ಶಿವಮೊಗ್ಗ ತಾಲೂಕು ಲಕ್ಕಿನಕೊಪ್ಪ ಸರ್ಕಲ್ ಬಳಿ ಡಸ್ಟರ್ ಕಾರು ಹಾಗೂ ಖಾಸಗಿ ಬಸ್ ನಡುವೆ ಗುರುವಾರ ಭೀಕರ ಅಪಘಾತ ಸಂಭವಿಸಿದೆ. ಶಂಕರಘಟ್ಟ ಕಡೆಯಿಂದ ಬರುತಿದ್ದ ಮಹಿಳೆಯೊಬ್ಬರು ಚಲಾಯಿಸುತಿದ್ದ ಕಾರು ಶಿವಮೊಗ್ಗ ಕಡೆಯಿಂದ ಹೋಗುತ್ತಿದ್ದ ಖಾಸಗಿ ಬಸ್‌ಗೆ ಡಿಕ್ಕಿ ಹೊಡೆಯಿತು.
ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಅದೃಷ್ಟವಶಾತ್ ಒಳಗಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್‌ನ ಗಾಜುಗಳು ಒಡೆದಿದ್ದು, ಬಸ್‌ನ ಮುಂಭಾಗಕ್ಕೆ ಹಾನಿಯಾಗಿದೆ. ಅಪಘಾತ ಸ್ಥಳಕ್ಕೆ ಸಾರ್ವಜನಿಕರು ದಂಡೇ ಬಂದಿದ್ದು, ಅಲ್ಲಿನ ಭೀಕರತೆ ನೋಡಿ ಕಂಗಾಲಾಗಿದ್ದಾರೆ. ಯಾವುದೇ ಜೀವ ಹಾನಿ ಆಗಿಲ್ಲ ಎಂಬ ಸುದ್ದಿ ಕೇಳಿ ನಿಟ್ಟುಸಿರು ಬಿಟ್ಟಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿದ್ದಾರೆ.
previous post