Malenadu Mitra
ರಾಜ್ಯ ಶಿವಮೊಗ್ಗ

ನಂದಿತ ಆತ್ಮಹತ್ಯೆ ಪ್ರಕರಣ ಸಿಬಿಐಗೆ ವಹಿಸಲು ಆಗ್ರಹಿಸಿ ಉಪವಾಸ ಸತ್ಯಾಗ್ರಹ

ತೀರ್ಥಹಳ್ಳಿ ನಂದಿತ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಲು ಆಗ್ರಹಿಸಿ ಜ.30ರಂದು ಉಪವಾಸ ಸತ್ಯಾಗ್ರಹ ಮಾಡುವೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಾವು ಸಚಿವರಾಗಿದ್ದಾಗ ಅರಗ ಜ್ಞಾನೇಂದ್ರ ಸೇರಿದಂತೆ ಬಿಜೆಪಿಯ ಮುಖಂಡರುಗಳು ನಂದಿತ ಅಸಹಜ ಸಾವಿನ ಪ್ರಕರಣವನ್ನು ಸಿಬಿಐ ತನಿಖೆ ನಡೆಸುವಂತೆ ಆಗ್ರಹಿಸಿದ್ದರು. ಆರಗ ಜ್ಞಾನೇಂದ್ರ ಎಂಬ ಕೋಮುವಾದಿ ಗೃಹಮಂತ್ರಿ ನನ್ನನ್ನು ಸೋಲಿಸಲು ಯಾವುದೇ ರಾಜಕೀಯ ಆಯುಧ ಸಿಗದೆ ಹತಾಶರಾಗಿ ನಂದಿತ ಆತ್ಮಹತ್ಯೆ ಪ್ರಕರಣವನ್ನೇ ಮುಂದಿಟ್ಟುಕೊಂಡು ಕೊಲೆ ಅತ್ಯಾಚಾರವೆಂದು ಬಿಂಬಿಸಿ ಕೋಮುಗಲಭೆ ಸೃಷ್ಠಿಸಿ ರಾಜಕೀಯ ಲಾಭಕ್ಕಾಗಿ ಕೃಷ್ಣ ಪೂಜಾರಿ ಕುಟುಂಬವನ್ನು ರಸ್ತೆಗೆ ತಂದು ನಿಲ್ಲಿಸಿ ನನ್ನ ಮೇಲೆ ಆಪಾಧನೆ ಹೊರಿಸಿದ್ದರು. ಈ ಆರೋಪದ ಹಿಂದೆ ಅನೇಕ ಬ್ರಹ್ಮಾಂಡ ಭ್ರಷ್ಟರು ನಂಬಿಕೆ ದ್ರೋಹಿಗಳು ಕೂಡ ಸೇರಿಕೊಂಡು ನನ್ನನ್ನು ಸೋಲಿಸಲು ಕಳ್ಳದಾರಿ ಮಾಡಿಕೊಂಡರು ಎಂದು ಆರೋಪಿಸಿದರು.
ಈಗ ಆರಗ ಜ್ಞಾನೇಂದ್ರ ಅವರೇ ಗೃಹ ಮಂತ್ರಿಗಳಾಗಿದ್ದಾರೆ. ಅವರು ನಿರ್ಭಿತಿಯಿಂದ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬಹುದಾಗಿದೆ. ನಾನು ಹಸ್ತಕ್ಷೇಪ ಮಾಡಿದೆ ಎಂಬ ಆರೋಪವನ್ನು ಕೂಡ ಅವರು ಹೊರಿಸುತ್ತಿದ್ದಾರೆ. 2014ರಿಂದ ನಂದಿತ ಸಾವಿನ ನಂತರ ಇದೇ ಅರಗ ಜ್ಞಾನೇಂದ್ರ ಅವರು 3 ವರ್ಷಗಳ ಕಾಲ ವೈಕುಂಠ ಸಮಾರಾಧನೆ ಮಾಡಿದ್ದರು. ಗೆದ್ದ ಮೇಲೆ ವೈಕುಂಠ ಸಮಾರಾಧನೆ ಮಾಡಲಿಲ್ಲ. 2018 ರ ಚುನಾವಣೆ ಸಂದರ್ಭದಲ್ಲಿ ನಂದಿತ ಮನೆಗೆ ಭೇಟಿ ನೀಡಿದ್ದ ಕೇಂದ್ರ ಗೃಹ ಸಚಿವ ಅಮೀತ್ ಶಾ ಕೂಡ ಸಿಬಿಐ ತನಿಖೆಗೆ ಒಳಪಡಿಲಾಗುವುದು ಎಂದಿದ್ದರು. ಈಗ ಸಿಬಿಐ ತನಿಖೆ ನಡೆಸಲಿ ಎಂದು ಕಿಮ್ಮನೆ ರತ್ನಾಕರ್ ಸವಾಲು ಹಾಕಿದರು.
ತೀರ್ಥಹಳ್ಳಿಯ ಅರಣ್ಯಾಧಿಕಾರಿಗಳು ಗೃಹ ಸಚಿವರ ಮಾರ್ಗದರ್ಶನದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ದೌರ್ಜನ್ಯ ವೆಸಗುತ್ತಿದ್ದಾರೆ. ಇದನ್ನು ಖಂಡಿಸಿ ಫೆ.3 ರಂದು ಗುಡ್ಡೆಕೊಪ್ಪದಿಂದ ತೀರ್ಥಹಳ್ಳಿ ಅರಣ್ಯ ಸಂರಕ್ಷಾಧಿಕಾರಿಗಳ ಕಚೇರಿಯವೆರಗೆ ಪ್ರತಿಭಟನಾ ಪಾದಯಾತ್ರೆಯನ್ನು ಹಮ್ಮಿಕೊಳ್ಳುವೆ ಎಂದರು.
ಮತಾಂತರದ ಬಗೆಗೆ ತಮ್ಮ ನಿಲುವು ಗಾಂಧೀಜಿಯ ನಿಲುವನೇ ಹೊಂದಿದೆ. ಗಾಂಧೀಜಿಯವರು ಮತಾಂತರಕ್ಕೆ ಸಂಬಂಧಿಸಿದಂತೆ ಸಮನ್ವಯ ದೃಷ್ಠಿಯನ್ನು ಸಾರಿದ್ದರು. ಅದೇ ತತ್ವದ ಅಡಿಯಲ್ಲಿ ನಾವಿದ್ದೇವೆ ಎಂದ ಅವರು, ಆರಗ ಜ್ಞಾನೇಂದ್ರ ಅವರು ಎಲ್ಲಾ ಕೋವಿಡ್ ನಿಯಮಗಳನ್ನು ಮೀರಿದ್ದಾರೆ. ತೀರ್ಥಹಳ್ಳಿಯಲ್ಲಿ ಲಕ್ಷಾಂತರ ಜನರನ್ನು ಸೇರಿಸಿ ಜಾತ್ರೆ ಮಾಡಿ ಸಮರ್ಥಿಸಿಕೊಂಡಿದ್ದಾರೆ. ಶಂಕುಸ್ಥಾಪನೆ, ಉದ್ಘಾಟನೆ, ಪೂಜೆಗಳು ಇವುಗಳನ್ನೆಲ್ಲ ನಿರಂತರವಾಗಿ ಮಾಡುತ್ತಾ ಬಂದಿದ್ದಾರೆ. ಕೋವಿಡ್ ನಿಯಮ ಗೃಹ ಸಚಿವರಿಗೊಂದು ಸಾರ್ವಜನಿಕರಿಗೊಂದು ಇರುತ್ತದೆಯೇ ಎಂದು ಪ್ರಶ್ನೆ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಆರ್.ಪ್ರಸನ್ನಕುಮಾರ್, ಕೆ.ಬಿ.ಪ್ರಸನ್ನಕುಮಾರ್, ಎನ್.ರಮೇಶ್, ಯಮುನಾ ರಂಗೇಗೌಡ, ವಿಜಯಕುಮಾರ್, ದೇವಿಕುಮಾರ್, ರಾಘವೇಂದ್ರ, ಗಾಜನೂರು ಗಣೇಶ್ ಮುಂತಾದವರಿದ್ದರು.

ಸಿಬಿಐ ತನಿಖೆಯಲ್ಲಿ ಒಂದು ವೇಳೆ ತಾವು ತಪ್ಪಿತಸ್ತರು ಎಂದು ಕಂಡು ಬಂದರೆ ಸಾಕ್ಷಿ ಸಮೇತ ಸಾಬೀತು ಆದರೆ ನಾನು ರಾಜಕೀಯ ಕ್ಷೇತ್ರದಿಂದ ನಿವೃತ್ತಿ ಘೋಷಿಸುತ್ತೇನೆ. 6ತಿಂಗಳೊಳಗೆ ಸಿಬಿಐ ತನಿಖಾ ವರದಿ ಕೊಡಿ ಇಲ್ಲವೇ ಶಾಸಕ ಸ್ಥಾನಕ್ಕೆ ನೀವು ರಾಜೀನಾಮೆ ನೀಡಿ ಇಂತಹ ಸುಳ್ಳು ಆರೋಪಗಳಿಂದ ಜನರ ಭಾವನೆಗಳನ್ನು ದಿಕ್ಕು ತಪ್ಪಿಸಿದ್ದಿರಿ. ಮಾನ್ಯ ಮುಖ್ಯಮಂತ್ರಿಗಳು ಈ ಎಲ್ಲಾ ಘಟನೆಗಳ ಹಿನ್ನಲೆಯಲ್ಲಿ ಜ್ಞಾನೇಂದ್ರ ಅವರನ್ನು ಮಂತ್ರಿ ಸ್ಥಾನದಿಂದ ವಜಾ ಮಾಡಬೇಕು

ಕಿಮ್ಮನೆ ರತ್ನಾಕರ್

Ad Widget

Related posts

ಕನ್ನಡ ನಾಡಲ್ಲಿ ಕನ್ನಡಿಗನೇ ಸಾರ್ವಭೌಮ ಕನ್ನಡಕ್ಕೆ ಮೊದಲ ಆದ್ಯತೆ : ಬಿ. ವೈ. ರಾಘವೇಂದ್ರ

Malenadu Mirror Desk

ಮಲೆನಾಡಲ್ಲಿ ಮುಂದುವರಿದ ವರ್ಷಧಾರೆ, ಯಾವ ಡ್ಯಾಂ ಎಷ್ಟು ನೀರು ?

Malenadu Mirror Desk

ರಾಜಾಹುಲಿ ನುಡಿದದ್ದೇ ಘರ್ಜನೆ …

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.