Malenadu Mitra
ರಾಜ್ಯ ಶಿವಮೊಗ್ಗ

ಮಾದರಿ ಶಿವಮೊಗ್ಗ ನಿರ್ಮಾಣಕ್ಕೆ ಕ್ರಮ : ಪತ್ರಿಕಾಗೋಷ್ಠಿಯಲ್ಲಿ ಉಸ್ತುವಾರಿ ಸಚಿವ ನಾರಾಯಣಗೌಡ

ಶಿವಮೊಗ್ಗವನ್ನು ರಾಜ್ಯದ ಮಾದರಿ ನಗರಗಳಲ್ಲೊಂದನ್ನಾಗಿ ರೂಪಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ರಾಜ್ಯ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡ ಹೇಳಿದರು.
ಅವರು ಬುಧವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಜಿಲ್ಲೆಯ ಪ್ರಗತಿಗೆ ಮಹತ್ವದ್ದಾಗಿರುವ ವಿಮಾನ, ರೈಲು ಮತ್ತು ರಸ್ತೆ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದೆ. ಅಂತೆಯೇ ಪ್ರವಾಸೋದ್ಯಮ ಕ್ಷೇತ್ರದ ವಿಕಾಸಕ್ಕೆ ಕ್ರಮ ವಹಿಸಲಾಗಿದೆ. ಕೇಂದ್ರ ಪುರಸ್ಕೃತ ಖೇಲೋ ಇಂಡಿಯಾ ಯೋಜನೆಯಡಿ ಕ್ರೀಡಾಸಂಕೀರ್ಣ ಸ್ಥಾಪನೆಗೆ ಮಂಜೂರಾತಿ ದೊರೆತಿದ್ದು, ರಾಜ್ಯದ ಪಾಲಿನ ಅನುದಾನ ಈಗಾಗಲೇ ಬಿಡುಗಡೆಗೊಂಡಿದೆ. ಇಂತಹ ಇನ್ನಷ್ಟು ರಚನಾತ್ಮಕ ಕಾರ್ಯಯೋಜನೆಗಳನ್ನು ಹಿರಿಯರ ಮಾರ್ಗದರ್ಶನದಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದರು.
ಮುಂದಿನ ವಾರದ ಭೇಟಿಯಲ್ಲಿ ವಿಮಾನ ನಿಲ್ದಾಣ ಕಾಮಗಾರಿ ಹಾಗೂ ಸ್ಮಾರ್ಟ್‌ಸಿಟಿ ಕಾಮಗಾರಿಗಳನ್ನು ಖುದ್ದು ಪರಿಶೀಲಿಸಲಾಗುವುದು. ವಿಮಾನ ನಿಲ್ದಾಣ ಕಾಮಗಾರಿ ಮುಂದಿನ ಜೂನ್-ಜುಲೈ ಮಾಹೆಯಲ್ಲಿ ಪೂರ್ಣಗೊಳ್ಳುವ ನಿರೀಕ್ಷೆ ಇದೆ ಎಂದ ನುಡಿದರು.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಸಂಸದ ಬಿ.ವೈ.ರಾಘವೇಂದ್ರ ಅವರು ಮಾತನಾಡಿ, ಸದ್ಯದಲ್ಲಿ ನಡೆಯಲಿರುವ ಸಂಸತ್ ಅಧಿವೇಶನದಲ್ಲಿ ಜಿಲ್ಲೆಯ ಅಭಿವೃದ್ಧಿ ಚಟುವಟಿಕೆಗಳಿಗೆ ಸುಮಾರು ೧,೫೦೦ ಕೋಟಿ ಅನುದಾನ ಮಂಜೂರಾಗುವ ನಿರೀಕ್ಷೆಯಿದ್ದು, ಪೂರ್ವಯೋಜನೆಯಂತೆ ಉದ್ದೇಶಿತ ಕಾಮಗಾರಿಗಳಿಗಾಗಿ ಅನುದಾನವನ್ನು ಬಳಸಿಕೊಳ್ಳಲಾಗುವುದು ಎಂದರು.
ಜಿಲ್ಲೆಯ ಮಲೆನಾಡು ಮತ್ತು ಉತ್ತರ ಕನ್ನಡ ಜಿಲ್ಲೆಗಳ ವಿಕಾಸಕ್ಕೆ ೨೫೦.೦೦ಕೋಟಿ ರೂ.ಗಳ ಅನುದಾನ ಒದಗಿಸುವಂತೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಶಿವಮೊಗ್ಗ – ಶಿಕಾರಿಪುರ ರೈಲ್ವೇ ಮಾರ್ಗದ ನಿರ್ಮಾಣಕ್ಕೆ ಅನುದಾನ ಕೋರಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ರೈಲ್ವೇ ಕೋಚಿಂಗ್ ಡಿಪೋ ನಿರ್ಮಾಣಕ್ಕೆ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಈ ಯೋಜನೆಯ ಅನುಷ್ಠಾನಕ್ಕೆ ಭೂಮಿಯನ್ನು ಒದಗಿಸಿದ ರೈತರಿಗೆ ಪರಿಹಾರಧನ ಬಿಡುಗಡೆಯಾಗಿದೆ ಎಂದರು.
ಶಿವಮೊಗ್ಗದಿಂದ ತಾಳಗುಪ್ಪ ರೈಲ್ವೇ ಸಂಪರ್ಕವಿದ್ದು, ತಾಳಗುಪ್ಪದಿಂದ ಸಿದ್ದಾಪುರ ಮಾರ್ಗದ ರೈಲ್ವೇ ಮಾರ್ಗದ ಸರ್ವೇ ಕಾರ್ಯ ಪೂರ್ಣಗೊಂಡಿದೆ. ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ೩ಕೇಂದ್ರೀಯ ವಿದ್ಯಾಲಯಗಳನ್ನು ಆರಂಭಿಸಲು, ತೀರ್ಥಹಳ್ಳಿಯಲ್ಲಿ ಸೈನಿಕ ಶಾಲೆ ಆರಂಭಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಅಗತ್ಯವಿರುವ ೧೦೦ಎಕರೆ ಭೂಮಿಯನ್ನು ಕಾಯ್ದಿರಿಸಲಾಗಿದೆ. ವಾಲ್ಮೀಕಿ ಕೇಂದ್ರೀಯ ಶಾಲೆ ಆರಂಭಿಸಲು ಹಾಗೂ ಅಟಲ್‌ಜೀ ಮೊರಾರ್ಜಿ ಶಾಲೆ ಆರಂಭಿಸಲು ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ಎಂದ ಅವರು, ಶಿವಮೊಗ್ಗದಲ್ಲಿ ಕ್ರೀಡಾ ಸಂಕೀರ್ಣ ನಿರ್ಮಾಣಕ್ಕೆ ಶೀಘ್ರದಲ್ಲಿ ಕೇಂದ್ರದಿಂದ ಅನುಮತಿ ದೊರೆಯುವ ವಿಶ್ವಾಸ ತಮಗಿರುವುದಾಗಿ ಅವರು ನುಡಿದರು.
ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಪುರುಷೋತ್ತಮ್, ಜಿಲ್ಲಾಧಿಕಾರಿ ಡಾ. ಸೆಲ್ವಮಣಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್, ಜಿಪಂ ಸಿಇಓ ಎಂ.ಎಲ್.ವೈಶಾಲಿ ಮುಂತಾದವರು ಹಾಜರಿದ್ದರು.

ಲಯನ್ ಸಫಾರಿಯಿಂದ ಅನಂದಪುರದವರೆಗೆ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ೩೦೦ಕೋಟಿ ಅನುದಾನ ಬಿಡುಗಡೆಗೊಳಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಪ್ರಯಾಣಿಕರ ಅನುಕೂಲಕ್ಕಾಗಿ ನಗರದ ಹೃದಯಭಾಗದಲ್ಲಿರುವ ಸರ್ಕಾರಿ ಮತ್ತು ಖಾಸಗಿ ಬಸ್ ನಿಲ್ದಾಣಗಳ ನಡುವೆ ಮೇಲ್ಸೇತುವೆಯೊಂದನ್ನು ನಿರ್ಮಿಸಲಾಗುವುದು. ೫೦ ಕೋಟಿ ರೂ.ಗಳ ವೆಚ್ಚದಲ್ಲಿ ಜಿಲ್ಲಾಡಳಿತ ಭವನವನ್ನು ನಿರ್ಮಿಸಲು ಉದ್ದೇಶಿಸಲಾಗಿದೆ

ಬಿ. ವೈ. ರಾಘವೇಂದ್ರ, ಸಂಸದ

Ad Widget

Related posts

ಮಹಿಳಾ ಸಬಲೀಕರಣ, ರಕ್ಷಣೆಗೆ ಸರಕಾರ ಒತ್ತು ನೀಡಬೇಕು

Malenadu Mirror Desk

ಹಿಂದೂ ಕಾರ್ಯಕರ್ತನ ಕೊಲೆ ಆರೋಪಿಗಳ ಸುಳಿವು ಸಿಕ್ಕಿದೆ ಶೀಘ್ರ ಬಂಧಿಸಲಾಗುವುದು. ಜನರು ಶಾಂತಿಕಾಪಾಡಬೇಕು: ಗೃಹ ಸಚಿವ

Malenadu Mirror Desk

ರಾಜಕೀಯಕ್ಕೆ ಯುವಪಡೆಯನ್ನೇ ಕೊಟ್ಟ ಕೀರ್ತಿ ಭಂಡಾರಿಯವರದು: ಎಂ.ಬಿ.ಪಾಟೀಲ್ ಮಂಜುನಾಥ್ ಭಂಡಾರಿಗೆ ಹೃದಯಸ್ಪರ್ಶಿ ಸನ್ಮಾನ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.