Malenadu Mitra
ರಾಜ್ಯ ಶಿವಮೊಗ್ಗ

ಕನ್ನಡದ ಕಂಪನ್ನು ಇಡೀ ಪ್ರಪಂಚಕ್ಕೆ ಪರಿಚಯಿಸಬೇಕು: ಪ್ರೊ.ಬಿ.ಪಿ.ವೀರಭದ್ರಪ್ಪ

ಕುವೆಂಪು ವಿವಿಯಲ್ಲಿ‌‌ ಕನ್ನಡ ರಾಜ್ಯೋತ್ಸವ

ಕನ್ನಡನಾಡಿನಲ್ಲಿ ಹುಟ್ಟಿದ ನಾವೆಲ್ಲರೂ ನಮ್ಮ ಭಾಷೆ ಮತ್ತು ಸಂಸ್ಕೃತಿಯ ಕುರಿತು ಅಭಿಮಾನವನ್ನು ಬೆಳೆಸಿಕೊಳ್ಳುವುದರ ಜೊತೆಗೆ‌ ಕನ್ನಡದ ಕಂಪನ್ನು ಇಡೀ ಪ್ರಪಂಚಕ್ಕೆ ಪರಿಚಯಿಸಬೇಕು‌ ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಪಿ. ವೀರಭದ್ರಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು.

ಶಂಕರಘಟ್ಟ ಕುವೆಂಪು ವಿಶ್ವವಿದ್ಯಾಲಯದ ಪ್ರೊ. ಎಸ್. ಪಿ. ಹಿರೇಮಠ್ ಸಭಾಂಗಣದಲ್ಲಿ ಸೋಮವಾರ ಆಯೋಜಿಸಲಾಗಿದ್ದ 66ನೇ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಭಾರತೀಯ ಭಾಷೆಗಳಲ್ಲಿಯೇ ಅತಿ ಹೆಚ್ಚು (08) ಜ್ಞಾನಪೀಠ ಪ್ರಶಸ್ತಿ ಪಡೆದಿರುವುದು ಕನ್ನಡ ಭಾಷೆಯ ಮಹತ್ವವನ್ನು ಸಾರಿ ಹೇಳುತ್ತದೆ. ತನ್ನದೇ ಆದ ಸ್ವಂತ ಲಿಪಿ, ಸಂಖ್ಯೆಗಳು, ವ್ಯಾಕರಣ ಮತ್ತು ಬರೆಯುವಂತೆಯೇ ಉಚ್ಛರಿಸಲ್ಪಡುವ ಜಗತ್ತಿನ ಅತ್ಯಂತ ಪ್ರಾಚೀನ‌ ಭಾಷೆ ಕನ್ನಡ ಎಂದು ಗುಣಗಾನ ಮಾಡಿದರು.

ಕನ್ನಡ ನಾಡು ನುಡಿಗೆ ಸಾಕಷ್ಟು ಮಹಾನ್ ವ್ಯಕ್ತಿಗಳ ಕೊಡುಗೆ ಇದೆ. ಹೊಸಪೀಳಿಗೆಯ ಯುವಜನತೆ ಕೂಡ ಜಾಗತಿಕ ಮಟ್ಟದ ಆಲೋಚನೆಗಳು, ಆವಿಷ್ಕಾರಗಳು ಮತ್ತು ಚಟುವಟಿಕೆಗಳನ್ನು ಕೈಗೊಳ್ಳುವ ಮೂಲಕ ಕರ್ನಾಟಕದ ಅಸ್ಮಿತೆಯನ್ನು ಜಗತ್ತಿಗೆ ಪರಿಚಯಿಸಲು ಶ್ರಮಿಸಬೇಕೆಂದರು.

ಕುಲಸಚಿವೆ ಜಿ. ಅನುರಾಧ ಮಾತನಾಡಿ, ವಿಶ್ವವಿದ್ಯಾಲಯದಲ್ಲಿ ಆಡಳಿತ ನಡೆಸುವ ಸಂದರ್ಭದಲ್ಲಿ, ಪತ್ರವ್ಯವಹಾರಗಳು, ಸುತ್ತೋಲೆಗಳು, ಅಧಿಸೂಚನೆಗಳು, ಹೀಗೆ ದೈನಂದಿನ ವ್ಯವಹಾರದಲ್ಲಿ ಕನ್ನಡ ಭಾಷೆಯನ್ನು ಬಳಸುವ ಮೂಲಕ ಕನ್ನಡತನವನ್ನು ಜೀವಂತವಾಗಿಡಲಾಗಿದೆ ಎಂದರು.

ಪರೀಕ್ಷಾಂಗ ಕುಲಸಚಿವ ಪ್ರೊ.ಸಿ.ಎಂ.ತ್ಯಾಗರಾಜ್, ಪ್ರೊ.ಎನ್.ಡಿ.ವಿರೂಪಾಕ್ಷ, ಅಧ್ಯಾಪಕ ಹಾಗೂ ಅಧ್ಯಾಪಕೇತರ ನೌಕರರು ಮತ್ತು ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Ad Widget

Related posts

ಶರಾವತಿ ಸಂತ್ರಸ್ತರ ಡಿನೋಟಿಫೀಕೇಷನ್ ರದ್ದುಮಾಡಿದ್ದ ರಾಜ್ಯ ಸರಕಾರದ ಆದೇಶಕ್ಕೆ ತಡೆಯಾಜ್ಞೆ
ಮುಂದಿನ ಆದೇಶದವರೆಗೆ ಯಥಾಸ್ಥಿತಿ ಕಾಪಾಡಲು ಹೈಕೋರ್ಟ್ ಸೂಚನೆ

Malenadu Mirror Desk

ಅಮೃತ್ ನೋನಿ ಸಂಸ್ಥೆಗೆ ಕೇಂದ್ರದ ಪುರಸ್ಕಾರ, ಪ್ಲಾಂಟ್ ಜೀನೋಮ್ ಸೇವಿಯರ್ ಪ್ರಶಸ್ತಿಗೆ ಬಾಜನರಾದ ಶ್ರೀನಿವಾಸ್ ಮೂರ್ತಿ

Malenadu Mirror Desk

ಚಾಲಕನ ಎಡವಟ್ಟಿಂದ ಸಂಭವಿಸಿದ್ದೇ ಮರಣ ಸ್ಫೋಟ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.