Malenadu Mitra
ರಾಜ್ಯಶಿವಮೊಗ್ಗ

ಕಾರಿಗೆ ಟಿಪ್ಪರ್ ಡಿಕ್ಕಿ ಇಬ್ಬರು ಸಾವು


ಕಾರು ಮತ್ತು ಟಿಪ್ಪರ್ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟ ದಾರುಣ ಘಟನೆ ಭದ್ರಾವತಿ ತಾಲೂಕಿನ ಮಾಚೇನಹಳ್ಳಿ ಡೈರಿ ಸಮೀಪ ಗುರುವಾರ ನಡೆದಿದೆ.
ಅಪಘಾತದಲ್ಲಿ ಭದ್ರಾವತಿ ನಗರದ ಪೇಪರ್ ಟೌನ್ ನಿವಾಸಿಗಳಾಗಿರುವ ಷಣ್ಮುಖ(39) ಹಾಗೂ ರಾಮಚಂದ್ರ(40) ಎಂಬುವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಷಣ್ಮುಖ ಹಾಗೂ ರಾಮಚಂದ್ರ ಅವರು ಕೆಲಸದ ನಿಮಿತ್ತ ಭದ್ರಾವತಿಯಿಂದ ತೀರ್ಥಹಳ್ಳಿಗೆ ಕಾರಿನಲ್ಲಿ ಹೊರಟಿದ್ದರು. ಇವರು ಸಂಚರಿಸುತ್ತಿದ್ದ ಕಾರು ಮಾಚೇನಹಳ್ಳಿ ಡೈರಿಯ ಬಳಿ ತಲುಪಿದಾಗ ಶಿವಮೊಗ್ಗದಿಂದ ಭದ್ರಾವತಿ ಕಡೆಗೆ ಸಾಗುತ್ತಿದ್ದ ಟಿಪ್ಪರ್ ಲಾರಿ ಡಿವೈಡರ್ ದಾಟಿ ಬಂದು ಕಾರಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಇಬ್ಬರೂ ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
ಭದ್ರಾವತಿಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Related posts

ನಾನು ಜನರ ಜಿಲ್ಲಾಧಿಕಾರಿಯಾಗಿ ಕೆಲಸ ಮಾಡುವೆ: ಡಾ.ಸೆಲ್ವಮಣಿ

Malenadu Mirror Desk

ಸಾಸ್ವೆಹಳ್ಳಿ ಸತೀಶ್ ರ ಎರಡು ಕೃತಿ ಬಿಡುಗಡೆ

Malenadu Mirror Desk

ನ್ಯಾಯಯುತ ಹಕ್ಕುಗಳನ್ನು ಪಡೆಯಲು ಈಡಿಗ ಸಮಾಜ ಸಂಘಟಿತವಾಗಬೇಕು, ಸಾರಗನ ಜಡ್ಡು ಕಾರ್ತಿಕೇಯ ಕ್ಷೇತ್ರದ ಯೋಗೇಂದ್ರ ಗುರೂಜಿ ಅಭಿಮತ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.