ಶಿವಮೊಗ್ಗ ಜಿಲ್ಲಾ ಜಾತ್ಯತೀತ ಜನತಾದಳದ ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾಗಿ ಗೀತಾ ಸತೀಶ್ ಅವರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕಿ ಶಾರದಾಪೂರ್ಯನಾಯ್ಕ ಅವರ ಶಿಫಾರಸಿನಂತೆ ಗೀತಾ ಅವರನ್ನು ನೇಮಕ ಮಾಡಿರುವ ಜಿಲ್ಲಾಧ್ಯಕ್ಷ ಎಂ.ಶ್ರೀಕಾಂತ್ ಅವರು, ಜಿಲ್ಲೆಯಲ್ಲಿ ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ಸೂಚನೆ ನೀಡಿದ್ದಾರೆ.
ಗೀತಾ ಅವರು ಭದ್ರಾವತಿ ತಾಲೂಕು ಹೊಳೆಹೊನ್ನೂರು ಸಮೀಪದ ಸಿದ್ಲಿಪುರ ಗ್ರಾಮದವರಾಗಿದ್ದು, ಪಕ್ಷದಲ್ಲಿ ಈ ಹಿಂದೆ ಸಕ್ರಿಯವಾಗಿ ಕೆಲಸ ಮಾಡಿದವರಾಗಿದ್ದಾರೆ.