Malenadu Mitra
ರಾಜ್ಯ ಶಿವಮೊಗ್ಗ ಸಾಗರ

ರಾಜ್ಯಾದ್ಯಂತ ಏಕಕಾಲದಲ್ಲಿ ಮೊಳಗಿದ ಕನ್ನಡದ ಗೀತಗಾಯನ

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ’ಮಾತಾಡ್ ಮಾತಾಡ್ ಕನ್ನಡ’ ಕನ್ನಡಕ್ಕಾಗಿ ನಾವು ಕರ್ನಾಟಕ ರಾಜ್ಯೋತ್ಸವ ಅಭಿಯಾನದ ಅಂಗವಾಗಿ  ಗುರುವಾರ ಜಿಲ್ಲಾಡಳಿತದ ಆವರಣ, ಶಿವಪ್ಪನಾಯಕ ಮಾರುಕಟ್ಟೆಯ ಆವರಣ, ಸಿಮ್ಸ್ ಆವರಣ, ಇತರೆ ಶಾಲಾ-ಕಾಲೇಜುಗಳ ಆವರಣ, ಸಂಘ ಸಂಸ್ಥೆಗಳು ಸೇರಿದಂತೆ ಜಿಲ್ಲೆಯ ವಿವಿಧೆಡೆ ಏಕಕಾಲದಲ್ಲಿ ಈ ಕನ್ನಡ ಗೀತ ಗಾಯನ ಕಾರ್ಯಕ್ರಮ ಆಯೋಜಿಸಲಾಗಿತ್ತು.
ರಾಷ್ಟ್ರಕವಿ ಕುವೆಂಪುರವರ ಬಾರಿಸು ಕನ್ನಡ ಡಿಂಡಿಮವ, ನಿತೋತ್ಸವ ಕವಿ ನಿಸಾರ್ ಅಹ್ಮದ್‌ರವರ ಜೋಗದ ಸಿರಿ ಬೆಳಕಿನಲ್ಲಿ ಮತ್ತು ಹಂಸಲೇಖರವರ ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು ಗೀತೆಗಳನ್ನು ಆಯ್ಕೆ ಮಾಡಿ ಜಿಲ್ಲಾಡಳಿತ ಆವರಣದಲ್ಲಿ ಅರುಣ್‌ಕಮಾರ್ ಮತ್ತು ತಂಡ, ಶಿವಪ್ಪನಾಯಕ ಮಾರುಕಟ್ಟೆ ಆವರಣದಲ್ಲಿ ಭದ್ರಾವತಿ ವಾಸು ಮತ್ತು ತಂಡ, ಸಿಮ್ಸ್ ಆವರಣದಲ್ಲಿ ಶುಭಾ.ಸಿ.ಎಸ್. ಮತ್ತು ತಂಡದೊಂದಿಗೆ ಸ್ಥಳೀಯ ಗಾಯಕರು, ವಿದ್ಯಾರ್ಥಿಗಳು, ಸಾರ್ವಜನಿಕರು, ಸಂಘಸಂಸ್ಥೆಗಳ ಪ್ರತಿನಿಧಿಗಳು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಸಿಬ್ಬಂದಿಗಳು ದನಿಗೂಡಿಸಿದರು.
ಡಿಸಿ ಕಚೇರಿ ಆವರಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಸ್. ಈಶ್ವರಪ್ಪ, ಜನಪ್ರತಿನಿಧಿಗಳು, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿ.ಪಂ ಸಿಇಓ ಎಂ.ಎಲ್.ವೈಶಾಲಿ, ಎಡಿಸಿ ನಾಗೇಂದ್ರ ಹೊನ್ನಳ್ಳಿ, ತಹಶೀಲ್ದಾರ್ ನಾಗರಾಜ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಉಮೇಶ್ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು, ಸಾರ್ವಜನಿಕರು ಗಾಯನಕ್ಕೆ ದನಿಗೂಡಿಸಿದರು. ಇದೇ ಸಂದರ್ಭದಲ್ಲಿ ಎಡಿಸಿ ನಾಗೇಂದ್ರ ಹೊನ್ನಳ್ಳಿರವರು ಕನ್ನಡ ಸಂಕಲ್ಪ ಪ್ರತಿಜ್ಞಾ ವಿಧಿ ಬೋಧಿಸಿದರು.
 ಪಾಲಿಕೆ ಸಹಯೋಗದಲ್ಲಿ ಶಿವಪ್ಪನಾಯಕ ಮಾರುಕಟ್ಟೆ ಆವರಣದಲ್ಲಿ ಆಯೋಜಿಸಿದ್ದ ಗೀತಗಾಯನದಲ್ಲಿ ಪಾಲಿಕೆ ಮೇಯರ್ ಸುನೀತಾ ಅಣ್ಣಪ್ಪ, ಆಡಳಿತ ಹಾಗೂ ವಿರೋಧ ಪಕ್ಷದ ನಾಯಕರು, ಸ್ಥಾಯಿ ಸಮಿತಿ ಅಧ್ಯಕ್ಷರು, ಸದಸ್ಯರು, ಪಾಲಿಕೆ ಆಯುಕ್ತ ಚಿದಾನಂದ ವಠಾರೆ, ಸುಗಮ ಸಂಗೀತ ಪರಿಷತ್ ಸದಸ್ಯರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.
 ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮಾರ್ಗದರ್ಶನ ಮತ್ತು ಇತರೆ ಇಲಾಖೆಗಳ ಸಹಯೋಗದೊಂದಿಗೆ ನಡೆದ ಕಾರ್ಯಕ್ರಮವು ಶಿಷ್ಟಾಚಾರದಂತೆ ನಾಡಗೀತೆಯೊಂದಿಗೆ ಆರಂಭವಾಗಿ, ಸರ್ಕಾರ ನಿಗದಿಪಡಿಸಿದ ೦೩ ಕನ್ನಡ ಗೀತೆಗಳ ಗಾಯನದ ನಂತರ ಮುಕ್ತಾಯವಾಯಿತು. ಕಾರ್ಯಕ್ರಮದಲ್ಲಿ ಗಾಯಕರು ಧರಿಸಿದ್ದ ಬಿಳಿ ಉಡುಪು ಹಾಗೂ ಸಮೂಹ ಗಾಯನ ಎಲ್ಲರ ಗಮನ ಸೆಳೆಯಿತು.

ಜೋಗ ಜಲಪಾತದ ಮುಂಭಾಗ ಮೊಳಗಿದ ಗೀತಗಾಯನ
Ad Widget

Related posts

ಶಿವಮೊಗ್ಗದಲ್ಲಿ ಎರಡಂಕಿಗಿಳಿದ ಸೋಂಕು, 4 ಸಾವು

Malenadu Mirror Desk

ಜೋಗ ನೋಡಲು ಜನಸಾಗರ ಮಳೆನಾಡ ಸೊಬಗನ್ನು ಕಣ್ತುಂಬಿಕೊಂಡ ಪ್ರವಾಸಿಗರು

Malenadu Mirror Desk

ರೋಹಿತ್ ಚಕ್ರತೀರ್ಥ ಬಂಧಿಸಲು ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.