Malenadu Mitra
ರಾಜ್ಯ ಶಿವಮೊಗ್ಗ

28 ವಿದ್ಯಾರ್ಥಿಗಳಿಗೆ 35 ಚಿನ್ನದ ಪದಕ :ಭಾರತ್ ಬಯೊಟೆಕ್ ಸಂಸ್ಥಾಪಕ ಡಾ.ಕೃಷ್ಣಮೂರ್ತಿಗೆ ಗೌರವ ಡಾಕ್ಟರೇಟ್

ಕೃಷಿ ವಿವಿಯ 6ನೇ ಘಟಿಕೋತ್ಸವ 28

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು ನ.25ರಂದು ಬೆಳಿಗ್ಗೆ 11ಗಂಟೆಗೆ ನವಿಲೆಯ ಮುಖ್ಯ ಆವರಣದಲ್ಲಿ ಆರನೆಯ ಘಟಿಕೋತ್ಸವವನ್ನು ಆಯೋಜಿಸಲಾಗಿದೆ ಎಂದು ವಿಶ್ವವಿದ್ಯಾಲಯದ ಕುಲಪತಿ ಡಾ.ಎಂ.ಕೆ.ನಾಯ್ಕ್ ಹೇಳಿದರು.
ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು,ವಿಶ್ವವಿದ್ಯಾಲಯದ ಕುಲಾಧಿಪತಿಗಳು ಆದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ 6ನೇ ಘಟಿಕೋತ್ಸವವನ್ನು ಉದ್ಘಾಟಿಸಿ ಪದವಿ ಪ್ರಧಾನ ಮಾಡಲಿದ್ದಾರೆ ಎಂದು ತಿಳಿಸಿದ ಅವರು,ವಿಶ್ವವಿದ್ಯಾಲಯದ ಸಹ ಕುಲಾಧಿಪತಿಗಳು ಹಾಗೂ ರಾಜ್ಯ ಕೃಷಿ ಸಚಿವರಾದ ಬಿ.ಸಿ. ಪಾಟೀಲ್‍ರವರು ಉಪಸ್ಥಿತರಿರುವರು. ನವದೆಹಲಿಯ ಭಾರತೀಯ ಕೃಷಿ ಅನುಸಂಧಾನ ಪರಿಷತ್ತಿನ ಉಪಮಹಾನಿರ್ದೇಶಕರು (ಕೃಷಿ ಶಿಕ್ಷಣ) ಡಾ. ಆರ್. ಸಿ. ಅಗರ್ ವಾಲ್ ಮುಖ್ಯ ಅತಿಥಿಗಳಾಗಿ ಆಗಮಿಸಿ, ಘಟಿಕೋತ್ಸವದ ಭಾಷಣ ಮಾಡಲಿದ್ದಾರೆ ಎಂದರು.

238 ವಿದ್ಯಾರ್ಥಿಗಳಿಗೆ ಪದವಿ

6ನೇ ಘಟಿಕೋತ್ಸವದಲ್ಲಿ ಬಿ.ಎಸ್ಸಿ.ಕೃಷಿ, ತೋಟಗಾರಿಕೆ ಮತ್ತು ಅರಣ್ಯ ವಿಭಾಗದ ಸ್ನಾತಕ ಪದವಿಯಲ್ಲಿನ 238 ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ನಡೆಯಲಿದೆ. ಹಾಗೂ ಕೃಷಿ, ತೋಟಗಾರಿಕೆ ಮತ್ತು ಅರಣ್ಯ ವಿಷಯಗಳಲ್ಲಿ 105 ಎಂ.ಎಸ್ಸಿ. ವಿದ್ಯಾರ್ಥಿಗಳಿಗೆ ಸ್ನಾತಕೋತ್ತರ ಪದವಿ ಹಾಗೂ 15 ಪಿಹೆಚ್.ಡಿ.ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುತ್ತಿದೆ. ಇದರಲ್ಲಿ 9 ಬಿ.ಎಸ್ಸಿ. ವಿದ್ಯಾರ್ಥಿಗಳಿಗೆ 15 ಚಿನ್ನದ ಪದಕಗಳನ್ನು, 14 ಎಂ.ಎಸ್ಸಿ. ವಿದ್ಯಾರ್ಥಿಗಳಿಗೆ 15 ಚಿನ್ನದ ಪದಕಗಳನ್ನು ಮತ್ತು 5 ಪಿಹೆಚ್.ಡಿ. ವಿದ್ಯಾರ್ಥಿಗಳಿಗೆ 5 ಚಿನ್ನದ ಪದಕ ಸೇರಿ ಒಟ್ಟು 35 ಚಿನ್ನದ ಪದಕಗಳನ್ನು 28 ವಿದ್ಯಾರ್ಥಿಗಳಿಗೆ ಪ್ರದಾನ ಮಾಡಲಾಗುತ್ತಿದೆ ಎಂದರು.

ಪ್ರಥಮ ಬಾರಿಗೆ ಗೌರವ ಡಾಕ್ಟರೇಟ್ ಪದವಿ

ವಿಶ್ವವಿದ್ಯಾಲಯದ ವತಿಯಿಂದ ಪ್ರಪ್ರಥಮ ಬಾರಿಗೆ ಚೊಚ್ಚಲ ಗೌರವ ಡಾಕ್ಟರೇಟ್ ಪದವಿಯನ್ನು ಹೈದ್ರಾಬಾದ್‍ನ ಭಾರತ್ ಬಯೋಟೆಕ್ ಇಂಟರ್‍ನ್ಯಾಷನಲ್ ಲಿಮಿಟೆಡ್‍ನ ಸಂಸ್ಥಾಪಕ ಹಾಗೂ ಅಧ್ಯಕ್ಷ ಡಾ.ಕೃಷ್ಣಮೂರ್ತಿ ಎಲ್ಲಾ ಅವರಿಗೆ ಪ್ರದಾನ ಮಾಡಲಾಗುತ್ತಿದೆ. ಕೃಷ್ಣಮೂರ್ತಿ ಅವರು ತಮ್ಮ ಸಂಸ್ಥೆಯ ಮೂಲಕ ರೋಟವೈರಸ್, ಟೈಫಾಯಿಡ್ ಕಾಂಜುಗೇಟ್, ಚಿಕೂನ್ ಗುನ್ಯಾ ಮತ್ತು ಜಿಕಾ ಮುಂತಾದ ಅನೇಕ ಮಾರಣಾಂತಿಕ ಕಾಯಿಲೆಗಳಿಗೆ ಕೈಗೆಟುಕುವ ದರದಲ್ಲಿ ಲಸಿಕೆಗಳನ್ನು ಅಭಿವೃದ್ಧಿಪಡಿಸಿ, ಪ್ರಸಿದ್ಧರಾಗಿದ್ದಾರೆ. ಅಲ್ಲದೇ ಕರೋನ ವೈರಸ್ ನಿಯಂತ್ರಿಸಲು ಕೊವ್ಯಾಕ್ಸಿನ್ ಲಸಿಕೆ ಅಭಿವೃದ್ಧಿಪಡಿಸಿ ಮಾನವ ಕುಲಕ್ಕೆ ನೀಡಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು.
2020-21ನೇ ಶೈಕ್ಷಣಿಕ ವರ್ಷದಲ್ಲಿ ನಡೆದ ಐ.ಸಿ.ಎ.ಆರ್. ಜೆ.ಆರ್.ಎಫ್. ಪರೀಕ್ಷೆಯಲ್ಲಿ ವಿಶ್ವವಿದ್ಯಾಲಯದ ಒಟ್ಟು 14 ವಿದ್ಯಾರ್ಥಿಗಳು ರ್ಯಾಂಕ್ ಪಡೆದಿದ್ದಾರೆ ಹಾಗೂ ಅಖಿಲ ಭಾರತ ಐ.ಸಿ.ಎ.ಆರ್. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ 2 ವಿದ್ಯಾರ್ಥಿಗಳು ಎಸ್.ಆರ್.ಎಫ್.ಗಳಾಗಿ ಆಯ್ಕೆಯಾಗಿರುತ್ತಾರೆ ಹಾಗೂ 15 ವಿದ್ಯಾರ್ಥಿಗಳು ಎನ್.ಟಿ.ಎಸ್. (ಸ್ನಾತಕೋತ್ತರ) ಪ್ರವೇಶ ಪಡೆದುಕೊಂಡಿದ್ದಾರೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಡಾ. ಹನುಮಂತಪ್ಪ, ಡಾ. ಆರ್.ಲೋಕೇಶ್, ಡಾ. ಮೃತ್ಯುಂಜಯವಾಲಿ, ಡಾ. ದಿನೇಶ್ ಮುಂತಾದವರು ಉಪಸ್ಥಿತರಿದ್ದರು.

ಕೃಷಿ ವಿಸ್ತರಣಾ ವಿಭಾಗದ ವಿದ್ಯಾರ್ಥಿ ಎಂ. ಸಿ. ವಿವೇಕ್ ಅವರಿಗೆ ಹೈದರಾಬಾದ್‍ನ ಮ್ಯಾನೇಜ್ ವತಿಯಿಂದ ರಾಷ್ಟ್ರಮಟ್ಟದ ಅತ್ಯುತ್ತಮ ಎಂ.ಎಸ್ಸಿ. ಪ್ರಬಂಧ ಪ್ರಶಸ್ತಿ ನೀಡಿ ಗೌರವಿಸಿದೆ. ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದಿಂದ ಪದವಿ ಪಡೆದಿರುವ ಕು. ಪಲ್ಲವಿ ಪೂಜಾರ್ ಇವರು ಜರ್ಮನಿಯ ನೇತಾಜಿ ಸುಭಾಸ್-ಐಸಿಎಆರ್ ಇಂಟರ್‍ನಾಷನಲ್ ಫೆಲೋಶಿಪ್‍ಗೆ ಬಾಜನರಾಗಿದ್ದಾರೆ. ಶಶಿಭೂಷಣ್ ಮಿಶ್ರಾ ಮತ್ತು ಝೆಂಕಾರ್ ಎಂ.ಜೆ. ಅವರು ಕೋಪನ್ ಹೇಗನ್ ವಿಶ್ವವಿದ್ಯಾಲಯ ಮತ್ತು ಜರ್ಮನಿಯ ಗೊಟ್ಟಿಂಗನ್ ವಿಶ್ವವಿದ್ಯಾಲಯದಲ್ಲಿ ಪಿಎಚ್.ಡಿ.ಗೆ ಪ್ರವೇಶ ಪಡೆದುಕೊಂಡಿದ್ದಾರೆ

– ಡಾ.ಎಂ.ಕೆ.ನಾಯ್ಕ್ ,ಕುಲಪತಿ


Ad Widget

Related posts

ಮಲೆನಾಡಿಗರಿಂದ ಮಂಜುನಾಥ್ ಭಂಡಾರಿ ಅವರಿಗೆ ಆತ್ಮೀಯ ಅಭಿನಂದನೆ, ಮಾರ್ಚ್ 12 ರ ಶನಿವಾರ ಕುವೆಂಪು ರಂಗಮಂದಿರದಲ್ಲಿ ಕಾರ್ಯಕ್ರಮ

Malenadu Mirror Desk

ಪ್ರೀತಿಯಲ್ಲಿ ಮೋಸ, ಮಾಜಿ ಪ್ರೇಮಿಯಿಂದ ಯುವತಿ ಕೊಲೆ

Malenadu Mirror Desk

ಪ್ರೊಫೆಸರ್ ಸಾವಿನ ಹಿಂದಿನ ಅಸಲಿ ಕಾರಣ ಗೊತ್ತಾ ? ಉತ್ತಮ ತಳಿ ವಿಜ್ಞಾನಿ ಕಳೆದುಕೊಂಡ ಕೃಷಿ ವಿವಿ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.