮೊಗ್ಗ

ಗ್ರಾಮ ವಾಸ್ತವ್ಯದಲ್ಲಿ ಗಾಜನೂರು ಗ್ರಾಮದ ಸಮಸ್ಯೆ ಆಲಿಸಿದ ಜಿಲ್ಲಾಧಿಕಾರಿ

ಶಿವಮೊಗ್ಗ ಗಾಜನೂರಿನ ಸರ್ಕಾರಿ ಪ್ರೌಢಶಾಲೆಯಲ್ಲಿ ನಿರೀಕ್ಷಿತ ಫಲಿತಾಂಶ ಕಾಣದಾಗಿದ್ದು, ಅಲ್ಲಿನ ಶಾಲಾ ಮುಖ್ಯೋಪಾಧ್ಯಾಯರು ಸೇರಿದಂತೆ ಶಾಲೆಯ ಎಲ್ಲಾ ಶಿಕ್ಷಕರು ಫಲಿತಾಂಶವನ್ನು ಹೆಚ್ಚಿಸಲು ಅಗತ್ಯವಿರುವ ಪರ್ಯಾಯ ಕ್ರಮಗಳನ್ನು ಕೈಗೊಳ್ಳುವಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಮುಖ್ಯೋಪಾಧ್ಯಾಯರಿಗೆ ಸೂಚಿಸಿದರು.
ಅವರುಸರ್ಕಾರದ ವಿನೂತನ ಕಾರ್ಯಕ್ರಮ ‘ಜಿಲ್ಲಾಧಿಕಾರಿಗಳ ನಡೆ – ಹಳ್ಳಿಯ ಕಡೆ ‘ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.
ಕಲಿಕೆಯಲ್ಲಿ ಹಿಂದುಳಿದ ಮಕ್ಕಳಲ್ಲಿ ಕಲಿಕಾ ಸಾಮರ್ಥ್ಯ ಹೆಚ್ಚಿಸಿ ನಿರೀಕ್ಷಿತ ಫಲಿತಾಂಶ ತರುವಲ್ಲಿ ಶಾಲೆಯ ಎಲ್ಲಾ ಶಿಕ್ಷಕ ಕೌಶಲ್ಯವನ್ನು ಬಳಸುವಂತೆ ಹಾಗೂ ವಿಶೇಷ ತರಗತಿಗಳನ್ನು ನಡೆಸುವಂತೆ, ನಿಗಧಿಪಡಿಸಿದ ಅವಧಿಯೊಳಗಾಗಿ ಪಠ್ಯವಿಷಯವನ್ನು ಪೂರ್ಣಗೊಳಿಸುವಂತೆ ಸೂಚಿಸಿದರು.
ಶಿಕ್ಷಕರು ಕೈಗೊಳ್ಳುವ ಪಠ್ಯ ಚಟುವಟಿಕೆಗಳಿಗೆ ಪೂರಕವಾಗಿ ಪೆÇೀಷಕರು ಅಗತ್ಯ ಸಹಕಾರ ನೀಡಬೇಕು ಎಂದ ಅವರು ಶಾಲೆಯಲ್ಲಿ ಪಾಠೋಪಕರಣ, ಪೀಠೋಪಕರಣ, ಅಕ್ಷರದಾಸೋಹ, ಕೊಠಡಿಗಳು ಮುಂತಾದವುಗಳ ಬಗ್ಗೆ ಶಿಕ್ಷಕರಿಂದ ಮಾಹಿತಿ ಪಡೆದರು.

ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸಲು ಗಮನಹರಿಸಲಾಗುವುದು. ಇರುವ ನೀರಿನ ಘಟಕಕ್ಕೆ ಫಿಲ್ಟರ್ ಅಳವಡಿಸಲು ಹಾಗೂ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ಈ ಗ್ರಾಮವನ್ನು ಅಳವಡಿಸಲು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಗುವುದು ಎಂದರು.


ಗ್ರಾಮ ಠಾಣಗಳಲ್ಲಿ ಹಲವು ದಶಕಗಳಿಂದ ಮನೆ ನಿರ್ಮಿಸಿಕೊಂಡು ವಾಸವಾಗಿರುವ ಕುಟುಂಬದ ಸದಸ್ಯರಿಗೆ ಹಕ್ಕುಪತ್ರ ನೀಡಲು ಇರಬಹುದಾದ ಅಡ್ಡಿ ಆತಂಕಗಳ ಬಗ್ಗೆ ಮುಂದಿನ ವಾರ ನಡೆಯಲಿರುವ ಕಂದಾಯಾಧಿಕಾರಿಗಳ ಸಭೆಯಲ್ಲಿ ಚರ್ಚಿಸಿ ನಿರ್ಣಯ ಕೈಗೊಳ್ಳಲಾಗುವುದು ಎಂದರು. ಇದೇ ಸಂದರ್ಭದಲ್ಲಿ ಗ್ರಾಮ ಠಾಣ ಸರ್ವೇ ಕಾರ್ಯ ಪೂರ್ಣಗೋಳಿಸಿ ಮಾಹಿತಿ ನೀಡುವಂತೆ ತಹಶೀಲ್ದಾರ್‍ರವರಿಗೆ ಸೂಚಿಸಿದರು.


ಸಭೆಯಲ್ಲಿ ಗ್ರಾಮದ ನಿವಾಸಿಗಳ ಮನೆಗಳಿಗೆ ಹಕ್ಕುಪತ್ರ ನೀಡಿ, ಕುಡಿಯುವ ನೀರಿನ ಘಟಕಕ್ಕೆ ಫಿಲ್ಟರ್ ಅಳವಡಿಸಿ, ಪ್ರತ್ಯೇಕ ನಾಡಕಚೇರಿ ಕೇಂದ್ರ ಆರಂಭಿಸಿ, ಕುಡಗಲಮನೆ ಸಣ್ಣ ಗ್ರಾಮದ ನಿವಾಸಿಗಳಿರುವಲ್ಲೆ ಪಡಿತರ ವಿತರಿಸಿ, ಹೊನ್ನಾಪುರ ಗ್ರಾಮದ ರಸ್ತೆಗಳನ್ನು ಸರಿಪಡಿಸಿ, ಪಿ.ಯು.ಕಾಲೇಜು ಆರಂಭಿಸಿ, ವಿಧವಾ ವೇತನ, ಅಂಗವಿಕಲರ ವೇತನ, ವೃದ್ಧಾಪ್ಯ ವೇತನ ಇನ್ನು ಮುಂತಾದ 75 ಕ್ಕೂ ಹೆಚ್ಚಿನ ಅಹವಾಲುಗಳನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದರು


ಗ್ರಾಮ ವಾಸ್ತವ್ಯದ ಅಂಗವಾಗಿ ಜಿಲ್ಲಾಧಿಕಾರಿಗಳು ಕಂದಾಯ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಗ್ರಾಮದೆಲ್ಲೆಡೆ ಸಂಚರಿಸಿದರು. ಈ ಅವಧಿಯಲ್ಲಿ ಪ್ರಾಥಮಿಕ, ಪ್ರೌಡಶಾಲೆ, ಅಂಗನವಾಡಿ, ಬೋವಿಕಾಲೋನಿ, ಪ್ರಾಥಮಿಕ ಆರೋಗ್ಯ ಕೇಂದ್ರ, ಕೃಷಿ ಪತ್ತಿನ ಸಹಕಾರ ಸಂಘ, ವಸತಿಶಾಲೆ ಮುಂತಾದ ಸ್ಥಳಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸಿದರು.
ವೇದಿಕೆಯಲ್ಲಿ ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿ ಸೌಲಭ್ಯ ಮಂಜೂರಾತಿ ಪಡೆದ ಫಲಾನುಭವಿಗಳಿಗೆ ಜಿಲ್ಲಾಧಿಕಾರಿಗಳು ಸಾಂಕೇತಿಕವಾಗಿ ಮಂಜೂರಾತಿ ಪತ್ರ ವಿತರಿಸಿದರು.

ತಹಶಿಲ್ದಾರ್ ಡಾ|| ಎನ್.ಜೆ. ನಾಗರಾಜ್, ಹೆಚ್.ಬಿ.ಗಣೇಶ್, ಗ್ರಾ.ಪಂ.ಅಧ್ಯಕ್ಷೆ ಶ್ರೀಮತಿ ಜಯಮ್ಮ, ಉಪಾಧ್ಯಕ್ಷೆ ಶ್ರೀಮತಿ ಕೊಟ್ರಮ್ಮ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಚುನಾಯಿತ ಜನಪ್ರತಿನಿಧಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

ಗ್ರಾಮದ ನಿವಾಸಿಗಳು ಇಲ್ಲಿನ ಮಕ್ಕಳು ಮಾದಕ ವ್ಯಸನಗಳಿಗೆ ಬಲಿಯಾಗದಂತೆ ಸೂಕ್ಷ್ಮವಾಗಿ ಗಮನಿಸಿ ನಿಯಂತ್ರಿಸಬೇಕು. ಅದು ಸಾಧ್ಯವಾಗದಿದ್ದಲ್ಲಿ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದಲ್ಲಿ ಅವರ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಹಾಗೂ ಮಾಹಿತಿ ನೀಡಿದವರ ಹೆಸರನ್ನು ಗೌಪ್ಯವಾಗಿರಿಸಲಾಗುವುದು ಕೆ.ಬಿ.ಶಿವಕುಮಾರ್ , ಜಿಲ್ಲಾಧಿಕಾರಿ

Ad Widget

Related posts

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಹುಟ್ಟು ಹಬ್ಬ: ಸೇವೆ ಮತ್ತು ಸಮರ್ಪಣೆ ಅಭಿಯಾನ

Malenadu Mirror Desk

ಬೆಳಗಲು ಗ್ರಾಮದ ಕತ್ತಲ ಬದುಕು,ಸರಕಾರಿ ಸೌಲಭ್ಯಗಳೇ ಕಾಣದ ಕುಗ್ರಾಮ

Malenadu Mirror Desk

ಶಿವಮೊಗ್ಗ ನಾಗರಾಜ್ ಛಾಯಾಚಿತ್ರ ಪ್ರದರ್ಶನ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.