Malenadu Mitra
ರಾಜ್ಯ ಶಿವಮೊಗ್ಗ ಸಾಗರ

ಕಾಂಗ್ರೆಸ್ ಟೀಕಿಸುವ ನೈತಿಕತೆ ಬಿಜೆಪಿಗಿಲ್ಲ : ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ

ಕಾಂಗ್ರೆಸ್ ಪಕ್ಷ ಟೀಕಿಸುವ ಯಾವ ಅರ್ಹತೆಯೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಇಲ್ಲ ಎಂದು ಕಾಂಗ್ರೆಸ್ ವಕ್ತಾರ, ಮಾಜಿ ಶಾಸಕ ಬೆಳೂರು ಗೋಪಾಲಕೃಷ್ಣ ಹರಿಹಾಯ್ದರು.
ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯಲ್ಲಿಯೇ ಕೊಳೆತು ನಾರುವಷ್ಟು ವಿಷಯಗಳಿದ್ದರೂ ಕೂಡ ಕಾಂಗ್ರೆಸ್ ನಾಯಕರ ಬಗ್ಗೆ ತಮ್ಮ ನಾಲಿಗೆಯನ್ನು ಹರಿ ಬಿಟ್ಟಿದ್ದಾರೆ. ರೇಪ್ ಮಾಡಿದವರು ಸದನದಲ್ಲಿ ಬ್ಲೂ ಫಿಲಂ ನೋಡಿದವರು, ಭ್ರಷ್ಟಾಚಾರ ಮಾಡಿದವರು ಬಿಜೆಪಿಯಲ್ಲಿ ತುಂಬಿ ತುಳುಕುತ್ತಿದ್ದಾರೆ. ಅವರನ್ನು ಟೀಕಿಸಲಿ ಎಂದ ಅವರು, ಸಚಿವ ಕೆ.ಎಸ್ ಈಶ್ವರಪ್ಪನವರ ಬಗ್ಗೆ ನನಗೆ ತುಂಬಾ ಅಭಿಮಾನವಿದೆ. ಅವರು ಕೂಡಾ ಕಾಂಗ್ರೆಸ್ ನಾಯಕರ ಬಗ್ಗೆ ಮಿತಿಮೀರಿ ಬೈಯುತ್ತಿದ್ದಾರೆ. ಆದರೆ, ಅವರು ಬೇಳೂರಿಗೆ ಬೈಯ್ಯಲು ಬರುತ್ತದೆ ಎಂಬುದನ್ನು ನೆನಪಿಡಬೇಕು ಎಂದರು.
ರೈತರ ಸಂಕಷ್ಟ ಕೇಳುತ್ತಿಲ್ಲ:
ಮಲೆನಾಡು ಭಾಗದಲ್ಲಿ ಅಡಿಕೆಗೆ ಎಲೆ ಚುಕ್ಕೆ ರೋಗ ಬಂದಿದೆ. ರೈತರು ತೀವ್ರ ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ರಾಜ್ಯ ಸರ್ಕಾರ ಈ ಬಗ್ಗೆ ಸೊಲ್ಲೆತ್ತುತ್ತಿಲ್ಲ. ರೈತರಿಗೆ ಅಗತ್ಯವಾಗಿ ಬೇಕಾದ ರಸಗೊಬ್ಬರ ಕೂಡಾ ಇಲಾಖೆಯಲ್ಲೂ ಸಿಗುತ್ತಿಲ್ಲ, ಸರ್ಕಾರದಲ್ಲೂ ಕೂಡ ಇಲ್ಲ. ಆದರೆ, ಖಾಸಗಿಯಲ್ಲಿ ಮಾತ್ರ ಗೊಬ್ಬರ ಸಿಗುತ್ತದೆ. ಕಳ್ಳ ಸಂತೆಯಲ್ಲಿ ಗೊಬ್ಬರ ಮಾರಾಟ ಆಗುತ್ತಿದ್ದರೂ ಕೂಡ ಸರ್ಕಾರ ಕಣ್ಣು ಮುಚ್ಚಿ ಕುಳಿತಿದೆ ಎಂದು ಟೀಕಿಸಿದರು.
ಸರ್ಕಾರಿ ನೌಕರರ ರಾಜ್ಯಾಧ್ಯಕ್ಷರ ಮೇಲೆ ಇಡಿ ರೈಡ್ ಆಗಲಿ
ಸರ್ಕಾರಿ ನೌಕರರ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ಅವರನ್ನು ತೀವ್ರ ತರಾಟೆಗೆ ತೆಗೆದು ಕೊಂಡ ಬೇಳೂರು , ಈತ ಕೋಟಿ ಕೋಟಿ ಆಸ್ತಿ ಸಂಪಾದನೆ ಮಾಡಿದ್ದಾನೆ. ವರ್ಗಾವಣೆ ದಂಧೆಯಲ್ಲಿ ಈತನೇ ರೂವಾರಿಯಾಗಿದ್ದಾನೆ. ರಾಘವೇಂದ್ರ, ವಿಜಯೇಂದ್ರ, ಉಮೇಶ ಅವರ ಜೊತೆ ಸೇರಿಕೊಂಡು ವರ್ಗಾವಣೆ ದಂಧೆ ನಡೆಸುತ್ತಿದ್ದಾರೆ. ಮೊದಲು ಈತನ ಮನೆ ಮೇಲೆ ಇಡಿ ರೈಡ್ ಆಗಬೇಕು ಎಂದು ಬೇಳೂರು ಹೇಳಿದರು.
ಜಿಲ್ಲಾಧಿಕಾರಿಗಳಿಂದ ಗ್ರಾಮ ವಾಸ್ತವ್ಯದ ನಾಟಕ
ಜಿಲ್ಲಾಧಿಕಾರಿಗಳು ಸರ್ಕಾರದ ಏಜೆಂಟರಂತೆ ಕೆಲಸ ಮಾಡುತ್ತಿದ್ದಾರೆ. ಗ್ರಾಮ ವಾಸ್ತವ್ಯವನ್ನು ಶಿವಮೊಗ್ಗದಿಂದ ಕೇವಲ ೮ ಕಿ,ಮೀ ಇರುವ ಗಾಜನೂರಿನಲ್ಲಿ ಮಾಡಿದ್ದಾರೆ. ಇದೊಂದು ಕಾಟಾಚಾರದ ಕ್ರಿಯೆ ಆಗಿದೆ. ಮಲೆನಾಡಿನ ಗುಡ್ಡಗಾಡು ಪ್ರದೇಶದಲ್ಲಿ ಬಸ್ ಗಳಿಲ್ಲದ ರಸ್ತೆಗಳಿಲ್ಲದ, ವಿದ್ಯುತ್ ಇಲ್ಲದ, ಆಸ್ಪತ್ರೆ ಇಲ್ಲದ ಗ್ರಾಮಗಳಿಗೆ ಭೇಟಿಕೊಟ್ಟರೆ ವಾಸ್ತವ್ಯಕ್ಕೂ ಒಂದು ಅರ್ಥ ಬರುತ್ತದೆ ಎಂದರು.

ಸಿಎಂಗೆ ಎಚ್ಚರಿಕೆ:
ನೈತಿಕ ಪೊಲೀಸ್‌ಗಿರಿ ಕೆಲವು ಸಂದರ್ಭದಲ್ಲಿ ಮಾಡಬಹುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.ರಾಜ್ಯವನ್ನು ಮುನ್ನೆಡೆಸುವವರು ಈ ರೀತಿ ಹೇಳಿಕೆ ನೀಡುವುದು ಎಷ್ಟರ ಮಟ್ಟಿ ಸರಿ ಎಂದು ಪ್ರಶ್ನಿಸಿದ ಅವರು,ಸಿಎಂ ಹೇಳಿಕೆಯಿಂದ ಎಲ್ಲಾ ಜಾತಿ,ಧರ್ಮದ ನೈತಿಕ ಪೊಲೀಸ್‌ಗಿರಿ ಹೆಚ್ಚಳವಾಗಲಿದೆ ಎಂದು ಎಚ್ಚರಿಕೆ ನೀಡಿದರು.
ಮುಸ್ಲಿಂ ಮತಕ್ಕಾಗಿ ಹೇಳಿಕೆ
ಆರ್‌ಎಸ್‌ಎಸ್ ವಿರುದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಬೇಳೂರು,ಮುಸ್ಲಿಂ ಸಮುದಾಯದ ಮತಕ್ಕಾಗಿ ಕುಮಾರ ಸ್ವಾಮಿ ಈರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಜಿ.ಡಿ ಮಂಜುನಾಥ್, ಶಾಂತವೀರ ನಾಯ್ಕ್, ರಾಜ್ ಕುಮಾರ್, ಸೋಮಶೇಖರ್ ಇದ್ದರು.

Ad Widget

Related posts

ಬಿಎಸ್‌ವೈ ವಚನ ಭ್ರಷ್ಟರಾಗಿದ್ದಾರೆ: ಪ್ರಣವಾನಂದ ಶ್ರೀ, ಶಿವಮೊಗ್ಗ ತಲುಪಿದ ಪಾದಯಾತ್ರೆ

Malenadu Mirror Desk

ಜಿಲ್ಲೆಯ 1.7 ಲಕ್ಷ ನಿರ್ಮಾಣ ಕಾರ್ಮಿಕರಿಗೆ ತಲಾ 3 ಸಾವಿರ ನೆರವು: ಸಚಿವ ಕೆ.ಎಸ್.ಈಶ್ವರಪ್ಪ

Malenadu Mirror Desk

ಗ್ರಾಮಗಳ ಏಳಿಗೆಯಾದಲ್ಲಿ ದೇಶದ ಪ್ರಗತಿ, ಪುರದಾಳಲ್ಲಿ ಅಭಿನಂದನೆ ಸ್ವೀಕರಿಸಿದ ಶಾಸಕಿ ಶಾರದಾ ಪೂರ್ಯನಾಯ್ಕ್ ಅಭಿಮತ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.