ಸಾಗರ ತಾಲೂಕು ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಾಲಯದಲ್ಲಿ ನಡೆಯುವ ಸಂಕ್ರಾಂತಿ ಜಾತ್ರೆಯನ್ನು ರದ್ದುಗೊಳಿಸಲಾಗಿದೆ. ಸರಕಾರ ಹೊರಡಿಸಿರುವ ಕೋವಿಡ್ ಮಾರ್ಗಸೂಚಿಯನ್ವಯ ಜ.೧೪ ಮತ್ತು ೧೫ ರಂದು ದೇವಾಲಯದಲ್ಲಿ ಪ್ರತಿವರ್ಷ ನಡೆಯುತ್ತಿದ್ದ ಉತ್ಸವ ಮೆರವಣಿಗೆಗಳು ಇರುವುದಿಲ್ಲ ಎಂದು ದೇವಾಲಯದ ಪ್ರಕಟಣೆ ತಿಳಿಸಿದೆ.
ಜಾತ್ರೆ ಸಂದರ್ಭ ನಡೆಯುತ್ತಿದ್ದ ವಿವಿಧ ಧಾರ್ಮಿಕ ಸೇವೆ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಜ.೧೪ ರಂದು ಸೀಗೆಕಣಿವೆಯ ಮೂಲಸ್ಥಳದಲ್ಲಿ ನಡೆಯುವ ಕುಲದೇವತೆ ಪೂಜೆಗೆ ಧರ್ಮದರ್ಶಿಗಳ ಕುಟುಂಬಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಉಳಿದ ಭಕ್ತಾದಿಗಳಿಗೆ ಪ್ರವೇಶವಿಲ್ಲ. ಜ.೧೫ ರಂದು ವಾರಾಂತ್ಯ ಕರ್ಫ್ಯೂ ಇರುವುದರಿಂದ ದೇಗುಲ ಸಂಪೂರ್ಣ ಮುಚ್ಚಿರುತ್ತದೆ. ಉಳಿದಂತೆ ಕೋವಿಡ್ ಮಾರ್ಗಸೂಚಿ ಅನ್ವಯ ಸೋಮವಾರದಿಂದ ಶುಕ್ರವಾರದ ತನಕ ದೇಗುಲದಲ್ಲಿ ಭಕ್ತಾದಿಗಳಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ದೇವಾಲಯ ಆಡಳಿತ ಮಂಡಳಿ ಕಾರ್ಯದರ್ಶಿ ರವಿಕುಮಾರ್ ಹೆಚ್.ಆರ್ ತಿಳಿಸಿದ್ದಾರೆ
ಸರಕಾರದ ನಿಯಮ ಮತ್ತು ಸಾರ್ವಜನಿಕರ ಆರೋಗ್ಯದ ಸುರಕ್ಷತೆಯ ಕಾರಣ ಸಂಕ್ರಾಂತಿ ಜಾತ್ರೆ ಇರುವುದಿಲ್ಲ. ಭಕ್ತಾದಿಗಳು ಸಹಕಾರ ನೀಡಬೇಕು. ವಾರದ ದಿನಗಳಲ್ಲಿ ಸರಕಾರದ ಮಾರ್ಗಸೂಚಿಯಂತೆ ದೇಗುಲ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುವುದು
ಡಾ.ಎಸ್.ರಾಮಪ್ಪ, ಧರ್ಮದರ್ಶಿಗಳು, ಶ್ರೀ ಕ್ಷೇತ್ರ ಸಿಗಂದೂರು